ಗ್ರಾ.ಪಂ. ಮೊದಲ ಹಂತದ ಚುನಾವಣೆ: 4,377 ಮಂದಿ ಅವಿರೋಧವಾಗಿ ಆಯ್ಕೆ- ಚುನಾವಣಾ ಆಯೋಗ

ರಾಜ್ಯ ಚುನಾವಣಾ ಆಯೋಗ ಆ ಬಗ್ಗೆ ಅಧಿಕೃತ ಮಾಹಿತಿ ನೀಡಿದೆ. ಈಗಾಗಲೇ 4,377 ಮಂದಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಅಂತಿಮವಾಗಿ ಕಣದಲ್ಲಿ 1,17,383 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗ್ರಾ.ಪಂ. ಮೊದಲ ಹಂತದ ಚುನಾವಣೆ: 4,377 ಮಂದಿ ಅವಿರೋಧವಾಗಿ ಆಯ್ಕೆ- ಚುನಾವಣಾ ಆಯೋಗ
ಪ್ರಾತಿನಿಧಿಕ ಚಿತ್ರ
Rajesh Duggumane

| Edited By: Ghanashyam D M | ಡಿ.ಎಂ.ಘನಶ್ಯಾಮ

Dec 16, 2020 | 9:14 PM

ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಡಿ.22ರಂದು ನಡೆಯಲಿದೆ. ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಮಧ್ಯೆ ಚುನಾವಣಾ ಆಯೋಗ ಇಂದು ಮಹತ್ವದ ಘೋಷಣೆ ಮಾಡಿದ್ದು, ಮೊದಲ ಹಂತದಲ್ಲಿ 4,377 ಮಂದಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ತಿಳಿಸಿದೆ.

ಇಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ರಾಜ್ಯ ಚುನಾವಣಾ ಆಯೋಗ ಆ ಬಗ್ಗೆ ಅಧಿಕೃತ ಮಾಹಿತಿ ನೀಡಿದೆ. ಈಗಾಗಲೇ 4,377 ಮಂದಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಅಂತಿಮವಾಗಿ 1,17,383 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಒಟ್ಟು 43,238 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಒಟ್ಟು 1,64,550 ನಾಮಪತ್ರ ಸಲ್ಲಿಕೆ ಆಗಿದೆ. 40,352 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. 432 ಸ್ಥಾನಗಳು ನಾಮಪತ್ರ ಸಲ್ಲಿಕೆ ಮಾಡದೆ ಖಾಲಿ ಉಳಿದಿವೆ.

3,019 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು ಸ್ಥಾನಗಳು 48,048 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ. ಈಗಾಗಲೇ 4,377 ಮಂದಿ ಅವಿರೋಧವಾಗಿ ಆಯ್ಕೆ ಆಗಿರುವುದರಿಂದ 43,238 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆಯುತ್ತಿದೆ.

ದೇಶಕ್ಕೆ ಕೊರೊನಾ ಕಾಲಿಟ್ಟಿದ್ದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ಮುಂದೂಡಲ್ಪಟ್ಟಿತ್ತು. ನವೆಂಬರ್ 30ರಂದು ಚುನಾವಣಾ ದಿನಾಂಕವನ್ನು ಆಯೋಗ ಬಹಿರಂಗ ಮಾಡಿತ್ತು. ರಾಜ್ಯದಲ್ಲಿ 2 ಹಂತಗಳಲ್ಲಿ ಗ್ರಾಮಪಂಚಾಯಿತಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 22ರಂದು ಮೊದಲ ಹಂತ, ಡಿಸೆಂಬರ್ 27ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ.

ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್.. ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ

ತಾಜಾ ಸುದ್ದಿ

Follow us on

Most Read Stories

Click on your DTH Provider to Add TV9 Kannada