ಪ್ರತ್ಯೇಕ ಘಟನೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವು

ಎಲ್ಲಾವುದಕ್ಕೂ ಆತ್ಮಹತ್ಯೆ ಪರಿಹಾರವಲ್ಲ ಎನ್ನುವುದು ತಿಳಿದೇ ಜನರು ಆತ್ಮಹತ್ಯೆಗೆ ಶಾರಣಾಗುತ್ತಿದ್ದಾರೆ. ಅದರಂತೆ ಇಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ಮೇಲಿಂದ ಬಿದ್ದು ಮಹಿಳೆ ಮೃತಪಟ್ಟಿದ್ದಾಳೆ.

ಪ್ರತ್ಯೇಕ ಘಟನೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವು
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: Jun 23, 2023 | 11:00 AM

ಚಾಮರಾಜನಗರ: ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ(suicide) ಶರಣಾಗಿರುವ ಘಟನೆ ಚಾಮರಾಜನಗರ(Chamarajanagar) ತಾಲೂಕಿನ‌ ಬೇಡರಪುರ ಗ್ರಾಮದಲ್ಲಿ ನಡೆದಿದೆ. ಮಹದೇವಸ್ವಾಮಿ(48), ಸವಿತಾ, (40), ಸಿಂಚನಾ(13) ಆತ್ಮಹತ್ಯೆಗೆ ಶರಣಾದವರು. ಇಂದು (ಜೂನ್ 23) ಬೆಳಗ್ಗೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತ್ತಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದ್ರೆ, ಆತ್ಮಹತ್ಯೆಗೆ ನಿಖರ‌ ಕಾರಣ ತಿಳಿದುಬಂದಿಲ್ಲ. ಇಂದು ಬೆಳಿಗ್ಗೆ ಪಕ್ಕದ ಮನೆಯವರು ಹೋಗಿದ್ದಾಗ ಬೆಳಕಿಗೆ ಬಂದ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ಮಾಡಿ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: Hassan News: ಅಯ್ಯೋ ವಿಧಿಯೇ! ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವು

ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವು

ಬೆಂಗಳೂರು: ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಮಹಿಳೆ ಮೃತಪಟ್ಟಿರುವ ಘಟನೆ ಬೆಂಗಳೂರಿನ ಯಲಹಂಕ ಬಳಿಯ ನಾಗೇನಹಳ್ಳಿಯಲ್ಲಿ ನಡೆದಿದೆ. ಅಮೃತಾ ಶರ್ಮ 27 ಮೃತಪಟ್ಟ ಯುವತಿ. ಈಕೆ ಲಖನೌ ಮೂಲದ ಮಹಿಳೆ ಕುಟುಂಬದ ಜೊತೆ ಖಾಸಗಿ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದಳು. ಆದ್ರೆ, ನಿನ್ನೆ (ಜೂನ್ 22) ರಾತ್ರಿ ಹತ್ತು ಗಂಟೆ ಸುಮಾರಿಗೆ ಏಕಾಏಕಿ ಅಪಾರ್ಟ್‌ಮೆಂಟ್ ಹತ್ತನೇ ಮಹಡಿಯಿಂದ ಜಿಗಿದಿದ್ದಾಳೆ.

ಸ್ಥಳೀಯರು ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಅಮೃತಾ ಶರ್ಮ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಅಂಬೇಡ್ಕರ್ ಅಸ್ಪತ್ರೆಗೆ ರವಾನಿಸಲಾಗಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದ ಈಕೆ ಎರಡು ವರ್ಷದ ಹಿಂದೆ ವಿವಾಹವಾಗಿದ್ದಳು. ಅಲ್ಲದೇ ಇತ್ತೀಚಿಗೆ ತನ್ನ ತಂದೆಯನ್ನು ಕಳೆದುಕೊಂಡು ನೋವಿನಲ್ಲಿದ್ದರು. ಸದ್ಯ ಮೃತಳ ತಾಯಿ ಲಖನೌನಿಂದ ಬೆಂಗಳೂರಿಗೆ ಆಗಮಿಸುತಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ