
ಬೆಂಗಳೂರು, ಅಕ್ಟೋಬರ್ 01: ಈಗಾಗಲೇ 177 ತಾಲೂಕುಗಳನ್ನ ಬರಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಇದೀಗ 40 ತಾಲೂಕುಗಳನ್ನು ಹೆಚ್ಚುವರಿಯಾಗಿ ಬರಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಆ ಮೂಲಕ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನು ಬರ ಪೀಡಿತ ಎಂದು ಸರ್ಕಾರ ಘೋಷಣೆ ಮಾಡಿದೆ.
ಚನ್ನಪಟ್ಟಣ, ಕನಕಪುರ, ಹಾರೋಹಳ್ಳಿ, ಜಗಳೂರು, ಪಿರಿಯಾಪಟ್ಟಣ, ಕುಷ್ಟಗಿ, ಔರಾದ್, ಗೋಕಾಕ್, ರಾಮದುರ್ಗ, ಸವದತ್ತಿ, ಕಾಗವಾಡ, ಇಂಡಿ, ಚಡಚಣ, ತಾಳಿಕೋಟೆ, ಗದಗ, ಮುಂಡರಗಿ, ರೋಣ, ಹಿರೇಕೆರೂರು, ಧಾರವಾಡ, ಕಲಘಟಗಿ, ಕುಂದಗೋಳ, ಅಳ್ನಾವರ, ಭದ್ರಾವತಿ, ಶಿಕಾರಿಪುರ, ಶಿವಮೊಗ್ಗ, ಸೊರಬ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಳಸ, ಮಡಿಕೇರಿ, ಕುಶಾಲನಗರ, ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ, ಉಡುಪಿ, ಬೈಂದೂರು, ಅಂಕೋಲ, ಭಟ್ಕಳ, ಹಳಿಯಾಳ, ಶಿರಸಿ ತಾಲೂಕು ಬರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.
ಇದನ್ನೂ ಓದಿ: ಕರ್ನಾಟಕದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸಂಖ್ಯೆ 124ಕ್ಕೆ ಏರಿಕೆ
ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದ ಸರ್ಕಾರ, ಬಳಿಕ ಸ್ಥಳ ಪರಿಶೀಲನೆ ಹಾಗೂ ಕೆಎಸ್ಎನ್ಡಿಎಂಸಿ ಸಲ್ಲಿಸಿದ ಸಮಗ್ರ ವರದಿಯ ಆಧಾರದ ಮೇಲೆ 23 ಹೆಚ್ಚುವರಿ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತು. ಆದಾದ ಬಳಿಕ 53 ತಾಲೂಕುಗಳನ್ನು ಬರ ಪಟ್ಟಿಗೆ ಸೇರ್ಪಡೆ ಮಾಡಲಾಯಿತು. ಇದೀಗ ನಾಲ್ಕನೇ ಹಂತದಲ್ಲಿ 40 ತಾಲೂಕುಗಳನ್ನು ಹೆಚ್ಚುವರಿಯಾಗಿ ಬರಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.
ಇನ್ನು ಬರಗಾಲದ ವಿಚಾರವಾಗಿ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನ ವ್ಯಕ್ತವಾಗಿತ್ತು. ಗದಗ ತಾಲೂಕನ್ನ ಬರ ಪಟ್ಟಿಗೆ ಸೇರಿಸದಿದ್ದರೆ ರಾಜೀನಾಮೆ ಕೊಡುತ್ತೇನೆ ಅಂತಾ ಶಾಸಕ, ಮಾಜಿ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದರು. ಇದು ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಸಂಬಂಧ ಸಿಎಂಗೆ ಪತ್ರ ಬರೆಯುವ ಮೂಲಕ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡುವಂತೆ ಒತ್ತಾಯಿಸಿದ್ದರು. ಇದೆಲ್ಲದರ ಮಧ್ಯೆ ಇದೀಗ ನಾಲ್ಕನೇ ಹಂತದಲ್ಲಿ ಗದಗ ಅನ್ನು ಬರಪೀಡಿತ ತಾಲೂಕುಗಳ ಪಟ್ಟಿ ಸೇರಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.