ಇಂದು ಒಂದೇ ದಿನ 3 ಸಾವಿರ ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು

ಮೇ 10ರಿಂದ ಮೇ 24ರವರೆಗೆ ಲಾಕ್‌ಡೌನ್ ಜಾರಿಯಲ್ಲಿರುವ ಕಾರಣ ಪೊಲೀಸ್ ಅಧಿಕಾರಿಗಳಿಗೆ ನಿಯಮ ಜಾರಿಗೊಳಿಸಲು ಸಂಪೂರ್ಣ ಅಧಿಕಾರ ನೀಡಲು ಸರ್ಕಾರ ನಿರ್ಧರಿಸಿದೆ.

ಇಂದು ಒಂದೇ ದಿನ 3 ಸಾವಿರ ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರಿನಲ್ಲಿ ರಸ್ತೆಗೆ ಇಳಿಯುತ್ತಿರುವ ವಾಹನಗಳನ್ನು ತಡೆಯುತ್ತಿರುವ ಪೊಲೀಸರು
Follow us
guruganesh bhat
|

Updated on: May 08, 2021 | 9:34 PM

ಬೆಂಗಳೂರು: ನಾಳೆಯಿಂದ ಕರ್ನಾಟಕದಲ್ಲಿ ಲಾಕ್​ಡೌನ್​ ಆರಂಭವಾಗಲಿದೆ. ಆದರೆ ಇಂದಿನಿಂದಲೇ ಬೆಂಗಳೂರು ಪೊಲೀಸರು ರಸ್ತೆಗಿಳಿಯುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ರಸ್ತೆಗೆ ವಾಹನ ಸಮೇತ ಇಳಿಯುವವರನ್ನು ನಿಯಂತ್ರಿಸಲು ಮುಂದಾಗಿರುವ ಪೊಲಿಸ್ ಸಿಬ್ಬಂದಿ ಇಂದು ಒಂದೇ ದಿನ ಬರೋಬ್ಬರಿ 3 ಸಾವಿರ ವಾಹನಗಳನ್ನು ಸೀಜ್ ಮಾಡಿದ್ದಾರೆ. 2,723 ದ್ವಿಚಕ್ರ ವಾಹನ, 171 ಆಟೋ, 106 ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೇ 10ರಿಂದ ಮೇ 24ರವರೆಗೆ ಲಾಕ್‌ಡೌನ್ ಜಾರಿಯಲ್ಲಿರುವ ಕಾರಣ ಪೊಲೀಸ್ ಅಧಿಕಾರಿಗಳಿಗೆ ನಿಯಮ ಜಾರಿಗೊಳಿಸಲು ಸಂಪೂರ್ಣ ಅಧಿಕಾರ ನೀಡಲು ಸರ್ಕಾರ ನಿರ್ಧರಿಸಿದೆ. ನಾಳೆ ಬೆಳಗ್ಗೆಯಿಂದಲೇ ಕಠಿಣ ಕ್ರಮಕ್ಕೆ ರಾಜ್ಯದ ಪೊಲೀಸರು ಸಜ್ಜುಗೊಂಡಿದ್ದು, ಸುಖಾಸುಮ್ಮನೆ ಬೀದಿಗಿಳಿಯುವವರಿಗೆ ಲಾಠಿ ರುಚಿ ತೋರಿಸಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಈ ಕುರಿತು ಮಾಹಿತಿ ನೀಡಿದ್ದಾರೆ.

ಈ ಕುರಿತು ಬೆಂಗಳೂರು ನಗರದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ,ಎಲ್ಲಾ ವಿಭಾಗದ ಡಿಸಿಪಿಗಳಿಗೆ ಕಮಿಷನರ್ ಕಮಲ್‌ಪಂತ್ ಖಡಕ್ ಸೂಚನೆ ನೀಡಿದ್ದಾರೆ. ನಾಳೆ 10 ಗಂಟೆ ಬಳಿಕ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಸೂಚಿಸಿದ್ದಾರೆ. ಕೊವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ರೀತಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ಈ ಅವಧಿಯಲ್ಲಿ ಒಬ್ಬನೇ ವ್ಯಕ್ತಿ ರಸ್ತೆಯಲ್ಲಿ ಓಡಾಡೋಕೆ ಬಿಡಲ್ಲ. ಪೊಲೀಸರಿಗೆ ಏನು ಹೇಳಬೇಕೋ ಹೇಳಿದ್ದೀನಿ. ಜನರು ಸಹಕಾರ ನೀಡದಿದ್ದರೆ ಇನ್ನೂ ಏನೆಲ್ಲಾ ಮಾಡಬೇಕು, ಅದನ್ನು ಮಾಡೋಕೆ ನಾನು ಸಿದ್ಧನಿದ್ದೇನೆ. ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾದ್ದು ಜನರ ಕರ್ತವ್ಯ. ಅದನ್ನು ಅರ್ಥ ಮಾಡಿಕೊಳ್ಳಬೇಕು ಎಲ್ಲರೂ ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಲಾಕ್​ಡೌನ್ ನಿಯಮಗಳನ್ನು ಈ ಬಾರಿ ಅತ್ಯಂತ ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕರ್ನಾಟಕದಲ್ಲಿ ಕೊವಿಡ್ ಸೋಂಕಿತರ ಸಂಖ್ಯೆ ತೀವ್ರವಾಗಿ ಹೆಚ್ಚುತ್ತಿದ್ದು, ಸೋಂಕು ಹೆಚ್ಚಳವನ್ನು ಕಟ್ಟಿಹಾಕಲು ಸರ್ಕಾರ ಹರಸಾಹಸ ಪಡುತ್ತಿದೆ.

ಪ್ರತಿ ವಾರ್ಡ್‌ನಲ್ಲಿ ನಿತ್ಯ 100-150 ಕೇಸ್‌ಗಳು ಬರುತ್ತಿವೆ ಬೆಂಗಳೂರು ನಗರದಲ್ಲಿ ರಾಜ್ಯದ ಅರ್ಧದಷ್ಟು ಕೇಸ್‌ಗಳಿವೆ. ಬೆಂಗಳೂರಿನಲ್ಲಿ 141 ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ವಾರ್ಡ್‌ವಾರು ಜನಪ್ರತಿನಿಧಿಗಳು, ಸ್ವಯಂ ಸೇವಕರು, ಅಧಿಕಾರಿಗಳನ್ನೊಳಗೊಂಡ 50 ಜನರ ಸಮಿತಿ ರಚಿಸುತ್ತೇವೆ. ಈ ಸಮಿತಿ ವಾರ್ಡ್‌ವಾರು ಕೇಸ್ ತಡೆಯಲು ಶ್ರಮಿಸುತ್ತದೆ. ಪ್ರತಿ ವಾರ್ಡ್‌ನಲ್ಲಿ ನಿತ್ಯ 100-150 ಕೇಸ್‌ಗಳು ಬರುತ್ತಿವೆ. ವಾರ್ಡ್‌ಗಳನ್ನು ವಲಯ ಮಟ್ಟದಲ್ಲೇ ನಿರ್ವಹಿಸುತ್ತಿದ್ದಾರೆ. ಇದನ್ನು ತಪ್ಪಿಸಲು ವಾರ್ಡ್ ಸಮಿತಿಯನ್ನು ರಚಿಸಲಾಗಿದೆ ಎಂದು ವಿಧಾನಸೌಧದಲ್ಲಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಶೇ.85ರಷ್ಟು ಜನ ಹೋಮ್ ಐಸೋಲೇಷನ್‌ನಲ್ಲಿದ್ದಾರೆ. ಹೋಮ್ ಐಸೋಲೇಷನ್‌ನಲ್ಲಿರುವವರಿಗೆ ಕಿಟ್ ಕೊಡ್ತೇವೆ. ಟೆಲಿ ಕನ್ಸಲ್ಟೆನ್ಸಿ ಮೂಲಕ ಅವರ ಆರೋಗ್ಯ ವಿಚಾರಿಸುತ್ತೇವೆ ಎಂದೂ ಲಿಂಬಾವಳಿ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಆಮ್ಲಜನಕ ಪೂರೈಕೆ, ಉಪಚುನಾವಣೆ ಮತ್ತು ಕೊವಿಡ್​ ನಿರ್ವಹಣೆ; ಬೊಮ್ಮಾಯಿ ಮತ್ತು ವಿಜಯೇಂದ್ರರಿಂದ ವರದಿ ಪಡೆದ ಅಮಿತ್ ಶಾ

ಆಕ್ಸಿಜನ್ ಪೂರೈಕೆಗಾಗಿ 12 ಸದಸ್ಯರ ಟಾಸ್ಕ್​ಫೋರ್ಸ್ ರಚಿಸಿದ ಸುಪ್ರೀಂ; ಕರ್ನಾಟಕದ ಡಾ.ದೇವಿ ಪ್ರಸಾದ್ ಶೆಟ್ಟಿಗೂ ಸ್ಥಾನ

(3 thousand vehicles are Seized today in Bengaluru police)

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ