ಚಿಕ್ಕಮಗಳೂರು: ತಾಲೂಕಿನ ಹಾರ್ಜಿಹಳ್ಳಿ ಗ್ರಾಮದಲ್ಲಿ ಒಂದೇ ಗ್ರಾಮದ 31 ಜನರಿಗೆ ಕೊರೊನಾ ಪಾಸಿಟಿವ್ ಬಂದ ಘಟನೆ ನಡೆದಿದೆ. 31 ಜನ ತೋಟದ ಕಾರ್ಮಿಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾರ್ಜಿಹಳ್ಳಿ ಗ್ರಾಮಕ್ಕೆ ತಹಶೀಲ್ದಾರ್ ಭೇಟಿ ನೀಡಿ, ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.
ತಹಶೀಲ್ದಾರ್ ಗ್ರಾಮದಲ್ಲಿ ಯಾರು ಕೂಡ ಮನೆಯಿಂದ ಹೊರಗಡೆಗೆ ಬಾರದಂತೆ ಮನವಿ ಮಾಡಿದ್ದಾರೆ. ಆರೋಗ್ಯ ಸಿಬ್ಬಂದಿಗಳಿಗೆ ಪ್ರತಿದಿನ ಗ್ರಾಮಕ್ಕೆ ಭೇಟಿ ನೀಡುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಹೆಚ್ಚಿದ್ದ ಕೊರೊನಾ ಈಗ ಹಳ್ಳಿಗಳಲ್ಲೂ ಏರಿಕೆಯಾಗುತ್ತಿದೆ. ಇದು ಮಲೆನಾಡಿನ ಜನರಲ್ಲಿ ಆತಂಕ ಹೆಚ್ಚಿಸಿದೆ.
ಚಿಕ್ಕಮಗಳೂರು ಜಿಲ್ಲೆಯ 48 ಪೊಲೀಸ್ ಸಿಬ್ಬಂದಿಗೆ ಕೊರೊನಾ
ಚಿಕ್ಕಮಗಳೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿನ 48 ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದೆ. ಈ ಕುರಿತು ಚಿಕ್ಕಮಗಳೂರು ಎಸ್ಪಿ ಅಕ್ಷಯ್ರಿಂದ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಲ್ಲಿ ಆತಂಕ ಹೆಚ್ಚಾಗಿದೆ.
ಬೇಜವಾಬ್ದಾರಿ ತೋರುವ ಮುನ್ನ ಇರಲಿ ಎಚ್ಚರ
ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಪರಿಸ್ಥಿತಿಯಲ್ಲಿ ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ರಸ್ತೆಗಿಳಿದ 210 ವಾಹನಗಳನ್ನು ಸೀಜ್ ಮಾಡಲಾಗಿದೆ. ನಿನ್ನೆ ಒಂದೇ ದಿನ 210 ವಾಹನಗಳನ್ನು ಸೀಜ್ ಮಾಡಿದ ಪೊಲೀಸರು, ಸಾಮಾಜಿಕ ಅಂತರ ಪಾಲಿಸದ ಅಂಗಡಿಗಳಿಗೆ ದಂಡದ ಶಿಕ್ಷೆ ವಿಧಿಸಿದ್ದಾರೆ. 42 ಕೇಸ್ ಹಾಕಿ 45,000 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಮಾಸ್ಕ್ ಹಾಕದ 300 ಜನರಿಂದ 30,000 ದಂಡ ವಸೂಲಿ ಮಾಡಲಾಗಿದೆ.
ಇದನ್ನೂ ಓದಿ: ಯಾವುದೇ ಕೊವಿಡ್ 19 ಕೇಂದ್ರಗಳಿಗೆ ದಾಖಲಾಗಲು ಕೊರೊನಾ ಪಾಸಿಟಿವ್ ವರದಿ ಕಡ್ಡಾಯವಲ್ಲ; ನೀತಿ ಪರಿಷ್ಕರಿಸಿದ ಕೇಂದ್ರ
ಬೆಂಗಳೂರಿನಿಂದ ರಾಜ್ಯದ ಗ್ರಾಮೀಣ ಭಾಗಗಳತ್ತ ಮುಖ ಮಾಡಿದ ಕೊರೊನಾ; ಸೋಂಕು ನಿಯಂತ್ರಣದ ಬಗ್ಗೆ ತಜ್ಞರ ಆತಂಕ
Published On - 5:24 pm, Sat, 8 May 21