ರಾಜ್ಯದಲ್ಲಿ ಕೊರೊನಾ ನರ್ತನ: ರಾಜಧಾನಿಯಲ್ಲಿ ಸೋಂಕಿಗೆ ಮೂವರು ಬಲಿ
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 308 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5760ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿನಿಂದ ಇಂದು ಮೂವರು ಸಾವಿಗೀಡಾಗಿದ್ದಾರೆ. ಕಲಬುರಗಿ 99, ಯಾದಗಿರಿ 66, ಬೀದರ್ 48, ಉಡುಪಿ 45, ಬೆಂಗಳೂರು ನಗರ 18, ಬಳ್ಳಾರಿ 8, ಗದಗ 6, ಶಿವಮೊಗ್ಗ 4, ಧಾರವಾಡ 4, ಹಾಸನ 3, ದಕ್ಷಿಣ ಕನ್ನಡ 3, ಬಾಗಲಕೋಟೆ 2, ಕೊಪ್ಪಳ, ರಾಮನಗರ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಬೆಂಗಳೂರಿನ […]

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 308 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5760ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿನಿಂದ ಇಂದು ಮೂವರು ಸಾವಿಗೀಡಾಗಿದ್ದಾರೆ.
ಕಲಬುರಗಿ 99, ಯಾದಗಿರಿ 66, ಬೀದರ್ 48, ಉಡುಪಿ 45, ಬೆಂಗಳೂರು ನಗರ 18, ಬಳ್ಳಾರಿ 8, ಗದಗ 6, ಶಿವಮೊಗ್ಗ 4, ಧಾರವಾಡ 4, ಹಾಸನ 3, ದಕ್ಷಿಣ ಕನ್ನಡ 3, ಬಾಗಲಕೋಟೆ 2, ಕೊಪ್ಪಳ, ರಾಮನಗರ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಬೆಂಗಳೂರಿನ ಮೂವರು ಬಲಿ: ಕೊರೊನಾ ಸೋಂಕಿನಿಂದ ಇಂದು ಮೂವರು ಸಾವಿಗೀಡಾಗಿದ್ದಾರೆ. 4851ನೇ ಸೋಂಕಿತ 67 ವರ್ಷದ ವೃದ್ಧ, 5335ನೇ ಸೋಂಕಿತೆ 48 ವರ್ಷದ ಮಹಿಳೆ ಹಾಗೂ 5468ನೇ ಸೋಂಕಿತೆ 65 ವರ್ಷದ ವೃದ್ಧೆ ಕೊರೊನಾಗೆ ಬಲಿಯಾಗಿದ್ದಾರೆ. ಇಂದು ಮೃತಪಟ್ಟ ಮೂವರೂ ಬೆಂಗಳೂರು ನಿವಾಸಿಗಳಾಗಿದ್ದಾರೆ. ಇವರು ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ರಾಜ್ಯದಲ್ಲಿ 5760 ಸೋಂಕಿತರ ಪೈಕಿ ಇದುವರೆಗೆ 64 ಜನರು ಮೃತಪಟ್ಟಿದ್ದಾರೆ. 5,760 ಸೋಂಕಿತರ ಪೈಕಿ 2519 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 3175 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
Published On - 5:53 pm, Mon, 8 June 20




