ಜಿಂದಾಲ್​ಗೆ 3 ಸಾವಿರ ಎಕರೆ ಜಮೀನು ಮಾರಾಟ: ಪರಮೇಶ್ವರ ಹೇಳಿದ್ದಿಷ್ಟು

ಬಳ್ಳಾರಿ ಬಳಿ ಜೆಎಸ್​ಡಬ್​ಲ್ಯೂ (ಜಿಂದಾಲ್​) ಸ್ಟೀಲ್​ ಕಂಪನಿಗೆ 3,667.31 ಎಕರೆ ಜಮೀನು ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ. ಆದರೆ ಬಿಜೆಪಿ ಸರ್ಕಾರ ಮಾರಾಟ ಮಾಡಲು ಮುಂದಾದಾಗ ಕಾಂಗ್ರೆಸ್​ ವಿರೋಧ ಮಾಡಿತ್ತು. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಜಿಂದಾಲ್​ಗೆ 3 ಸಾವಿರ ಎಕರೆ ಜಮೀನು ಮಾರಾಟ: ಪರಮೇಶ್ವರ ಹೇಳಿದ್ದಿಷ್ಟು
ಜಿ ಪರಮೇಶ್ವರ್​
Follow us
Sunil MH
| Updated By: ವಿವೇಕ ಬಿರಾದಾರ

Updated on:Aug 23, 2024 | 12:07 PM

ಬೆಂಗಳೂರು, ಆಗಸ್ಟ್​ 23: ಬಳ್ಳಾರಿ ಬಳಿ ಜೆಎಸ್​ಡಬ್​ಲ್ಯೂ (ಜಿಂದಾಲ್​) ಸ್ಟೀಲ್​ ಕಂಪನಿಗೆ 3,667.31 ಎಕರೆ ಜಮೀನು ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ. ಈ ಹಿಂದಿನ ಬಿಜೆಪಿ ಸರ್ಕಾರ ಮಾರಾಟ ಮಾಡಲು ಮುಂದಾದಾಗ ನಾವು ವಿರೋಧ ಮಾಡಿದ್ದು ನಿಜ ಎಂದು ಗೃಹ ಸಚಿವ ಜಿ. ಪರಮೇಶ್ವರ್ (G Parmeshwara)​ ಹೇಳಿದರು. ಬೆಂಗಳೂರಿನಲ್ಲಿ (Bengaluru) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಾಗ ಮಾರಾಟ ಮಾಡುವುದಕ್ಕಿಂತ ಮುನ್ನ, ಜಿಂದಾಲ್​ ಕಂಪನಿಗೆ ಕೆಲವು ಪ್ರಶ್ನೆಗಳನ್ನು ನಾವು ಕೇಳಿದ್ದೇವು. ಅದಕ್ಕೆ ಕಂಪನಿ ಸಮರ್ಪಕವಾಗಿ ಉತ್ತರ ನೀಡಿದೆ. ನ್ಯಾಯಾಲಯ ಕೂಡ ಆದೇಶ ಮಾಡಿದೆ. ಹೀಗಾಗಿ ಮಾರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.

ದಿ ಗ್ಲೋಬಲ್ ಇನ್ವೆಸ್ಟರ್ಸ್ ಮೀಟ್ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮ ಮಾಡುತ್ತೇವೆ. ಪ್ರಪಂಚದಾದ್ಯಂತ ಇರುವ ಉದ್ಯಮಿಗಳು ಇದರಲ್ಲಿ ಭಾಗಿಯಾಗುತ್ತಾರೆ. ರಾಜ್ಯದಲ್ಲಿ ಕಂಪನಿ ಆರಂಭಿಸಲು ಅವರಿಗೆ ನೀರು, ಜಾಗ, ವಿದ್ಯುತ್​ನಲ್ಲಿ ಒಂದಿಷ್ಟು ವಿನಾಯಿತಿ ನೀಡಲಾಗುತ್ತದೆ. ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಉಚಿತವಾಗಿ ಭೂಮಿ ಕೊಡುತ್ತಾರೆ. ಹೀಗಾಗಿ ನಮ್ಮಲ್ಲಿಯೂ ಕೂಡ ಕೆಲವು ವಿನಾಯಿತಿ ನೀಡಬೇಕಾಗುತ್ತದೆ. ಈ ಹಿಂದೆ ಒಂದಿಷ್ಟು ಘಟನೆ ನಡೆದಾಗ ಕಂಪನಿಗಳು ರಾಜ್ಯ ಬಿಟ್ಟು ಹೋಗುತ್ತೇವೆ ಅಂದವು. ಹೀಗಾಗಿ ವಿನಾಯಿತಿ ನೀಡಬೇಕಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: Jindal Steel And Power Limited: ಜಿಂದಾಲ್​ ಸ್ಟೀಲ್​ನಿಂದ ಸೆಪ್ಟೆಂಬರ್ ಕೊನೆ​ ತ್ರೈಮಾಸಿಕಕ್ಕೆ ಸಾರ್ವಕಾಲಿಕ ದಾಖಲೆ ಮಾರಾಟ

ಆರು ಮಸೂದೆಗಳನ್ನು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಕಳಸಿದ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಹೊಂದಾಣಿಕೆ ಇಲ್ಲದಿದ್ದರೆ ಇಂಥ ಬೆಳವಣಿಗೆ ನಡೆಯುತ್ತವೆ. ಒಂದೆರಡು ಮಸೂದೆಗಳ ಬಗ್ಗೆ ಕ್ಲಾರಿಫಿಕೇಷನ್ ಕೇಳಿದ್ದು ಬಿಟ್ಟರೆ, ಹೀಗೆ ಬಲ್ಕ್​ ಆಗಿ ವಾಪಸ್​ ಕಳಿಸಿರಲಿಲ್ಲ. ಸಾಮಾನ್ಯ ಮಸೂದೆಯನ್ನೂ ವಾಪಸ್ ಕಳಿಸಿದ್ದಾರೆ. ನಮ್ಮ ಸರ್ಕಾರದ ವಿರುದ್ಧವಾಗಿ ರಾಜ್ಯಪಾಲರು ಇದ್ದಾರೆ ಅನ್ನೋದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ದೆಹಲಿ ಭೇಟಿ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಪಕ್ಷದ ವರಿಷ್ಠರಿಂದ ಬುಲಾವ್​ ಬಂದಿದೆ, ಹೀಗಾಗಿ ನಾನು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹೋಗುತ್ತಿದ್ದೇವೆ. ಏನು ಚರ್ಚೆ ಆಗುತ್ತೆ ಅಂತ ಗೊತ್ತಿಲ್ಲ. ನನಗೆ ಇಲಾಖೆ ಕೆಲಸ ಕೂಡ ಇದೆ, ಮನೆಗಳಿಗೆ ಹಣ ಕೊಡಿ ಅಂತ ಕೇಂದ್ರ ಸರ್ಕಾರಕ್ಕೆ ಕೇಳಿದ್ವಿ, ಅದರ ಬಗ್ಗೆ ಮಾತನಾಡಲು ಹೋಗುತ್ತಿದ್ದೇನೆ. ಬಿಟ್ಟರೆ, ನಾವ್ಯಾರು ಮೂಡಾದ ವಿವರ ಕೊಡಲು ಹೋಗುತ್ತಿಲ್ಲ. ಆದರೆ ಹೈಕಮಾಂಡ್​ ಭೇಟಿ ಹಿಂದೆ ಸಿಎಂ ಮತ್ತು ಡಿಸಿಎಂ ಅಜೆಂಡಾ ಏನು ಅಂತ ಗೊತ್ತಿಲ್ಲ ಎಂದರು.

ಏನಿದು ಭೂಮಿ ಮಾರಾಟ

ಬಳ್ಳಾರಿ ಬಳಿ ಜೆಎಸ್‌ಡಬ್‌ಲ್ಯೂ ಸ್ಟೀಲ್ ಲಿಮಿಟೆಡ್ (ಜಿಂದಾಲ್) ಕಂಪನಿಗೆ 2006 -07ರಲ್ಲಿ ಗುತ್ತಿಗೆ ಮತ್ತು ಮಾರಾಟದ ಆಧಾರದ ಮಂಜೂರು ಮಾಡಿದ್ದ 3,667.31 ಎಕರೆ ಜಮೀನನ್ನು ಜಿಂದಾಲ್ ಕಂಪೆನಿಗೆ ಶುದ್ದ ಕ್ರಯ ಮಾಡಿಕೊಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಮೂರು ಪಕ್ಷಗಳು ತಾವು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಜಿಂದಾಲ್ ಸಂಸ್ಥೆಗೆ ಈ ಜಮೀನು ಶುದ್ದಕ್ರಯ ಮಾಡಿಕೊಡಲು ಯತ್ನಿಸುವುದು ಹಾಗೂ ಇದಕ್ಕೆ ಆಗ ವಿರೋಧ ಸ್ಥಾನದಲ್ಲಿದ್ದ ಪಕ್ಷಗಳು ತೀವ್ರವಾಗಿ ವಿರೋಧಿಸಿದ್ದ ಚೋದ್ಯ ನಡೆದಿತ್ತು. ಇದೀಗ ಅಧಿಕಾರದಲ್ಲಿರುವ ಕಾಂಗ್ರೆಸ್ ತನ್ನ ಹಳೆ ನಿಲುವು ಬದಲಿಸಿ ಜಿಂದಾಲ್‌ಗೆ ಜಮೀನು ನೀಡುವ ನಿರ್ಧಾರ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:55 am, Fri, 23 August 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ