ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ (Monsoon Rain) ಕೊರತೆ ಹಾಗೂ ವಾಯವ್ಯ ದಿಕ್ಕಿನಿಂದ ಗಾಳಿ ಬೀಸುತ್ತಿ ರುವ ಪರಿಣಾಮ ಗರಿಷ್ಠ ಉಷ್ಣಾಂಶದಲ್ಲಿ (Temperature) ವಾಡಿಕೆಗಿಂತ ಸರಾಸರಿ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಿದೆ. ಜೂನ್ನಿ೦ದ ಈವರೆಗೆ ಮು೦ಗಾರು ಅವಧಿಯಲ್ಲಿ ರಾಜ್ಯದಲ್ಲಿ 666 ಮಿ.ಮೀ. ಮಳೆಯಾಗಬೇಕಾಗಿತ್ತು. ಆದರೆ, ರಾಜ್ಯದಲ್ಲಿ ಈವರೆಗೆ ಕೇವಲ 490ಮಿ.ಮೀ.ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಗಸ್ಟ್ ತಿಂಗಳಿನಲ್ಲಿಯೇ ಶೇ.23ರಷ್ಟು ಮಳೆ ಕೊರತೆ ಉಂಟಾಗಿದೆ. ಕಳೆದ ಜುಲೈ ಕೊನೆಯ ವಾರದಲ್ಲಿ ರಾಜ್ಯದಲ್ಲಿ ಒಂದಿಷ್ಟು ಉತ್ತಮ ಮಳೆಯಾಗಿತ್ತು. ಅದಾದ ಬಳಿಕ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಹೀಗಾಗಿ, ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿದೆ. ಇದರಿಂದ ರಾಜ್ಯದಲ್ಲಿ ಉಷ್ಣಾಂಶದಲ್ಲಿ ಹೆಚ್ಚಳವಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ತಾಪಮಾನ ಏರಿಕೆ | |||
ಜಿಲ್ಲೆ | ಈಗಿನ ತಾಪಮಾನ | ವಾಡಿಕೆ | ಏರಿಕೆ |
ಬೆಂಗಳೂರು | 31.8 | 28 | 3.8 |
ಮಡಿಕೇರಿ | 29 | 22 | 7 |
ಮಂಡ್ಯ | 34 | 29.4 | 4.6 |
ಶಿರಸಿ | 33.8 | 29.7 | 4.1 |
ಮೈಸೂರು | 31.5 | 25.7 | 2.6 |
ಬೀದರ್ | 31.1 | 29.4 | 2.2 |
ಬೆಂಗಳೂರಿನಲ್ಲಿ 31.ಸೆಂ.ಮೀ ವಾಡಿಕೆ ಮಳೆಯಾಗಬೇಕಿತ್ತು, ಆದರೆ 22.6 ಸೆಂ ಮಳೆಯಾಗಿದೆ. ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಉಷ್ಣಾಂಶ 28.3ಡಿಗ್ರಿ ಇರಬೇಕಿತ್ತು, ಆದರೆ ಈ ಬಾರಿ 32 ಡಿಗ್ರಿ ಸೆಲ್ಸಿಯಸ್ವರೆಗೂ ದಾಖಲಾಗುತ್ತಿದೆ. ಇನ್ನು ಸೆಪ್ಟೆಂಬರ್ 8ರಿಂದ ಎರಡು ವಾರಗಳ ಕಾಲ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ ಸಾಧ್ಯತೆ
ತಾಪಮಾನದಲ್ಲಿ ಏರಿಕೆಯಿಂದ ಮಕ್ಕಳಗೆ ಪದೇ ಪದೇ ಜ್ವರ ಬರುತ್ತಿದೆ. ವಯಸ್ಸಾದವರಲ್ಲಿ ಹೀಟ್ ಸ್ಟ್ರೋಕ್ ಹಾಗೂ ಬಿಪಿ ಲೋ, ನಿತ್ರಾಣದಂತಹ ಸಮಸ್ಯೆ ಕಾಡುತ್ತಿದೆ. ವಯೋವೃದ್ಧರು ಮಧ್ಯಾಹ್ನ ಸಮಯದಲ್ಲಿ ಹೊರಗಡೆ ಓಡಾಡಬಾರದು. ಮಕ್ಕಳಲ್ಲಿ ಜ್ವರ ಆಯಾಸ ಹೆಚ್ಚಾಗುತ್ತಿದೆ. ಹೀಗಾಗಿ ಮಕ್ಕಳು ಹೆಚ್ಚು ನೀರು ಕುಡಿಯಬೇಕು. ಗರ್ಭಿಣಿಯರು ಕೂಡ ಆದಷ್ಟು ಬಿಸಿಲಿಗೆ ಹೊರಗಡೆ ಬರದಂತೆ ವೈದ್ಯರು ಸಲಹೆ ನೀಡಿದ್ದಾರೆ.
ಇನ್ನು ಮಳೆ ಏನಾದರು ಬಂದರೇ ನದಿಗಳಿಗೆ ಹೊಸ ನೀರು ಹರಿದು ಬರುತ್ತದೆ. ಈ ನೀರು ಕುಡಿಯೋದರಿಂದ ವಾಂತಿ ಭೇಧಿ ಪ್ರಕರಣಗಳು ಹೆಚ್ಚಾಗಬಹುದು. ಮಳೆ ಬಂದಾಗ ನೀರು ಸಂಗ್ರಹಣೆಯಾದರೆ ಸೊಳ್ಳೆ ಉತ್ಪತ್ತಿಯಾಗಿ ಡೆಂಗ್ಯೂ ರೋಗ ಬರುವ ಸಾಧ್ಯತೆ ಇದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:29 am, Wed, 30 August 23