ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಭಾಗವಹಿಸಿದ್ದ ಮದುವೆಗೆ ಬಂದಿದ್ದ 32 ಜನರಿಗೆ ಕೊರೊನಾ

Vishweshwar Hegde Kageri: ಮದುವೆ ಕಾರ್ಯಕ್ರಮದಲ್ಲಿ ವಿಧಾನಸಭಾ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಸ್ಕ್ ಇಲ್ಲದೇ ಭಾಗವಹಿಸಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹಡಿದಾಡಿತ್ತು.

ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಭಾಗವಹಿಸಿದ್ದ ಮದುವೆಗೆ ಬಂದಿದ್ದ 32 ಜನರಿಗೆ ಕೊರೊನಾ
ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಸ್ಕ್ ಧರಿಸದೇ ಮದುವೆಯಲ್ಲಿ ಭಾಗವಹಿಸಿದ ದೃಶ್ಯ
Follow us
guruganesh bhat
|

Updated on:May 07, 2021 | 10:43 PM

ಶಿರಸಿ: ವಿಧಾನಸಭಾ ಸ್ಪೀಕರ್​​ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚಿಗೆ ಉಪಸ್ಥಿತರಿದ್ದರು ಎನ್ನಲಾದ ಮದುವೆಯಲ್ಲಿ ಭಾಗಿಯಾಗಿದ್ದ 32 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಬೆಂಗಳೂರಿನಿಂದ ಆಗಮಿಸಿದ್ದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದಲ್ಲಿ ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದರು ಎಂದು ಹೇಳಲಾಗಿತ್ತು. ತದನಂತರ ಅವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಆದರೆ ಕಳೆದ 2 ದಿನದಿಂದ ಅದೇ ಮದುವೆಯಲ್ಲಿ ಭಾಗಿಯಾಗಿದ್ದ 32 ಜನರಲ್ಲಿ ಕೊರೊನಾ ಪತ್ತೆಯಾಗಿದ್ದು ಆತಂಕ ಮೂಡಿಸಿದೆ. ಆದರೆ ಯಾರ ಮೂಲಕ ಕೊವಿಡ್ ಸೋಂಕು ಹರಡಿದೆ ಎಂಬುದು ಈವರೆಗೂ ಖಚಿತವಾಗಿಲ್ಲ.  ಮದುವೆ ಕಾರ್ಯಕ್ರಮದಲ್ಲಿ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಸ್ಕ್ ಇಲ್ಲದೇ ಭಾಗವಹಿಸಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹಡಿದಾಡಿತ್ತು.

ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾಸ್ಕ್ ಧರಿಸದೇ ಮದುವೆಯಲ್ಲಿ ಭಾಗವಹಿಸಿದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಆಡಿಯೋ ತುಣುಕುಗಳು ಹಡಿದಾಡಿದ್ದವು. ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಡೆಯನ್ನು ಟೀಕಿಸಿ ಆಡಿಯೋದನ್ನು ಮಾತನಾಡಲಾಗಿತ್ತು. “ಬೆಂಗಳೂರಿನಿಂದ ಸಿದ್ಧಾಪುರಕ್ಕೆ ಬಂದು ಸ್ಪೀಕರ್ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇವರು ಮದುವೆಯಲ್ಲಿ ಓಡಾಡಿದ್ರೂ ನಡೆಯುತ್ತೆ, ಜನರಿದ್ದಲ್ಲಿ ನಡೆದಾಡಿದ್ರೂ ನಡೆಯುತ್ತೆ”. “ಜನಸಾಮಾನ್ಯರು ಓಡಾಡದಿದ್ರೆ ಪೊಲೀಸರು ಲಾಠಿ ತೆಗೆದುಕೊಂಡು ಹೊಡೀತಾರೆ”. “ಇವರ ವಿರುದ್ಧ ಯಾರೂ ಮಾತಾನಾಡಲು ತಯಾರಿಲ್ಲವೇ” ಎಂದು ಆಡಿಯೋ ಮೂಲಕ ಕೆಲವು ಪ್ರಶ್ನಿಸಿದ್ದರು.

ಮೇ 10ರಿಂದಲೇ ಲಾಕ್​ಡೌನ್ ಮೇ 10ರಿಂದ ಮೇ 24ರವರೆಗೆ ಜಾರಿಯಾಗುವ ಕರ್ನಾಟಕ ಲಾಕ್​ಡೌನ್​ನಲ್ಲಿ ಕೊವಿಡ್ ಲಸಿಕೆ ಹಾಕಿಸಿಕೊಳ್ಳಲು ಅವಕಾಶವಿದೆ. ಸಾರ್ವಜನಿಕರು ಹತ್ತಿರದ ಆಸ್ಪತ್ರೆಗಳಿಗೆ ನಡೆದೇ ತೆರಳಿ ಲಸಿಕೆ ತೆಗೆದುಕೊಳ್ಳಬಹುದು.  ಹೋಟೆಲ್‌ಗಳಿಗೆ ಪಾರ್ಸೆಲ್ ತರಲು ಹೋಗಬೇಕಾದರೆ ನಡೆದುಕೊಂಡೇ ಹೋಗಬೇಕು. ವಾಹನಗಳಲ್ಲಿ ಹೋಟೆಲ್‌ಗಳಿಗೆ ಹೋಗಬಾರದು. ಹಗಲು ವೇಳೆ ಯಾವುದೇ ವಾಹನಗಳಿಗೆ ಅವಕಾಶವಿಲ್ಲ. ಯಾವುದೇ ಪಾಸ್‌ ವ್ಯವಸ್ಥೆಯನ್ನು ಜಾರಿಗೆ ತರಲ್ಲ. ಪ್ರಯಾಣಿಸುವವರು ಸೂಕ್ತ ಕಾರಣ ನೀಡಲೇಬೇಕು. ಇದು ಸಂಪೂರ್ಣ ಲಾಕ್‌ಡೌನ್ ಅಲ್ಲ. ಇದು ಷರತ್ತುಬದ್ಧ ಲಾಕ್‌ಡೌನ್ ಎಂದು ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹೇಳಿದರು.

ನ್ಯಾಯಬೆಲೆ ಅಂಗಡಿಗಳು ತೆರೆಯಲಿವೆ. ಮದ್ಯ ಮಾರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಬೆಳಿಗ್ಗೆ 6 ರಿಂದ 10ರ ವರೆಗೆ ತೆರೆಯಲಿವೆ. ಜನರು ಮನೆಯಿಂದ ಹೊರ ಬರುವುದನ್ನು ತಡೆಯುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿ ಸೇವೆ ಒದಗಿಸುವುದನ್ನು ಉತ್ತೇಜಿಸಲಾಗುವುದು.

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ ಒಂದೇ ದಿನ 48,781 ಮಂದಿಗೆ ಸೋಂಕು ದೃಢ, 346 ಸಾವು

Explainer: ಮಕ್ಕಳಿಗೆ ಸಮಸ್ಯೆ ತಂದೊಡ್ಡುವ ಕೊರೊನಾ 3ನೇ ಅಲೆ ಎದುರಿಸಲು ಸಿದ್ಧತೆ ಹೇಗಿರಬೇಕು? ತಜ್ಞರ ಅಭಿಪ್ರಾಯ ಇಲ್ಲಿದೆ (32 people Covid positive in Sirsi one who attended the wedding attended by Speaker Vishweshwar Hegde Kageri)

Published On - 10:40 pm, Fri, 7 May 21

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್