ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 42 ಜನರಿಗೆ ಕೊರೊನಾ ವೈರಸ್ ಅಟ್ಯಾಕ್ ಆಗಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 904ಕ್ಕೆ ಏರಿಕೆಯಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ 15 ಮಂದಿಗೆ ಹೆಮ್ಮಾರಿ ವಕ್ಕರಿಸಿದೆ. ಗ್ರೀನ್ ಜೋನ್ನಲ್ಲಿದ್ದ ಹಾಸನ ಜಿಲ್ಲೆಯಲ್ಲಿ ಐವರಿಗೆ ಕೊರೊನಾ ಸೋಂಕು ತಗುಲಿದ್ದು, ಯಾದಗಿರಿ 2, ಧಾರವಾಡ 9, ಬೀದರ್ 2, ಬೆಂಗಳೂರು 3, ದಕ್ಷಿಣ ಕನ್ನಡ 2, ಚಿಕ್ಕಬಳ್ಳಾಪುರ, ಮಂಡ್ಯ, ಬಳ್ಳಾರಿ, ಕಲಬುರಗಿ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ಹರಡಿದೆ.
ರಾಜ್ಯದಲ್ಲಿ 904 ಸೋಂಕಿತರ ಪೈಕಿ 426 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 31 ಜನರು ಕೊರೊನಾದಿಂದ ಮೃತಪಟ್ಟಿದ್ದಾರೆ. ಉಳಿದವರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.