Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 100 ಘಂಟೆಗಳಲ್ಲಿ ಬಿಬಿಎಂಪಿ ಬೆಡ್ ಬುಕಿಂಗ್ ವಿಧಾನದಲ್ಲಿ ಮಹತ್ವದ 4 ಸುಧಾರಣೆ: ಸಂಸದ ತೇಜಸ್ವಿ ಸೂರ್ಯ

Tejasvi Surya On Covid Bed Scam: ಬೆಡ್ ಬುಕಿಂಗ್ ನಂತರ 10 ಘಂಟೆಗಳವರೆಗೆ ನೀಡಲಾಗಿದ್ದ ಅವಧಿಯನ್ನು 4 ಘಂಟೆಗೆ ಕಡಿತಗೊಳಿಸಲಾಗಿದೆ. ಬೆಡ್ ಹಂಚಿಕೆ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರಿಗೂ 2 ಹಂತದ ಲಾಗಿನ್ ದೃಢೀಕರಣ ನಡೆಯಲಿದೆ ಎಂದು ಅವರು ವಿವರಿಸಿದರು.

ಕೇವಲ 100 ಘಂಟೆಗಳಲ್ಲಿ ಬಿಬಿಎಂಪಿ ಬೆಡ್ ಬುಕಿಂಗ್ ವಿಧಾನದಲ್ಲಿ ಮಹತ್ವದ 4 ಸುಧಾರಣೆ: ಸಂಸದ ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ
Follow us
guruganesh bhat
|

Updated on:May 10, 2021 | 7:30 PM

ಬೆಂಗಳೂರು: ಬಿಬಿಎಂಪಿ ಬೆಡ್ ಹಂಚಿಕೆ ಪದ್ಧತಿಯಲ್ಲಿ ಕೇವಲ 100 ಗಂಟೆಗಳಲ್ಲಿ 4 ಮಹತ್ತರ ಸುಧಾರಣೆಗಳನ್ನು ತರಲಾಗಿದೆ. ಅವುಗಳಲ್ಲಿ ಮ್ಯಾನುವಲ್ ಅನ್ ಬ್ಲಾಕಿಂಗ್ ಪದ್ಧತಿ ನಿಷ್ಕ್ರಿಯ, ಬೆಡ್ ಹಂಚಿಕೆ ಕುರಿತು ನೇರವಾಗಿ ರೋಗಿಗಳಿಗೆ ಎಸ್.ಎಂ.ಎಸ್ ಮಾಹಿತಿ ರವಾನೆ ಪದ್ಧತಿ ಈಗಾಗಲೇ ಕಾರ್ಯರೂಪದಲ್ಲಿ ಜಾರಿಗೆ ಬಂದಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.

ಬೆಡ್ ಹಂಚಿಕೆ ಕುರಿತಂತೆ ರೋಗಿಗಳಿಗೆ ನೇರ ಎಸ್.ಎಂ.ಎಸ್ ರವಾನೆಯಾಗಲಿದೆ. ಬೆಡ್ ಬುಕಿಂಗ್ ಪದ್ಧತಿಯಲ್ಲಿ ಈ ಮುಂಚೆ ಜಾರಿಯಲ್ಲಿದ್ದ ಮ್ಯಾನುವಲ್ ಅನ್ ಬ್ಲಾಕ್ ವಿಧಾನ ನಿಷ್ಕಿಯವಾಗಲಿದೆ. ಬೆಡ್ ಬುಕಿಂಗ್ ನಂತರ 10 ಘಂಟೆಗಳವರೆಗೆ ನೀಡಲಾಗಿದ್ದ ಅವಧಿಯನ್ನು 4 ಘಂಟೆಗೆ ಕಡಿತಗೊಳಿಸಲಾಗಿದೆ. ಬೆಡ್ ಹಂಚಿಕೆ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರಿಗೂ 2 ಹಂತದ ಲಾಗಿನ್ ದೃಢೀಕರಣ ನಡೆಯಲಿದೆ ಎಂದು ಅವರು ವಿವರಿಸಿದರು.

ಈ ಸುಧಾರಣೆಗಳನ್ನು ತತ್‌ ಕ್ಷಣಕ್ಕೆ ಕಾರ್ಯರೂಪಕ್ಕೆ ಈಗಾಗಲೇ ಜಾರಿಗೆ ತರಲಾಗಿದ್ದು, ಬೆಡ್ ಹಂಚಿಕೆಗೆ ಡಿಜಿಟಲ್ ಸರದಿ ಪದ್ಧತಿ, ರಿಸರ್ವೇಷನ್ ನಲ್ಲಿ ಆಗುತ್ತಿರುವ ಸಮಯಮಿತಿ ಕಡಿತಗೊಳಿಸುವಿಕೆ ಹಾಗೂ ಆಧಾರ್ ಸಂಯೋಜಿತ ಬಯೋಮೆಟ್ರಿಕ್ ಅಥವಾ ಓಟಿಪಿ ಮೂಲಕ ನೋಂದಣಿ /ಡಿಸ್ಚಾರ್ಜ್‌ ಸೇರಿದಂತೆ ಹಲವು ಸುಧಾರಣೆಗಳು ಮುಂದಿನ ಕೆಲವು ಘಂಟೆಗಳಲ್ಲಿ ಕಾರ್ಯರೂಪಕ್ಕೆ ಬರಲಿವೆ ಎಂದು ಸಂಸದರು ಇದೇ ಸಂದರ್ಭದಲ್ಲಿ ವಿವರಿಸಿದರು.

ಬೆಡ್ ಹಂಚಿಕೆ ಸಾಫ್ಟ್ ವೇರ್ ನಲ್ಲಿನ ಹಲವು ನ್ಯೂನತೆಗಳನ್ನು ಸರಿಪಡಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಕ್ಷಿಪ್ರ ಕ್ರಮ ತೆಗೆದುಕೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ನೀಡಿದ್ದಾರೆ. ನಂದನ್ ನಿಲೇಕಣಿ ಯವರನ್ನು ಸಂಪರ್ಕಿಸಿ, ಬಿಬಿಎಂಪಿ ಬೆಡ್ ಹಂಚಿಕೆ ಸಾಫ್ಟ್​ವೇರ್​ನಲ್ಲಿಯ ಹಲವು ನ್ಯೂನತೆಗಳನ್ನು ಸರಿಪಡಿಸಲಾಗಿದೆ. ಈ ಬದಲಾವಣೆಗಳಿಗೆ ISpirt ಥಿಂಕ್ ಟ್ಯಾಂಕ್ ಸಹಕಾರ ನೀಡಿದೆ ಎಂದು ವಿವರಿಸಿದ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದರು.

2 ಹಂತದ ಲಾಗಿನ್ ವ್ಯವಸ್ಥೆ ಬಿಬಿಎಂಪಿ ಕೊವಿಡ್ ವಾರ್​ರೂಂಗಳಲ್ಲಿ ಬೆಡ್ ಹಂಚಿಕೆ ಸಮಯದಲ್ಲಿ ಆಗುತ್ತಿದ್ದ ಅಪಸವ್ಯಗಳನ್ನು ತಡೆಗಟ್ಟಲು, ಈ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರಿಗೂ 2 ಹಂತದ ಲಾಗಿನ್ ದೃಢೀಕರಣ ಕಡ್ಡಾಯಗೊಳಿಸಲು ಸೂಚಿಸಲಾಗಿದೆ. ಇದರಿಂದ ಪ್ರತೀ ಬೆಡ್ ಬುಕ್​ಗೂ ಅನ್ಯರ ಹಸ್ತಕ್ಷೇಪ ತಪ್ಪಲಿದೆ ಎಂದರು.

ಬಿಬಿಎಂಪಿ ಸೇರಿದಂತೆ ವಲಯವಾರು ಸಹಾಯವಾಣಿಗಳಿಗೆ ಕರೆ ಮಾಡುವ ರೋಗಿಗಳ ವಿವರಗಳನ್ನು ಲೆಡ್ಜರ್ ಸೇರಿದಂತೆ ಇತರ ವಿಧಗಳಲ್ಲಿ ದಾಖಲಿಸಿಕೊಳ್ಳುವ ವಿಧಾನವಿತ್ತು. ಇದು ಪಾರದರ್ಶಕವಾಗಿರಲಿಲ್ಲ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಿ.ಎಚ್.ಬಿ.ಎಂ.ಎಸ್ ವೆಬ್​ಸೈಟ್​ನಲ್ಲಿ ಡಿಜಿಟಲ್ ಸರದಿ ಪದ್ಧತಿಯನ್ನು ಜಾರಿಗೆ ತರಲಾಗಿದ್ದು, ರೋಗಿಗಳ ತುರ್ತು ಅಗತ್ಯತೆ ಮೇರೆಗೆ ಬೆಡ್ ಹಂಚಿಕೆ ಮಾಡಲು ಆದ್ಯತೆ ಒದಗಿಸಲಾಗಿದೆ. ಇದರಿಂದ ಪಾರದರ್ಶಕತೆಗೆ ದಾರಿ ಮಾಡಿಕೊಟ್ಟಂತಾಗಿದೆ. ಡ್ಯಾಶ್ ಬೋರ್ಡ್ ಮೂಲಕ ಬೆಡ್ ಹಂಚಿಕೆಗೆ ಸಂಬಂಧಿಸಿದ ಹಲವು ವಿವರಗಳನ್ನು ಸಾರ್ವಜನಿಕರ ಅವಗಾಹನೆಗೆ ತಿಳಿಸುವ ವ್ಯವಸ್ಥೆಗೆ ಸೂಚಿಸಲಾಗಿದ್ದು, ಇದರ ವಿವರಗಳನ್ನು ನೇರವಾಗಿ ರೋಗಿಗಳ ಮೊಬೈಲ್ ಸಂಖ್ಯೆಗೆ ತಿಳಿಸುವ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ವಿವರಿಸಿದರು.

ಆಸ್ಪತ್ರೆಗಳಲ್ಲಿ ರಿಜಿಸ್ಟ್ರೇಷನ್ ಹಾಗೂ ಡಿಸ್ಚಾರ್ಜ್​ಗೆ ಸಂಬಂಧಿಸಿದ ಮಾಹಿತಿಯನ್ನು ಆಧಾರ್ ಸಂಯೋಜಿತ ಬಯೋಮೆಟ್ರಿಕ್ ಅಥವಾ ಓಟಿಪಿ ಆಧಾರಿತ ನೋಂದಣಿಗೆ ಸೂಚಿಸಲಾಗಿದೆ. ಇದರಿಂದ ನಕಲಿ ಪ್ರವೇಶಗಳಿಗೆ ಆಸ್ಪದವಿಲ್ಲ. ಪ್ರಸ್ತುತ ಕೊವಿಡ್ ನಿರ್ವಹಣೆಗೆ 3 ಸಾಫ್ಟ್​ವೇರ್​ಗಳಿದ್ದು ( INDEX, C.H.B.M.S &SAST) ಇವುಗಳಲ್ಲಿನ ಯಾವುದಾದರೂ ಒಂದು ಸಾಫ್ಟ್ ವೇರ್ ಕಾರ್ಯನಿರ್ವಹಿಸದಿದ್ದರೆ ಉಳಿದವುಗಳ ನಿರ್ವಹಣೆ ಸಮರ್ಪಕವಾಗಿರದು. ಇವೆಲ್ಲವುಗಳನ್ನು ಸಂಯೋಜನೆಗೊಳಿಸಿ ಏಕೀಕೃತ ಸಾಫ್ಟ್​ವೇರ್​ ಅಭಿವೃದ್ಧಿಗೆ ಸೂಚಿಸಲಾಗಿದೆ. ಶೀಘ್ರದಲ್ಲಿಯೇ ಇವುಗಳನ್ನು ಸಹ ಕಾರ್ಯಾಚರಣೆಗೆ ತರಲಾಗುವುದು ಎಂದು ಸಂಸದ ತೇಜಸ್ವೀ ಸೂರ್ಯ ತಿಳಿಸಿದರು.

ಇದನ್ನೂ ಓದಿ: 16 ಜನರ ಮೇಲೆ ಅಪರಾಧ ಹೊರಿಸಿದ್ದು ನಾನಲ್ಲ; ಅವರನ್ನು ಬಿಬಿಎಂಪಿ ಮೊದಲೇ ಕೆಲಸದಿಂದ ತೆಗೆದಿತ್ತು- ಸಂಸದ ತೇಜಸ್ವಿ ಸೂರ್ಯ 

ಬೆಂಗಳೂರು ದಕ್ಷಿಣ ಭಾಗದವರು ಆಕ್ಸಿಜನ್ ಬೇಕಿದ್ದಲ್ಲಿ 080- 61914960ಕ್ಕೆ ಕರೆ ಮಾಡಿ: ಸಂಸದ ತೇಜಸ್ವಿ ಸೂರ್ಯ

(4 major changes in 100 hours BBMP bed booking system says Bangalore South MP Tejasvi Surya)

Published On - 7:21 pm, Mon, 10 May 21

ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ