AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರೇಶ್ ಅಂಗಡಿಯನ್ನ ಮುಖ್ಯಮಂತ್ರಿಯಾಗಿ ಮಾಡುವ ಸಭೆ ನಡೆದಿತ್ತಂತೆ: ಎಲ್ಲಿ, ಯಾವಾಗ?

ಬೆಳಗಾವಿ: ಕೇಂದ್ರ ಸಚಿವ, ಸ್ಥಳೀಯ ಸಂಸದ ಸುರೇಶ್ ಅಂಗಡಿ ಅಕಾಲಿಕ ಸಾವಿಗೀಡಾದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸುರೇಶ್ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ, ದಿ. ಸುರೇಶ್ ಅಂಗಡಿ ಸೋದರ ಮಾವ ಲಿಂಗರಾಜ್ ಪಾಟೀಲ್ ಅವರು ರಾಜ್ಯ ರಾಜಕೀಯದ ಮೇಲೆ ಹೊಸ ಬಾಂಬ್ ಹಾಕಿದ್ದಾರೆ. ನಾಲ್ಕು ತಿಂಗಳ ಹಿಂದೆ ಸುರೇಶ್ ಅಂಗಡಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡುವ ಕುರಿತು ಸಭೆ ನಡೆದಿತ್ತು. ಕರ್ನಾಟಕ ಉಸ್ತುವಾರಿ ಮುರಳೀಧರ್‌‌ ರಾವ್ ನೇತೃತ್ವದಲ್ಲಿ […]

ಸುರೇಶ್ ಅಂಗಡಿಯನ್ನ ಮುಖ್ಯಮಂತ್ರಿಯಾಗಿ ಮಾಡುವ ಸಭೆ ನಡೆದಿತ್ತಂತೆ: ಎಲ್ಲಿ, ಯಾವಾಗ?
ಸಾಧು ಶ್ರೀನಾಥ್​
|

Updated on:Sep 29, 2020 | 12:25 PM

Share

ಬೆಳಗಾವಿ: ಕೇಂದ್ರ ಸಚಿವ, ಸ್ಥಳೀಯ ಸಂಸದ ಸುರೇಶ್ ಅಂಗಡಿ ಅಕಾಲಿಕ ಸಾವಿಗೀಡಾದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸುರೇಶ್ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ, ದಿ. ಸುರೇಶ್ ಅಂಗಡಿ ಸೋದರ ಮಾವ ಲಿಂಗರಾಜ್ ಪಾಟೀಲ್ ಅವರು ರಾಜ್ಯ ರಾಜಕೀಯದ ಮೇಲೆ ಹೊಸ ಬಾಂಬ್ ಹಾಕಿದ್ದಾರೆ.

ನಾಲ್ಕು ತಿಂಗಳ ಹಿಂದೆ ಸುರೇಶ್ ಅಂಗಡಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡುವ ಕುರಿತು ಸಭೆ ನಡೆದಿತ್ತು. ಕರ್ನಾಟಕ ಉಸ್ತುವಾರಿ ಮುರಳೀಧರ್‌‌ ರಾವ್ ನೇತೃತ್ವದಲ್ಲಿ ದೆಹಲಿಯಲ್ಲಿ ಆ ಸಭೆ ನಡೆದಿತ್ತು. ದೆಹಲಿಯ ಪ್ರಮುಖ ನಾಯಕರು ಅಂದು ಆ ಸಭೆಯಲ್ಲಿ ಭಾಗಿಯಾಗಿದ್ದರು. ಕೆಲವೇ ದಿನಗಳಲ್ಲಿ ನಿಮ್ಮನ್ನ ಸಿಎಂ ಮಾಡುವ ಕುರಿತು ಚರ್ಚೆ ನಡೆದಿದೆ. ಒಳ್ಳೆಯ, ಸಜ್ಜನ ರಾಜಕಾರಣಿ ಮತ್ತು ಲಿಂಗಾಯತ ಮುಖಂಡ ಎಂಬ ಕಾರಣಕ್ಕೆ ನಿಮ್ಮ ಆಯ್ಕೆಯಾಗಿದೆ ಎಂದು ಸಭೆಯಲ್ಲಿ ಸುರೇಶ್ ಅಂಗಡಿ ಅವರಿಗೆ ತಿಳಿಸಲಾಯಿತು ಎಂದು ಅಂಗಡಿ ಸೋದರ ಮಾವ ಲಿಂಗರಾಜ್ ಪಾಟೀಲ್ ಹೇಳಿದ್ದಾರೆ.

ಆ ಸಭೆಯಲ್ಲಿ ನಾನೂ ಸಹ ಭಾಗಿಯಾಗಿದ್ದೆ. ಮುರಳೀಧರ್ ‌ರಾವ್ ಅವರಿಗೆ ಸುರೇಶ್ ಅಂಗಡಿ ನನ್ನಾ ಪರಿಚಯ ಮಾಡಿಸಿದ್ದರು. ದುರಾದೃಷ್ಟವಶಾತ್ ಸುರೇಶ್ ಅಂಗಡಿ ವಿಧಿವಶರಾದರು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸುರೇಶ್ ಅಂಗಡಿ ಕುಟುಂಬಸ್ಥರಿಗೇ ಟಿಕೆಟ್ ನೀಡುವಂತೆ ಲಿಂಗರಾಜ್ ಪಾಟೀಲ್ ಮನವಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ನಾನು ಮನವಿ ಮಾಡಿಕೊಂಡಿದ್ದೇನೆ. ಸುರೇಶ್ ಅಂಗಡಿ ಪತ್ನಿ ಮಂಗಲಾ, ಮಕ್ಕಳಾದ ಸ್ಪೂರ್ತಿ, ಶ್ರದ್ಧಾ ಇದ್ರಲ್ಲಿ ಯಾರಿಗಾದರೂ ಟಿಕೆಟ್ ‌ನೀಡಿ ಅಂತಾನೂ ಕೋರಿದ್ದೇವೆ ಎಂದು ಟಿವಿ9 ಗೆ ದಿ. ಸುರೇಶ್ ಅಂಗಡಿ ಸೋದರಮಾವ ಲಿಂಗರಾಜ್ ಪಾಟೀಲ್ ತಿಳಿಸಿದ್ದಾರೆ.

Published On - 12:19 pm, Tue, 29 September 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!