ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಇದೇ ಅಧಿವೇಶನದಲ್ಲಿ ಬಿಲ್ ಮಂಡಿಸಲು ತೀರ್ಮಾನ
ಕರ್ನಾಟಕ ಸರ್ಕಾರವು ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ನೀಡುವ ವಿಧೇಯಕಕ್ಕೆ ಅನುಮೋದನೆ ನೀಡಿದೆ. ಒಂದು ಕೋಟಿ ರೂಪಾಯಿವರೆಗಿನ ಕಾಮಗಾರಿಗಳಿಗೆ ಈ ಮೀಸಲಾತಿ ಅನ್ವಯಿಸಲಿದೆ. ಹಿಂದುಳಿದ ವರ್ಗಗಳಿಗೆ ಇದ್ದ ಮೀಸಲಾತಿಯನ್ನು ವಿಸ್ತರಿಸಿ ಮುಸ್ಲಿಂ ಸಮುದಾಯಕ್ಕೂ ಒಳಗೊಂಡಿದೆ. ಈ ವಿಧೇಯಕವನ್ನು ಶೀಘ್ರದಲ್ಲೇ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ.

ಬೆಂಗಳೂರು, ಮಾರ್ಚ್ 14: ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಂರಿಗೆ ಮೀಸಲಾತಿ (Muslim reservation) ನೀಡುವ ವಿಧೇಯಕ ತರಲು ಸಂಪುಟ (Cabinet) ಸಭೆ ಒಪ್ಪಿಗೆ ನೀಡಿದೆ. ಇದೇ ಅಧಿವೇಶನದಲ್ಲಿ ಬಿಲ್ ಮಂಡಿಸಲು ತೀರ್ಮಾನಿಸಲಾಗಿದೆ. ಹಿಂದುಳಿದ, ಇತರೇ ಹಿಂದುಳಿದ ವರ್ಗಗಳಿಗಷ್ಟೇ ಇತ್ತು. ಇದೀಗ ಮುಸ್ಲಿಂ ಸಮಾಜಕ್ಕೆ ಮೀಸಲಾತಿಯನ್ನು ಸರ್ಕಾರ ವಿಸ್ತರಿಸಿದೆ. ವಿಧೇಯಕ ಪ್ರಕಾರ ರಾಜ್ಯ ಸರ್ಕಾರದ 1 ಕೋಟಿವರೆಗಿನ ಗುತ್ತಿಗೆ ಕಾಮಗಾರಿಗಳಲ್ಲಿ 4% ಮುಸ್ಲಿಂರಿಗೆ ಮೀಸಲಾತಿ ಒದಗಿಸಲಾಗುತ್ತಿದೆ.
2025ನೇ ಸಾಲಿನ ತಮ್ಮ ಬಜೆಟ್ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಭರ್ಜರಿ ಕೊಡುಗೆ ನೀಡಿತ್ತು. ಅದರಲ್ಲೂ ವಿರೋಧದ ನಡುವೆಯೂ ಸರ್ಕಾರಿಗೆ ಗುತ್ತಿಗೆಯಲ್ಲಿ ಸಿಎಂ ಮೀಸಲಾತಿ ಘೋಷಿಸಿದ್ದರು. ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಈ ಹಿಂದೆ ಇದ್ದ ಒಂದು ಕೋಟಿಯವರೆಗಿನ ಮೊತ್ತವನ್ನು 2 ಕೋಟಿಯವರೆಗೆ ಮೀಸಲಾತಿ ವಿಸ್ತರಣೆ ಮಾಡಲಾಗಿದೆ. ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸಲು ಸಂಪುಟ ಅನುಮೋದನೆ ನೀಡಿದೆ.
ಇದನ್ನೂ ಓದಿ: ಸದ್ದಿಲ್ಲದೇ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಘೋಷಿಸಿದ ಸಿದ್ದರಾಮಯ್ಯ!
ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ-ಪಂಗಡ, ಹಿಂದುಳಿದವರಿಗೆ ನೀಡಿದಂತೆಯೇ ಮುಸ್ಲಿಮರಿಗೆ ಅಂದರೆ ಪ್ರವರ್ಗ 2 ಬಿ ಅಡಿ ಶೇಕಡ 4ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿತ್ತು. ಗುತ್ತಿಗೆ ಕಾಮಗಾರಿಗಳಲ್ಲಿ ಎಸ್‌ಸಿ ಮತ್ತು ಎಸ್‌ಟಿ ಜನಾಂಗಕ್ಕೆ ಹಾಗೂ ಹಿಂದುಳಿದ ಸಮುದಾಯವರಿಗೆ ಮೀಸಲಾತಿ ನೀಡಿದ ಮಾದರಿಯಲ್ಲಿ ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೂ ಶೇ 4ರಷ್ಟು ಮೀಸಲಾತಿ ನೀಡಬೇಕೆಂದು ಅಲ್ಪಸಂಖ್ಯಾತ ನಾಯಕರು ಮನವಿ ಸಲ್ಲಿಸಿದ್ದರು. ಮನವಿಯನ್ನ ಪರಿಗಣಿಸಿ, ಮೀಸಲಾತಿ ಕಲ್ಪಿಸುವುದು ಸರ್ಕಾರ ಮುಂದಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯೂ ನಡೀತು. ವಿಧೇಯಕ ಮಂಡನೆ ಬಗ್ಗೆ ಚರ್ಚೆ ಮಾಡಲಾಗಿತ್ತು.
ಇದನ್ನೂ ಓದಿ: ಮುಸ್ಲಿಮರಿಗೆ ಸಿದ್ದರಾಮಯ್ಯ ಭರ್ಜರಿ ಕೊಡುಗೆ? ಮೀಸಲಾತಿ ಶೇ 10ಕ್ಕೆ ಏರಿಕೆ ಮನವಿ ಬಗ್ಗೆ ಪರಿಶೀಲನೆಗೆ ಜಮೀರ್ ಸೂಚನೆ
ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಕಲ್ಪಿಸುವ ಸರ್ಕಾರ ನಿರ್ಧಾರಕ್ಕೆ ಆರಂಭದಲ್ಲೇ ವಿರೋಧವ್ಯಕ್ತವಾಗಿತ್ತು. ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ಆದರೆ ವಿರೋಧ ಮಧ್ಯೆಯೇ ಇದೀಗ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಒಪ್ಪಿಗೆ ಸೂಚನೆ ನೀಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:46 pm, Fri, 14 March 25