AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಸೇರಿ 40 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸಂಖ್ಯೆ 217ಕ್ಕೆ ಏರಿಕೆ

ರಾಜ್ಯದಲ್ಲಿ ತಲೆದೋರಿರುವ ಮಳೆ ಕೊರತೆ ಮತ್ತು ಬರದ ಪರಿಸ್ಥಿತಿಯನ್ನು ಪರಿಗಣಿಸಿ, ಸರ್ಕಾರವು ಹೆಚ್ಚುವರಿಯಾಗಿ 40 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಈ ಹಿಂದೆ ಘೋಷಿಸಲಾಗಿದ್ದ 177 ತಾಲೂಕುಗಳ ಜೊತೆಗೆ ಈಗ ಹೊಸದಾಗಿ 40 ತಾಲೂಕುಗಳು ಸೇರ್ಪಡೆಯಾಗಿದ್ದು, ಇದರೊಂದಿಗೆ ರಾಜ್ಯದ ಒಟ್ಟು 240 ತಾಲೂಕುಗಳ ಪೈಕಿ ಬರಪೀಡಿತ ತಾಲೂಕುಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ 217ಕ್ಕೆ ಏರಿಕೆಯಾಗಿದೆ.

ಗದಗ ಸೇರಿ 40 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸಂಖ್ಯೆ 217ಕ್ಕೆ ಏರಿಕೆ
ಪ್ರಾತಿನಿಧಿಕ ಚಿತ್ರImage Credit source: Getty images
ಹರೀಶ್ ಜಿ.ಆರ್​.
| Edited By: |

Updated on: Oct 01, 2026 | 7:08 PM

Share

ಮುಖ್ಯಾಂಶಗಳು

  • 40 ತಾಲೂಕುಗಳನ್ನು ಹೆಚ್ಚುವರಿಯಾಗಿ ಬರಪಟ್ಟಿಗೆ ಸೇರ್ಪಡೆ
  • 240 ತಾಲೂಕು ಪೈಕಿ 217 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ
  • ಗದಗ ತಾಲೂಕು ಕೂಡ ಬರಪಟ್ಟಿಗೆ ಸೇರ್ಪಡೆ

ಬೆಂಗಳೂರು, ಅಕ್ಟೋಬರ್​​ 01: ಈಗಾಗಲೇ 177 ತಾಲೂಕುಗಳನ್ನ ಬರಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಇದೀಗ 40 ತಾಲೂಕುಗಳನ್ನು ಹೆಚ್ಚುವರಿಯಾಗಿ ಬರಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಆ ಮೂಲಕ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನು ಬರ ಪೀಡಿತ ಎಂದು ಸರ್ಕಾರ ಘೋಷಣೆ ಮಾಡಿದೆ.

40 ತಾಲೂಕುಗಳು ಯಾವವು?

ಚನ್ನಪಟ್ಟಣ, ಕನಕಪುರ, ಹಾರೋಹಳ್ಳಿ, ಜಗಳೂರು, ಪಿರಿಯಾಪಟ್ಟಣ, ಕುಷ್ಟಗಿ, ಔರಾದ್, ಗೋಕಾಕ್, ರಾಮದುರ್ಗ, ಸವದತ್ತಿ, ಕಾಗವಾಡ, ಇಂಡಿ, ಚಡಚಣ, ತಾಳಿಕೋಟೆ, ಗದಗ, ಮುಂಡರಗಿ, ರೋಣ, ಹಿರೇಕೆರೂರು, ಧಾರವಾಡ, ಕಲಘಟಗಿ, ಕುಂದಗೋಳ, ಅಳ್ನಾವರ, ಭದ್ರಾವತಿ, ಶಿಕಾರಿಪುರ, ಶಿವಮೊಗ್ಗ, ಸೊರಬ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಳಸ, ಮಡಿಕೇರಿ, ಕುಶಾಲನಗರ, ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ, ಉಡುಪಿ, ಬೈಂದೂರು, ಅಂಕೋಲ, ಭಟ್ಕಳ, ಹಳಿಯಾಳ, ಶಿರಸಿ ತಾಲೂಕು ಬರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.

ಇದನ್ನೂ ಓದಿ: ಕರ್ನಾಟಕದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸಂಖ್ಯೆ 124ಕ್ಕೆ ಏರಿಕೆ

ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದ ಸರ್ಕಾರ, ಬಳಿಕ ಸ್ಥಳ ಪರಿಶೀಲನೆ ಹಾಗೂ ಕೆಎಸ್​​ಎನ್​​ಡಿಎಂಸಿ ಸಲ್ಲಿಸಿದ ಸಮಗ್ರ ವರದಿಯ ಆಧಾರದ ಮೇಲೆ 23 ಹೆಚ್ಚುವರಿ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತು. ಆದಾದ ಬಳಿಕ 53 ತಾಲೂಕುಗಳನ್ನು ಬರ ಪಟ್ಟಿಗೆ ಸೇರ್ಪಡೆ ಮಾಡಲಾಯಿತು. ಇದೀಗ ನಾಲ್ಕನೇ ಹಂತದಲ್ಲಿ 40 ತಾಲೂಕುಗಳನ್ನು ಹೆಚ್ಚುವರಿಯಾಗಿ ಬರಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.

LIVE TV

ಹೆಚ್‌.ಕೆ ಪಾಟೀಲ್​ ​ರಾಜೀನಾಮೆ ಬೆನ್ನಲ್ಲೇ ಗದಗ ತಾಲೂಕು ಬರ ಪಟ್ಟಿಗೆ ಸೇರ್ಪಡೆ  

ಇನ್ನು ಬರಗಾಲದ ವಿಚಾರವಾಗಿ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನ ವ್ಯಕ್ತವಾಗಿತ್ತು. ಗದಗ ತಾಲೂಕನ್ನ ಬರ ಪಟ್ಟಿಗೆ ಸೇರಿಸದಿದ್ದರೆ ರಾಜೀನಾಮೆ ಕೊಡುತ್ತೇನೆ ಅಂತಾ ಶಾಸಕ, ಮಾಜಿ ಸಚಿವ ಹೆಚ್‌.ಕೆ ಪಾಟೀಲ್​ ಹೇಳಿದ್ದರು. ಇದು ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಸಂಬಂಧ ಸಿಎಂಗೆ ಪತ್ರ ಬರೆಯುವ ಮೂಲಕ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡುವಂತೆ ಒತ್ತಾಯಿಸಿದ್ದರು. ಇದೆಲ್ಲದರ ಮಧ್ಯೆ ಇದೀಗ ನಾಲ್ಕನೇ ಹಂತದಲ್ಲಿ ಗದಗ ಅನ್ನು ಬರಪೀಡಿತ ತಾಲೂಕುಗಳ ಪಟ್ಟಿ ಸೇರಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More