AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಮ್​ಡೆಸಿವಿರ್ ಇಂಜೆಕ್ಷನ್​ 25 ಸಾವಿರಕ್ಕೆ ಮಾರುತ್ತಿದ್ದ ಮೂವರ ಬಂಧನ

ಬಂಧಿತರು ಬೆಂಗಳೂರಿನಲ್ಲಿ ಔಷಧ ಖರೀದಿಸಿ ಕಲಬುರಗಿ ಜಿಲ್ಲೆಯಲ್ಲಿ ಒಂದು ಬಾಟಲ್​ನ್ನು25 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ರೆಮ್​ಡೆಸಿವಿರ್ ಇಂಜೆಕ್ಷನ್​  25 ಸಾವಿರಕ್ಕೆ ಮಾರುತ್ತಿದ್ದ ಮೂವರ ಬಂಧನ
ರೆಮ್​ಡೆಸಿವಿರ್ ಇಂಜೆಕ್ಷನ್ (ಪ್ರಾತಿನಿಧಿಕ ಚಿತ್ರ)
Follow us
guruganesh bhat
|

Updated on: Apr 23, 2021 | 11:30 PM

ಕಲಬುರ್ಗಿಕಾಳಸಂತೆಯಲ್ಲಿ ರೆಮಿಡೆಸಿವಿರ್ ಇಂಜೆಕ್ಷನ್‌ಗಳನ್ನು ಮಾರಾಟ ಮಾಡುತ್ತಿದ್ದ ದಂದೆ ಬಯಲಾಗಿದ್ದುಕಲಬುರ್ಗಿ ರೌಡಿ ನಿಗ್ರಹದಳ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆಬಂಧಿತರನ್ನು ಭೀಮಾಶಂಕರ್‌ ಆರಬೋಳ (27), ಲಕ್ಷ್ಮೀಕಾಂತ್ ಮುಲಗೆ (20), ಜಿಲಾನಿಖಾನ್ (35) ಎಂದು ಗುರುತಿಸಲಾಗಿದೆಬಂಧಿತರಾದ ಭೀಮಾಶಂಕರ್ ಎಕ್ಸರೇ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದುಲಕ್ಷ್ಮೀಕಾಂತ್ ಸಿದ್ದಗಂಗ ಮೆಡಿಕಲ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ.  ಇನ್ನೋರ್ವ ಬಂಧಿತ ವ್ಯಕ್ತಿ ಜಿಲಾನಿಖಾನ್ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳಿಂದ 14 ರೆಮಿಡೆಸಿವಿರ್ ಇಂಜೆಕ್ಷನ್‌ ಮತ್ತು 3 ಮೊಬೈಲ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳು ಬೆಂಗಳೂರು ಮತ್ತು ಬೆಳಗಾವಿಗಳಲ್ಲಿರುವ ಪರಿಚಯಸ್ಥರಿಂದ ರೆಮಿಡೆಸಿವಿರ್ ಇಂಜೆಕ್ಷನ್‌ ಖರೀದಿ ಮಾಡುತ್ತಿದ್ದರು. ಬೆಂಗಳೂರಿನಲ್ಲಿ ಔಷಧ ಖರೀದಿಸಿ ಕಲಬುರಗಿ ಜಿಲ್ಲೆಯಲ್ಲಿ ಒಂದು ಬಾಟಲ್​ನ್ನು25 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಎಸಿಪಿ ಅಂಶುಕುಮಾರ್ ನೇತೃತ್ವದಲ್ಲಿ ರೌಡಿನಿಗ್ರಹ ದಳದ ಪಿಎಸ್‌ಐ ವಾಹಿದ್ ಕೋತ್ವಾಲ್‌ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕರ್ನಾಟಕಕ್ಕೆ ಹೆಚ್ಚುವರಿ ರೆಮ್​ಡೆಸಿವಿರ್ ಒದಗಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶ

ಮೈಲಾನ್ ರೆಮ್​ಡೆಸಿವಿರ್ ಉತ್ಪಾದನಾ ಘಟಕಕ್ಕೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಸದಾನಂದ ಗೌಡ ಶುಕ್ರವಾರ ಭೇಟಿ ನೀಡಿದರು. ಈ ವೇಳೆ ರಾಜ್ಯದ ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿಯಾಗಿ ಔಷಧಿ ಒದಗಿಸಲು ಕಂಪನಿ ಸಮ್ಮತಿಸಿತು. ರಾಜ್ಯಕ್ಕೆ ಇಂದು 15,000 ರೆಮ್​ಡೆಸಿವಿರ್ ಬಾಟಲಿಗಳನ್ನು ಒದಗಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಕೊರೊನಾ ಚಿಕಿತ್ಸೆಯಲ್ಲಿ ಬಳಸುವ ರೆಮ್​ಡೆಸಿವಿರ್ ಉತ್ಪಾದನೆ ಮತ್ತು ಪೂರೈಕೆ ಏರುಪೇರಾದ ಕಾರಣ ಕಳೆದ ವಾರದಿಂದ ಕೇಂದ್ರ ಸರ್ಕಾರವು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಫಾರ್ಮಾ ಕಂಪನಿಗಳು ತಮ್ಮ ರೆಮ್​ಡೆಸಿವಿರ್ ಉತ್ಪಾದನೆಯಲ್ಲಿ ಶೇ 70ರಷ್ಟನ್ನು ಕೇಂದ್ರ ಸರ್ಕಾರವು ಸೂಚಿಸುವ ರಾಜ್ಯಗಳಿಗೆ ನಿಗದಿತ ಪ್ರಮಾಣದಲ್ಲಿ ಪೂರೈಕೆ ಮಾಡಬೇಕಾಗುತ್ತದೆ. ಇನ್ನುಳಿದ ಶೇ 30ರಷ್ಟು ಉತ್ಪಾದನೆಯ ವಿತರಣೆಯನ್ನು ಕಂಪನಿಗಳ ವಿವೇಚನೆಗೆ ಬಿಡಲಾಗಿದೆ.

ಕಳೆದ ಬುಧವಾರ ಕೇಂದ್ರವು ಕರ್ನಾಟಕಕ್ಕೆ ಏಪ್ರಿಲ್ 30ರವರೆಗಿನ ಬಳಕೆಗಾಗಿ 25,352 ರೆಮ್​ಡೆಸಿವಿರ್ ಬಾಟಲಿಗಳನ್ನು ಹಂಚಿಕೆ ಮಾಡಿತ್ತು. ಆದರೆ ರಾಜ್ಯವು ಹೆಚ್ಚುವರಿ ಬೇಡಿಕೆ ಸಲ್ಲಿಸಿದ ಹಿನ್ನೆಲೆಯಲ್ಲಿ ಔಷಧ ಇಲಾಖೆಯನ್ನೂ ನಿರ್ವಹಿಸುವ ಸದಾನಂದ ಗೌಡರು ಮಧ್ಯಪ್ರವೇಶಿಸಬೇಕಾಗಿ ಬಂತು. ಹೀಗಾಗಿ ರಾಜ್ಯಕ್ಕೆ ನಿನ್ನೆ ಗುರುವಾರ ಹೆಚ್ಚುವರಿಯಾಗಿ 25,000 ರೆಮ್​ಡೆಸಿವಿರ್ ಬಾಟಲಿಗಳ ಹಂಚಿಕೆಯಾಯಿತು. ಈ ವಾರದ ಬಳಕೆಗಾಗಿ ರಾಜ್ಯಕ್ಕೆ ಹಂಚಿಕೆಯಾದ ಒಟ್ಟು 50,352 ರೆಮ್​ಡೆಸಿವಿರ್​ನಲ್ಲಿ ಮುಕ್ಕಾಲು ಭಾಗವನ್ನು ಮೈಲಾನ್ ಕಂಪನಿಯೇ ಪೂರೈಸಬೇಕಿದೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

(3 people arrested in Kalaburagi for selling Remdesivir injection in black market)

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ