4 ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡ ನೀರಾವರಿ ಇಲಾಖೆ: ಡಿಕೆ ಶಿವಕುಮಾರ್​

ರಾಜ್ಯ ನಿರಾವರಿ ಇಲಾಖೆ ನಾಲ್ಕು ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡಿದೆ ಎಂದು ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಹೇಳಿದರು.

4 ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡ ನೀರಾವರಿ ಇಲಾಖೆ: ಡಿಕೆ ಶಿವಕುಮಾರ್​
ಸಚಿವ ಡಿಕೆ ಶಿವಕುಮಾರ್​
Follow us
ಕಿರಣ್​ ಹನಿಯಡ್ಕ
| Updated By: ವಿವೇಕ ಬಿರಾದಾರ

Updated on: Jul 11, 2023 | 1:16 PM

ಬೆಂಗಳೂರು: ರಾಜ್ಯ ನಿರಾವರಿ ಇಲಾಖೆ ನಾಲ್ಕು ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡಿದೆ ಎಂದು ಅಧಿವೇಶನದಲ್ಲಿ (Session) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ (DK Shivakumar) ಅವರು ಹೇಳಿದರು. 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲರ ಭಾಷಣ ಮೇಲೆ ಚರ್ಚೆ ಆರಂಭವಾಗಿದೆ. ಇಂದಿನ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ (MT Krishnappa) ಏತ ನೀರಾವರಿ ಯೋಜನೆಗೆ ಉಚಿತ ವಿದ್ಯುತ್ ಕೊಡಿ ಎಂದು ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಏತ ನೀರಾವರಿ ಯೋಜನೆಗೆ ಬಳಕೆ ಮಾಡಿಕೊಳ್ಳುತ್ತಿರುವ ವಿದ್ಯುತ್​ಗೆ ಬಿಲ್ ಕಟ್ಟಿಲ್ಲ. ಕೋಟಿ ಕೋಟಿ ಹಣ ಬಾಕಿ ಇಟ್ಟುಕೊಂಡಿದ್ದಾರೆ ಎಂದರು.

ಇದನ್ನೂ ಓದಿ: ಬೆಂಗಳೂರು ನಗರದಲ್ಲಿ 16 ಸಾವಿರ, ರಾಜ್ಯದಲ್ಲಿ 2 ಲಕ್ಷ ಎಕರೆ ಕಂದಾಯ ಭೂಮಿ ಒತ್ತುವರಿ

ತುಮಕೂರು ಗ್ರಾಮಾಂತರ, ಚನ್ನಪಟ್ಟಣದಲ್ಲಿ ಕೆರೆ ತುಂಬಿಸಲು ಏತ ನೀರಾವರಿ ಯೋಜನೆ ಬೇಕು ಅಂತಾರೆ. ಆದರೆ ಯಾರು ಸಹ ಇಂಧನ ಇಲಾಖೆಗೆ ಹಣ ಕೊಡುತ್ತಿಲ್ಲ. ತುಮಕೂರು ಗ್ರಾಮಾಂತರದಲ್ಲಿ ಆರು ಕೋಟಿ ರೂ. ಹಣ ಬಾಕಿ ಉಳಿದಿದೆ. ಚನ್ನಪಟ್ಟಣದಲ್ಲಿ ಐದು ಕೋಟಿ ರೂ. ಹಣ ಬಾಕಿ ಇದೆ. ಪಂಚಾಯತ್ ಅವರಿಗೆ ನೀರು ಬೇಕು ಆದರೆ ಹಣ ಕೊಡಲ್ಲ. ಇಂಧನ ಇಲಾಖೆ ಮತ್ತು ಜಲಸಂಪನ್ಮೂಲ ಇಲಾಖೆಗಳ ಸಭೆ ನಡೆಸಿ ತೀರ್ಮಾನ ಮಾಡುತ್ತೇವೆ ಎಂದರು.

ನಮ್ಮ ಇಲಾಖೆಗೆ ಬರಬೇಕಾದ ಬಾಕಿ ಹಣ ಜಾಸ್ತಿ ಇದೆ

ನಮ್ಮ ಇಲಾಖೆಗೆ ಬರಬೇಕಾದ ಬಾಕಿ ಹಣ ಜಾಸ್ತಿ ಇದೆ. ಯಾರೂ ಸಹ ಇಂಧನ ಇಲಾಖೆಗೆ ಪಾವತಿಸದೇ ಬಾಕಿ ಉಳಿದಿರುವ ಹಣ ನೀಡಿಲ್ಲ. ಹೀಗಾಗಿ ಸೋಲಾರ್ ಅಳವಡಿಸುವ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಅರ್ಥಿಕವಾಗಿ ಇದು ದುಬಾರಿ ಸಹ ಅಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ