2nd PUC Exam 2021 Postponed: ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ; ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್​

KSEB 2nd PUC Exam 2021: ಮೇ 24ರಿಂದ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ ಇರಲಿದೆ ಎಂದು ಇದೇ ವೇಳೆ ಮಾಹಿತಿ ನೀಡಿದ್ದಾರೆ.

2nd PUC Exam 2021 Postponed: ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ; ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್​
ಸಾಂದರ್ಭಿಕ ಚಿತ್ರ
Follow us
Skanda
|

Updated on:May 04, 2021 | 3:13 PM

ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಭೀತಿ ಹೆಚ್ಚುತ್ತಿರುವುದರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮೇ 24ರಿಂದ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಪರೀಕ್ಷಾ ದಿನಾಂಕಗಳನ್ನು 15-20 ದಿನಗಳ ಮುನ್ನವೇ ಪ್ರಕಟಿಸಲಾಗುತ್ತದೆ. ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ ಇರಲಿದೆ ಎಂದು ಇದೇ ವೇಳೆ ಮಾಹಿತಿ ನೀಡಿದ್ದಾರೆ.

ಮೇ 24ರಿಂದ ಜೂ.16ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ರಾಜ್ಯಾದ್ಯಂತ 1047 ಕೇಂದ್ರಗಳಲ್ಲಿನ 5562 ಕಾಲೇಜುಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಈ ಬಾರಿ 5,92,816 ಹೊಸ ವಿದ್ಯಾರ್ಥಿಗಳು, 76,422 ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 17,470 ಖಾಸಗಿ ಅಭ್ಯರ್ಥಿಗಳು ಸೇರಿ 68,6708 ಅಭ್ಯರ್ಥಿಗಳು ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದರು.

ಆದರೆ, ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಗಣನೀಯವಾಗಿ ಏರಿಕೆಯಾಗುತ್ತಿರುವುದರಿಂದ ಇಂದು (ಮೇ.4)  ವಿಧಾನಸೌಧದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ಪರೀಕ್ಷಾ ದಿನಾಂಕಗಳನ್ನು ಮುಂದೂಡಲಾಗಿದ್ದು, ಇನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಮನವಿ ಮಾಡಿದ್ದಾರೆ.

ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಪ್ರಮೋಷನ್: ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದು, ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ಇದೇ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದ ಮುನ್ನ ಬ್ರಿಡ್ಜ್ ಕೋರ್ಸ್​ಗಳನ್ನು ನಡೆಸಲಾಗುತ್ತದೆ. ಹಾಗೆಯೇ ಇಲಾಖೆಯ ಯೂಟ್ಯೂಬ್ ಚಾನಲ್​ಗಳ ಮೂಲಕ ಈಗಿನಿಂದಲೇ ಬ್ರಿಡ್ಜ್ ಕೋರ್ಸ್​ಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ: ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುವಂತೆ ಉಪನ್ಯಾಸಕರಿಗೆ ಸೂಚಿಸಲಾಗಿದ್ದು, ವರ್ಕ್ ಫ್ರಂ ಹೋಂ ಕೆಲಸ ಮಾಡಲು ನಿರ್ದೇಶಿಸಲಾಗಿದೆ. ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಇಲಾಖೆಯ ಪಠ್ಯ ಬೋಧನಾ ಕ್ರಮಗಳನ್ನು ಅವರೊಂದಿಗೆ ಚರ್ಚೆ ಮಾಡಲು ತಿಳಿಸಲಾಗಿದೆ.

ಈಗಾಗಲೇ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ರಾಜ್ಯಾದ್ಯಂತ ಕೊವಿಡ್ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವುದು, ಪರೀಕ್ಷೆಗೆ ಸಹಕಾರ ನೀಡಬೇಕಿದ್ದ ಇಲಾಖೆಗಳು ಕೊವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವುದು, ಪರೀಕ್ಷೆ ತೆಗೆದುಕೊಳ್ಳಬೇಕಿದ್ದ ವಿದ್ಯಾರ್ಥಿಗಳು ತಮ್ಮ ತಮ್ಮ ಊರಿನಲ್ಲಿ ವಾಸ್ತವ್ಯ ಹೂಡಿರುವುದು, ವಿದ್ಯಾರ್ಥಿಗಳ ಮತ್ತು ಪೋಷಕರ ಮಾನಸಿಕ ಒತ್ತಡಗಳು ಸೇರಿದಂತೆ ಎಲ್ಲ ಆಯಾಮಗಳನ್ನು ಸಮಗ್ರವಾಗಿ ಚರ್ಚಿಸಿ ಪರೀಕ್ಷೆಯನ್ನು ಮುಂದೂಡುವ ನಿರ್ಧಾರಕ್ಕೆ ಬರಲಾಗಿದೆ.

ಸಿಬಿಎಸ್ಇ ಸೇರಿದಂತೆ ಕೇಂದ್ರ ಮಂಡಳಿ ಪರೀಕ್ಷೆಗಳು ಹಾಗೂ ಮಧ್ಯಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರ, ತಮಿಳುನಾಡು, ಹಿಮಾಚಲ ಪ್ರದೇಶ, ಚತ್ತೀಸ್​ಗಡ, ರಾಜಸ್ಥಾನ, ಪಂಜಾಬ್, ತೆಲಂಗಾಣ ರಾಜ್ಯಗಳ 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯದಲ್ಲೂ 12ನೇ ತರಗತಿ ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೊಂದಿಗೆ ಈ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಪಿಯು ಮಂಡಳಿ ನಿರ್ದೇಶಕಿ ಆರ್. ಸ್ನೇಹಲ್ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ: Karnataka SSLC Classes: ಮೇ 4ರವರೆಗೆ ಎಸ್​ಎಸ್​ಎಲ್​ಸಿ ತರಗತಿಗಳು ಬಂದ್; ಶಿಕ್ಷಣ ಇಲಾಖೆ ಆದೇಶ

IPL 2021 Suspended: ಐಪಿಎಲ್​​ 2021 ಸ್ಥಗಿತ; ಈ ಬಾರಿ ಯಾರಿಗೂ ಕಪ್​ ಇಲ್ಲ!

Published On - 2:49 pm, Tue, 4 May 21

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?