
ಬೆಳಗಾವಿ: ಕೇಂದ್ರ ಸಚಿವ, ಸ್ಥಳೀಯ ಸಂಸದ ಸುರೇಶ್ ಅಂಗಡಿ ಅಕಾಲಿಕ ಸಾವಿಗೀಡಾದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸುರೇಶ್ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ, ದಿ. ಸುರೇಶ್ ಅಂಗಡಿ ಸೋದರ ಮಾವ ಲಿಂಗರಾಜ್ ಪಾಟೀಲ್ ಅವರು ರಾಜ್ಯ ರಾಜಕೀಯದ ಮೇಲೆ ಹೊಸ ಬಾಂಬ್ ಹಾಕಿದ್ದಾರೆ.
ಆ ಸಭೆಯಲ್ಲಿ ನಾನೂ ಸಹ ಭಾಗಿಯಾಗಿದ್ದೆ. ಮುರಳೀಧರ್ ರಾವ್ ಅವರಿಗೆ ಸುರೇಶ್ ಅಂಗಡಿ ನನ್ನಾ ಪರಿಚಯ ಮಾಡಿಸಿದ್ದರು. ದುರಾದೃಷ್ಟವಶಾತ್ ಸುರೇಶ್ ಅಂಗಡಿ ವಿಧಿವಶರಾದರು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸುರೇಶ್ ಅಂಗಡಿ ಕುಟುಂಬಸ್ಥರಿಗೇ ಟಿಕೆಟ್ ನೀಡುವಂತೆ ಲಿಂಗರಾಜ್ ಪಾಟೀಲ್ ಮನವಿ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ನಾನು ಮನವಿ ಮಾಡಿಕೊಂಡಿದ್ದೇನೆ. ಸುರೇಶ್ ಅಂಗಡಿ ಪತ್ನಿ ಮಂಗಲಾ, ಮಕ್ಕಳಾದ ಸ್ಪೂರ್ತಿ, ಶ್ರದ್ಧಾ ಇದ್ರಲ್ಲಿ ಯಾರಿಗಾದರೂ ಟಿಕೆಟ್ ನೀಡಿ ಅಂತಾನೂ ಕೋರಿದ್ದೇವೆ ಎಂದು ಟಿವಿ9 ಗೆ ದಿ. ಸುರೇಶ್ ಅಂಗಡಿ ಸೋದರಮಾವ ಲಿಂಗರಾಜ್ ಪಾಟೀಲ್ ತಿಳಿಸಿದ್ದಾರೆ.
Published On - 12:19 pm, Tue, 29 September 20