ಬಿಎಂಟಿಸಿ ಡ್ರೈವರ್​ಗೆ ಕುಡುಕರ ಕಿರಿಕ್, ಯುವಕರ ನಶೆ ಇಳಿಸಿದ ಪ್ರಯಾಣಿಕರು

ಬೆಂಗಳೂರು: ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್​ ಡ್ರೈವರ್ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ತಡರಾತ್ರಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ನಾಲ್ವರು ಯುವಕರು ರಸ್ತೆ ದಾಟುವಾಗ ಬಸ್​ಗೆ ಅಡ್ಡ ನಿಂತು ಚಾಲಕನಿಗೆ ಆವಾಜ್ ಹಾಕಿದ್ದಾರೆ. ಇದನ್ನ ಪ್ರಶ್ನಿಸಿದ ಡ್ರೈವರ್​ನನ್ನು ಥಳಿಸಿದ್ದಾರೆ. ಈ ವೇಳೆ ಬಸ್​ನಲ್ಲಿದ್ದ ಪ್ರಯಾಣಿಕರು ಚಾಲಕನ ನೆರವಿಗೆ ಬಂದಿದ್ದು, ಹಲ್ಲೆ ಮಾಡಿದವರನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ನಾಲ್ವರು ಯವಕರಲ್ಲಿ ಮೂವರು ಪರಾರಿಯಾಗಿದ್ದು, ಓರ್ವ ಸಿಕ್ಕಿಬಿದ್ದಿದ್ದಾನೆ. ನಂತರ ಅದೇ ಬಸ್​ನಲ್ಲಿ ಆರೋಪಿಯನ್ನು […]

ಬಿಎಂಟಿಸಿ ಡ್ರೈವರ್​ಗೆ ಕುಡುಕರ ಕಿರಿಕ್, ಯುವಕರ ನಶೆ ಇಳಿಸಿದ ಪ್ರಯಾಣಿಕರು
ಸಾಧು ಶ್ರೀನಾಥ್​

Updated on: Sep 28, 2019 | 1:35 PM

ಬೆಂಗಳೂರು: ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್​ ಡ್ರೈವರ್ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ತಡರಾತ್ರಿ ನಡೆದಿದೆ.

ಮದ್ಯದ ಅಮಲಿನಲ್ಲಿದ್ದ ನಾಲ್ವರು ಯುವಕರು ರಸ್ತೆ ದಾಟುವಾಗ ಬಸ್​ಗೆ ಅಡ್ಡ ನಿಂತು ಚಾಲಕನಿಗೆ ಆವಾಜ್ ಹಾಕಿದ್ದಾರೆ. ಇದನ್ನ ಪ್ರಶ್ನಿಸಿದ ಡ್ರೈವರ್​ನನ್ನು ಥಳಿಸಿದ್ದಾರೆ. ಈ ವೇಳೆ ಬಸ್​ನಲ್ಲಿದ್ದ ಪ್ರಯಾಣಿಕರು ಚಾಲಕನ ನೆರವಿಗೆ ಬಂದಿದ್ದು, ಹಲ್ಲೆ ಮಾಡಿದವರನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ನಾಲ್ವರು ಯವಕರಲ್ಲಿ ಮೂವರು ಪರಾರಿಯಾಗಿದ್ದು, ಓರ್ವ ಸಿಕ್ಕಿಬಿದ್ದಿದ್ದಾನೆ. ನಂತರ ಅದೇ ಬಸ್​ನಲ್ಲಿ ಆರೋಪಿಯನ್ನು ಕರೆದೋಯ್ದು ಉಪ್ಪಾರಪೇಟೆ ಪೊಲೀಸರ ವಶಕ್ಕೆ ಪ್ರಯಾಣಿಕರು ಒಪ್ಪಿಸಿದ್ದಾರೆ.

Published On - 1:33 pm, Sat, 28 September 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us