AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ ನಡುವೆಯೇ 300 ಹೊಸ ಖಾಸಗಿ ಲೇಔಟ್​ಗಳಿಗೆ ಅನುಮತಿ: ಶಾಸಕ ಶ್ರೀವತ್ಸ ಹೇಳಿದ್ದಿಷ್ಟು

ಲೋಕಾಯುಕ್ತ ಅಧಿಕಾರಿಗಳ ತನಿಖೆ ನಡುವೆ ಇಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ಮಾಡಲಾಗಿದೆ. 300 ಹೊಸ ಖಾಸಗಿ ಲೇಔಟ್‌ಗಳಿಗೆ ಅನುಮತಿ ನೀಡಲಾಗಿದೆ. ಹೊಸ ಲೇಔಟ್​​ಗಳ ಅನುಮತಿ ಬಗ್ಗೆ ಚರ್ಚಿಸಿ ಒಪ್ಪಿಗೆ ನೀಡಲಾಗಿದೆ. 50:50 ಅನುಪಾತದ ಬಗ್ಗೆ ಮಹತ್ವದ ಚರ್ಚೆಯಾಗಿಲ್ಲ.

ಮುಡಾ ಹಗರಣ ನಡುವೆಯೇ 300 ಹೊಸ ಖಾಸಗಿ ಲೇಔಟ್​ಗಳಿಗೆ ಅನುಮತಿ: ಶಾಸಕ ಶ್ರೀವತ್ಸ ಹೇಳಿದ್ದಿಷ್ಟು
ಮುಡಾ ಹಗರಣ ನಡುವೆಯೇ 300 ಹೊಸ ಖಾಸಗಿ ಲೇಔಟ್​ಗಳಿಗೆ ಅನುಮತಿ: ಶಾಸಕ ಶ್ರೀವತ್ಸ ಹೇಳಿದ್ದಿಷ್ಟು
ದಿಲೀಪ್​, ಚೌಡಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 30, 2024 | 4:02 PM

Share

ಮೈಸೂರು, ನವೆಂಬರ್​​ 30: ಮುಡಾ ಹಗರಣದ (muda scam) ತನಿಖೆ ಚುರುಕೊಂಡಿದೆ. ಒಂದ್ಕಡೆ ಲೋಕಾಯುಕ್ತ ಪೊಲೀಸರು ಬಹುತೇಕ ತನಿಖೆ ಪೂರ್ಣಗೊಳಿಸಿದ್ದಾರೆ. ಮತ್ತೊಂದು ಕಡೆ ಇಡಿ ಅಧಿಕಾರಿಗಳು ಹಗರಣ ಜಾಲವನ್ನ ಬೇಧಿಸುತ್ತಿದ್ದಾರೆ. ಈ ಮಧ್ಯೆ 300 ಹೊಸ ಖಾಸಗಿ ಲೇಔಟ್​ಗಳಿಗೆ ಮುಡಾ ಸಭೆಯಲ್ಲಿ ಅನುಮತಿ ನೀಡಲಾಗಿದೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಹೇಳಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳ ತನಿಖೆ ನಡುವೆ ಇಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ಮಾಡಲಾಗಿದೆ. ಮುಡಾ ಪ್ರಭಾರ ಅಧ್ಯಕ್ಷ ಲಕ್ಷ್ಮೀಕಾಂತ ರೆಡ್ಡಿ ಅಧ್ಯಕ್ಷತೆಯಲ್ಲಿ ಸಭೆ ಮಾಡಲಾಗಿದ್ದು, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರು ಭಾಗಿಯಾಗಿದ್ದರು.

ಇದನ್ನೂ ಓದಿ: ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಸಿವಿಲ್​ ಕೇಸ್​

ಮುಡಾ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಶ್ರೀವತ್ಸ, ಸಭೆಯಲ್ಲಿ 50:50 ಅನುಪಾತದ ಬಗ್ಗೆ ಮಹತ್ವದ ಚರ್ಚೆಯಾಗಿಲ್ಲ. ಹೊಸ ಲೇಔಟ್​​ಗಳ ಅನುಮತಿ ಬಗ್ಗೆ ಚರ್ಚಿಸಿ ಒಪ್ಪಿಗೆ ನೀಡಿದ್ದೇವೆ. ದೇಸಾಯಿ ಆಯೋಗದ ವರದಿ ಆಧಾರದ ಮೇಲೆ 50-50 ವಿಚಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

50:50 ಅನುಪಾತದಲ್ಲಿ ಹಂಚಿಕೆಯಾಗಿದ್ದ ಸೈಟ್​​ಗಳ ಲೆಕ್ಕ ಸಿಕ್ಕಿಲ್ಲ: ಶಾಸಕ ಹರೀಶ್ ಗೌಡ

ಚಾಮರಾಜ ಕಾಂಗ್ರೆಸ್​ ಶಾಸಕ ಹರೀಶ್ ಗೌಡ ಪ್ರತಿಕ್ರಿಯಿಸಿದ್ದು, 50:50 ಅನುಪಾತದಲ್ಲಿ ಹಂಚಿಕೆಯಾಗಿದ್ದ ಸೈಟ್​​ಗಳ ಲೆಕ್ಕ ಸಿಕ್ಕಿಲ್ಲ. ಅಕ್ರಮ ಸೈಟ್, ಸಕ್ರಮ ಸೈಟ್ ಬೇರ್ಪಡಿಸುವುದೇ ಕಷ್ಟವಾಗಿದೆ. ಕಳೆದ ಸಭೆಯಲ್ಲಿ 4 ಸಾವಿರ ಸೈಟ್ ಬಗ್ಗೆ ಮಾಹಿತಿ ಕಲೆಹಾಕಿದ್ದೆ. ಈಗ ಆ ಸಂಖ್ಯೆಯು ಇನ್ನೂ ಹೆಚ್ಚಳವಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ಲೋಕಾಯುಕ್ತ ಸರ್ಚ್ ವಾರೆಂಟ್ ಮಾಹಿತಿ ಸೋರಿಕೆಗೆ 8 ಕೋಟಿ ರೂ. ಡೀಲ್, ಗಂಗರಾಜು ಆರೋಪ

ಮುಂದಿನ ಪ್ರಾಧಿಕಾರದ ಸಭೆಯಲ್ಲಿ 50:50 ಅನುಪಾತದ ಬಗ್ಗೆಯೇ ಪ್ರತ್ಯೇಕವಾದ ಚರ್ಚೆ ಮಾಡಲು ತೀರ್ಮಾನಿಸಲಾಗಿದೆ. 50:50 ಅನುಪಾತದಲ್ಲಿ ಹಗರಣವಾಗಿರುವುದರಲ್ಲಿ ಯಾವುದೇ ಅನುಮಾನವಿಲ್ಲ. ಇದರಲ್ಲಿ ಮುಚ್ಚಿಡುವುದು ಏನು ಇಲ್ಲ ಎಂದು ಹೇಳಿದ್ದಾರೆ.

240 ಬಡಾವಣೆ ಹಸ್ತಾಂತರ

ಇನ್ನು ಮುಡಾದಿಂದ ಬಡಾವಣೆಗಳ ಹಸ್ತಾಂತರ ಪ್ರಕ್ರಿಯೆ ವಿಚಾರವಾಗಿ ಮೊದಲ ಹಂತದ ಹಸ್ತಾಂತರ ಪ್ರಕ್ರಿಯೆ ಮುಕ್ತಾಯವಾಗಿದೆ. ಮೊದಲ ಹಂತದಲ್ಲಿ 240 ಬಡಾವಣೆ ಹಸ್ತಾಂತರ ಮಾಡಲಾಗಿದೆ. ಮೈಸೂರು ಪಾಲಿಕೆ ಹೂಟಗಳ್ಳಿ ನಗರಸಭೆ ಬೋಗಾದಿ ಶ್ರೀರಾಂಪುರ ರಮ್ಮನಹಳ್ಳಿ ಪಟ್ಟಣ ಪಂಚಾಯತಿಗಳಿಗೆ ಹಸ್ತಾಂತರ ಮಾಡಲಾಗಿದೆ. ಉಳಿದ 700 ಬಡಾವಣೆಗಳು ಡಿಸೆಂಬರ್ ಅಂತ್ಯದೊಳಗೆ ಹಸ್ತಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!