Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಒಂದೇ ಗ್ರಾಮದ 31 ಜನರಿಗೆ ಕೊರೊನಾ ಪಾಸಿಟಿವ್, 48 ಪೊಲೀಸ್​ ಸಿಬ್ಬಂದಿಗೂ ಸೋಂಕು ದೃಢ

ತಹಶೀಲ್ದಾರ್ ಗ್ರಾಮದಲ್ಲಿ ಯಾರು ಕೂಡ ಮನೆಯಿಂದ ಹೊರಗಡೆಗೆ ಬಾರದಂತೆ‌ ಮನವಿ ಮಾಡಿದ್ದಾರೆ. ಆರೋಗ್ಯ ಸಿಬ್ಬಂದಿಗಳಿಗೆ ಪ್ರತಿದಿನ ಗ್ರಾಮಕ್ಕೆ‌ ಭೇಟಿ ನೀಡುವಂತೆ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು: ಒಂದೇ ಗ್ರಾಮದ 31 ಜನರಿಗೆ ಕೊರೊನಾ ಪಾಸಿಟಿವ್, 48 ಪೊಲೀಸ್​ ಸಿಬ್ಬಂದಿಗೂ ಸೋಂಕು ದೃಢ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Aug 23, 2021 | 12:45 PM

ಚಿಕ್ಕಮಗಳೂರು: ತಾಲೂಕಿನ ಹಾರ್ಜಿಹಳ್ಳಿ ಗ್ರಾಮದಲ್ಲಿ ಒಂದೇ ಗ್ರಾಮದ 31 ಜನರಿಗೆ ಕೊರೊನಾ ಪಾಸಿಟಿವ್ ಬಂದ ಘಟನೆ ನಡೆದಿದೆ. 31 ಜನ ತೋಟದ ಕಾರ್ಮಿಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾರ್ಜಿಹಳ್ಳಿ ಗ್ರಾಮಕ್ಕೆ ತಹಶೀಲ್ದಾರ್ ಭೇಟಿ ನೀಡಿ, ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ತಹಶೀಲ್ದಾರ್ ಗ್ರಾಮದಲ್ಲಿ ಯಾರು ಕೂಡ ಮನೆಯಿಂದ ಹೊರಗಡೆಗೆ ಬಾರದಂತೆ‌ ಮನವಿ ಮಾಡಿದ್ದಾರೆ. ಆರೋಗ್ಯ ಸಿಬ್ಬಂದಿಗಳಿಗೆ ಪ್ರತಿದಿನ ಗ್ರಾಮಕ್ಕೆ‌ ಭೇಟಿ ನೀಡುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಹೆಚ್ಚಿದ್ದ ಕೊರೊನಾ ಈಗ ಹಳ್ಳಿಗಳಲ್ಲೂ ಏರಿಕೆಯಾಗುತ್ತಿದೆ. ಇದು ಮಲೆನಾಡಿನ ಜನರಲ್ಲಿ ಆತಂಕ ಹೆಚ್ಚಿಸಿದೆ.

ಚಿಕ್ಕಮಗಳೂರು ಜಿಲ್ಲೆಯ 48 ಪೊಲೀಸ್​ ಸಿಬ್ಬಂದಿಗೆ ಕೊರೊನಾ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿನ 48 ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದೆ. ಈ ಕುರಿತು ಚಿಕ್ಕಮಗಳೂರು ಎಸ್​​ಪಿ ಅಕ್ಷಯ್​ರಿಂದ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಲ್ಲಿ ಆತಂಕ ಹೆಚ್ಚಾಗಿದೆ.

ಬೇಜವಾಬ್ದಾರಿ ತೋರುವ ಮುನ್ನ ಇರಲಿ ಎಚ್ಚರ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಪರಿಸ್ಥಿತಿಯಲ್ಲಿ ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ರಸ್ತೆಗಿಳಿದ 210 ವಾಹನಗಳನ್ನು ಸೀಜ್ ಮಾಡಲಾಗಿದೆ. ನಿನ್ನೆ ಒಂದೇ ದಿನ 210 ವಾಹನಗಳನ್ನು ಸೀಜ್ ಮಾಡಿದ ಪೊಲೀಸರು, ಸಾಮಾಜಿಕ ಅಂತರ ಪಾಲಿಸದ ಅಂಗಡಿಗಳಿಗೆ ದಂಡದ ಶಿಕ್ಷೆ ವಿಧಿಸಿದ್ದಾರೆ. 42 ಕೇಸ್ ಹಾಕಿ 45,000 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಮಾಸ್ಕ್ ಹಾಕದ 300 ಜನರಿಂದ 30,000 ದಂಡ ವಸೂಲಿ ಮಾಡಲಾಗಿದೆ.

ಇದನ್ನೂ ಓದಿ: ಯಾವುದೇ ಕೊವಿಡ್​ 19 ಕೇಂದ್ರಗಳಿಗೆ ದಾಖಲಾಗಲು ಕೊರೊನಾ ಪಾಸಿಟಿವ್ ವರದಿ ಕಡ್ಡಾಯವಲ್ಲ;  ನೀತಿ ಪರಿಷ್ಕರಿಸಿದ ಕೇಂದ್ರ  

ಬೆಂಗಳೂರಿನಿಂದ ರಾಜ್ಯದ ಗ್ರಾಮೀಣ ಭಾಗಗಳತ್ತ ಮುಖ ಮಾಡಿದ ಕೊರೊನಾ; ಸೋಂಕು ನಿಯಂತ್ರಣದ ಬಗ್ಗೆ ತಜ್ಞರ ಆತಂಕ

Published On - 5:24 pm, Sat, 8 May 21

ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್