AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ತೌಕ್ತೆ ಚಂಡಮಾರುತ ಅಬ್ಬರ; 40 ಮನೆಗಳಿಗೆ ಹಾನಿ

ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ. ತಾಲೂಕಿನ ವನ್ನಳ್ಳಿ ಗ್ರಾಮದಲ್ಲಿ ಭಾರೀ ಗಾಳಿ ಬೀಸುತ್ತಿದೆ. ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರವು ಜೋರಾಗಿದೆ. ಹೀಗಾಗಿ ಸಮುದ್ರ ತೀರದ ಜನರು ಆತಂಕದಲ್ಲಿದ್ದಾರೆ.

ಉಡುಪಿಯಲ್ಲಿ ತೌಕ್ತೆ ಚಂಡಮಾರುತ ಅಬ್ಬರ; 40 ಮನೆಗಳಿಗೆ ಹಾನಿ
ಅಲೆ ಅಬ್ಬರ
sandhya thejappa
|

Updated on: May 16, 2021 | 11:34 AM

Share

ಉಡುಪಿ: ತೌಕ್ತೆ ಚಂಡಮಾರುತದ ಅಬ್ಬರದಿಂದ ಜಿಲ್ಲೆಯಲ್ಲಿ ಈವರಗೆ ಸುಮಾರು 40 ಮನೆಗಳಿಗೆ ಹಾನಿಯಾಗಿದೆ. ಈಗಾಗಲೇ ಬೈಂದೂರು, ಮರವಂತೆ ಭಾಗದಲ್ಲಿ ಇರುವ ಅಂದಾಜು 75 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ರಾತ್ರಿಯಿಡೀ ಧಾರಾಕಾರ ಗಾಳಿ, ಮಳೆ ಸುರಿದಿದೆ. ಜಿಲ್ಲೆಯಲ್ಲಿ ಇಂದು ಕೂಡಾ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮಂಗಳೂರಿನಲ್ಲೂ ಬಿಟ್ಟು ಬಿಟ್ಟು ಮಳೆ ಅಬ್ಬರಿಸುತ್ತಿದೆ. ಸಮುದ್ರದ ಅಲೆಗಳ ಅಬ್ಬರ ಕೂಡಾ ಇನ್ನೂ ಕಡಿಮೆಯಾಗಿಲ್ಲ. ಭಾರೀ ಗಾತ್ರದ ಅಲೆಗಳಿಂದ ತೀರ ಪ್ರದೇಶದಲ್ಲಿ ಆತಂಕ ಮುಂದುವರೆದಿದೆ.

ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ. ತಾಲೂಕಿನ ವನ್ನಳ್ಳಿ ಗ್ರಾಮದಲ್ಲಿ ಭಾರೀ ಗಾಳಿ ಬೀಸುತ್ತಿದೆ. ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರವು ಜೋರಾಗಿದೆ. ಹೀಗಾಗಿ ಸಮುದ್ರ ತೀರದ ಜನರು ಆತಂಕದಲ್ಲಿದ್ದಾರೆ.

ಬೆಳಗಾವಿ ನಗರದಲ್ಲಿ ಬೆಳಿಗ್ಗೆಯಿಂದ ಭಾರಿ ಗಾಳಿ ಮತ್ತು ಜಿಟಿ ಜಿಟಿ ಮಳೆಯಾಗುತ್ತಿದೆ. ಲಾಕ್​ಡೌನ್​ ಹಿನ್ನೆಲೆ ಬೆಳಗ್ಗೆ 10ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿತ್ತು. ಆದರೆ ನಿರಂತರವಾಗಿ ಜೋರು ಗಾಳಿ, ಮಳೆ ಹಿನ್ನೆಲೆ ಜನ ಮನೆಯಿಂದ ಹೊರ ಬಂದಿಲ್ಲ. ಇನ್ನು ರಾಮನಗರ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಕಂಡುಬಂದಿದೆ. ಜಿಲ್ಲೆಯ ಕೆಲವು ಕಡೆ ತುಂತುರು ಮಳೆಯಾಗಿದೆ.

ಇದನ್ನೂ ಓದಿ

ರೋಗಿಗಳ ನೆರವಿಗೆ ನಿಂತ ವೈದ್ಯರ ತಂಡ; ಕೊರೊನಾ ಸೋಂಕು ಸೇರಿದಂತೆ ಇನ್ನಿತರ ಕಾಯಿಲೆಗಳಿಗೆ ಮನೆಯಲ್ಲೇ ಸೂಕ್ತ ಚಿಕಿತ್ಸೆ

‘ಭಾರತಕ್ಕಾಗಿ ನನ್ನ ಹೃದಯ ಮಿಡಿಯುತ್ತಿದೆ’ , ಕೊವಿಡ್ ಪರಿಸ್ಥಿತಿ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಭಾವುಕ ಬರಹ

(40 houses were damaged by rain in udupi)

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್