ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ ವಿಡಿಯೋ ಮೂಲಕ ಸಿಎಂಗೆ ಮನವಿ
ಮುಖ್ಯಾಂಶಗಳು
- ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು
- ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಸ್ಪಂದಿಸುವಂತೆ ಮನವಿ
- ವಿಡಿಯೋ ಮೂಲಕ ಚಿಕ್ಕಮಗಳೂರು ಮೂಲದ ಅಫ್ಸರ್ ಮನವಿ
ಸೌದಿ ಅರೇಬಿಯಾದ ಮೆಕ್ಕಾದಲ್ಲಿ ವಿಮಾನಗಳ ಹಾರಾಟ ರದ್ದಾದ ಕಾರಣ 4,000 ಕನ್ನಡಿಗರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಿಕ್ಕಮಗಳೂರಿನ ಅಫ್ಸರ್ ಅವರು ವಿಡಿಯೋ ಮೂಲಕ ಮನವಿ ಮಾಡಿದ್ದು, ತವರಿಗೆ ಮರಳಲು ವಿಶೇಷ ವಿಮಾನಗಳ ವ್ಯವಸ್ಥೆ ಮಾಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರು, ಅಕ್ಟೋಬರ್ 23: ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಸಿಲುಕಿರುವ 4,000 ಕನ್ನಡಿಗರ ನೆರವಿಗೆ ಧಾವಿಸುವಂತೆ ಕನ್ನಡಿಗರೊಬ್ಬರ ವಿಡಿಯೋ ವೈರಲ್ ಆಗಿದೆ. 4,000 ಕನ್ನಡಿಗರು ಮೆಕ್ಕಾ ಯಾತ್ರೆಗೆ ತೆರಳಿದ್ದಾರೆ. ಆದರೆ ವಿಮಾನಗಳ ಹಾರಾಟ ರದ್ದು ಹಿನ್ನೆಲೆ ತವರಿಗೆ ಮರಳಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಚಿಕ್ಕಮಗಳೂರು ಮೂಲದ ಅಫ್ಸರ್ ಎಂಬುವವರು ಕನ್ನಡಿಗರ ನೆರವಿಗೆ ಧಾವಿಸುವಂತೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಸಿಎಂ ಡಿಕೆ ಶಿವಕುಮಾರ್ ತಕ್ಷಣ ಮಧ್ಯಪ್ರವೇಶಿಸಬೇಕು. ವಿಶೇಷ ವಿಮಾನಗಳ ವ್ಯವಸ್ಥೆ ಮಾಡಬೇಕು. ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಸ್ಪಂದಿಸುವಂತೆ ಅವರು ಮನವಿ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us

