ಕೊರೊನಾಗೆ ಬಲಿಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ 30 ಲಕ್ಷ ಪರಿಹಾರ: ಸಚಿವೆ ಶಶಿಕಲಾ ಜೊಲ್ಲೆ

ಪ್ರತಿ ಜಿಲ್ಲೆಯಲ್ಲೂ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್​ಗಳನ್ನು ತೆರೆಯಲಾಗುತ್ತದೆ. 1098 ಸಹಾಯವಾಣಿ ಪ್ರಾರಂಭವಾಗಿದೆ. ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಮಕ್ಕಳಿಗೆ ಎಲ್ಲ ರೀತಿ ವ್ಯವಸ್ಥೆ ಮಾಡುತ್ತೇವೆ. ತುಂಬಾ ಚಿಕ್ಕ ಮಕ್ಕಳಿದ್ದರೂ ವ್ಯವಸ್ಥೆ ಮಾಡಲಾಗುವುದು. ಮಕ್ಕಳನ್ನು ದತ್ತು ಪಡೆಯುವಾಗ ದುರುಪಯೋಗವಾಗುತ್ತಿದೆ.

ಕೊರೊನಾಗೆ ಬಲಿಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ 30 ಲಕ್ಷ ಪರಿಹಾರ: ಸಚಿವೆ ಶಶಿಕಲಾ ಜೊಲ್ಲೆ
ಸಚಿವೆ ಶಶಿಕಲಾ ಜೊಲ್ಲೆ
Follow us
sandhya thejappa
|

Updated on:May 18, 2021 | 12:06 PM

ಬೆಂಗಳೂರು: ಕೊರೊನಾಗೆ ಬಲಿಯಾದ 12 ಅಂಗನವಾಡಿ ಕಾರ್ಯಕರ್ತೆಯರಿಗೆ 30 ಲಕ್ಷ ಪರಿಹಾರ ಧನ ಒದಗಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಕೊರೊನಾದಿಂದ ತಂದೆ ಅಥವಾ ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್ ಸ್ಥಾಪನೆ ಮಾಡಲಾಗುವುದು. ಕೊರೊನಾ ಎರಡನೇ ಅಲೆ ತೀವ್ರವಾಗಿದೆ. ಎರಡನೇ ಅಲೆಯಲ್ಲಿ ಪೋಷಕರು ತೀರಿ ಹೋಗಿ ಮಕ್ಕಳು ಅನಾಥರಾಗಿರುವ ಪ್ರಕರಣಗಳಿವೆ. ಹೀಗಾಗಿ ಅನಾಥ ಮಕ್ಕಳಿಗೆ ಸಹಾಯ ಮಾಡುವ ಉದ್ದೇಶವಿದೆ ಎಂದು ತಿಳಿಸಿದರು.

ಪ್ರತಿ ಜಿಲ್ಲೆಯಲ್ಲೂ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್​ಗಳನ್ನು ತೆರೆಯಲಾಗುತ್ತದೆ. 1098 ಸಹಾಯವಾಣಿ ಪ್ರಾರಂಭವಾಗಿದೆ. ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಮಕ್ಕಳಿಗೆ ಎಲ್ಲ ರೀತಿ ವ್ಯವಸ್ಥೆ ಮಾಡುತ್ತೇವೆ. ತುಂಬಾ ಚಿಕ್ಕ ಮಕ್ಕಳಿದ್ದರೂ ವ್ಯವಸ್ಥೆ ಮಾಡಲಾಗುವುದು. ಮಕ್ಕಳನ್ನು ದತ್ತು ಪಡೆಯುವಾಗ ದುರುಪಯೋಗವಾಗುತ್ತಿದೆ. ಹೀಗಾಗಿ ದತ್ತು ಪಡೆಯುವಾಗ ಮಾಹಿತಿ ನೀಡಬೇಕು. 1098ಗೆ ಕರೆ ಮಾಡಬೇಕು ಅಥವಾ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ನಿಯಮಾನುಸಾರವೇ ಮಕ್ಕಳನ್ನು ದತ್ತು ಪಡೆಯಬೇಕು ಎಂದು ಹೇಳಿದರು.

ಕೊರೊನಾ 2ನೇ ಅಲೆಯಲ್ಲಿ ಇಬ್ಬರು ಮಕ್ಕಳು ಅನಾಥವಾಗಿವೆ. ಚಾಮರಾಜನಗರ, ಮಂಡ್ಯದಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ. ಅನಾಥ ಮಗುವಿನ ಯೋಗಕ್ಷೇಮ, ಆರೋಗ್ಯ ಗಮನಿಸಲು ದಾನಿಗಳ ಹುಡುಕಾಟ ನಡೆಸಲಾಗುವುದು. ಅನಾಥ ಮಕ್ಕಳಿಗೆ ಭಾಗ್ಯಲಕ್ಷ್ಮಿ ಬಾಂಡ್ ಮಾದರಿಯಲ್ಲಿ ಬಾಂಡ್ ನೀಡುವ ಸಂಬಂಧ ರಾಜ್ಯದ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಇದನ್ನೂ ಓದಿ

ಅಂತ್ಯಸಂಸ್ಕಾರಕ್ಕೆ ಹೋದ 128 ಜನರಿಗೆ ಕೊರೊನಾ ಪಾಸಿಟಿವಿ; ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚಿದ ಆತಂಕ

ಜೂನ್ ಅಂತ್ಯದವರೆಗೂ ಗ್ರಾಮೀಣ ಭಾಗದಲ್ಲಿ ಕಟ್ಟೆಚ್ಚರ ವಹಿಸಿ; ರಾಜ್ಯ ಸರ್ಕಾರಕ್ಕೆ ತಜ್ಞರ ಸಲಹೆ

(30 lakh compensation to Anganwadi workers who have fallen victim to Corona says Shashikala Jolle)

Published On - 11:59 am, Tue, 18 May 21