ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 445 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11,005ಕ್ಕೆ ಏರಿಕೆಯಾಗಿದೆ.
ರಾಜಧಾನಿಯಲ್ಲಿ ಮೂವರು ಬಲಿ:
ಬೆಂಗಳೂರಿನಲ್ಲಿ ಇಂದು 144 ಜನರಿಗೆ ಸೋಂಕು ವಕ್ಕರಿಸಿದ್ದು, ಒಂದೇ ದಿನ ಕೊರೊನಾ ಸೋಂಕಿಗೆ ಮೂವರ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾದಿಂದ ಈವರೆಗೆ 81 ಜನರು ಸಾವಿಗೀಡಾಗಿದ್ದಾರೆ.
ಬೆಂಗಳೂರು ನಗರ 144, ಬಳ್ಳಾರಿ 47, ಕಲಬುರಗಿ 42, ಕೊಪ್ಪಳ 36, ದಕ್ಷಿಣ ಕನ್ನಡ 33, ಧಾರವಾಡ 30, ರಾಯಚೂರು 14, ಗದಗ 12, ಚಾಮರಾಜನಗರ 11, ಉಡುಪಿ 9, ಯಾದಗಿರಿ 7, ಮಂಡ್ಯ 6, ಉತ್ತರ ಕನ್ನಡ 6, ಬಾಗಲಕೋಟೆ, ಶಿವಮೊಗ್ಗ, ಕೋಲಾರದಲ್ಲಿ ತಲಾ 6, ಮೈಸೂರು 5, ಚಿಕ್ಕಮಗಳೂರು 4, ಕೊಡಗು 4, ಹಾಸನ, ಬೆಂಗಳೂರು ಗ್ರಾಮಾಂತರ ತಲಾ 3, ವಿಜಯಪುರ, ತುಮಕೂರು, ಹಾವೇರಿ ತಲಾ 2, ಬೀದರ್, ಬೆಳಗಾವಿ, ದಾವಣಗೆರೆಯಲ್ಲಿ ತಲಾ 1, ರಾಮನಗರ, ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ.
ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿನಿಂದ ಇಂದು 10 ಜನ ಬಲಿಯಾಗಿದ್ದು, ಇದುವರೆಗೆ ಕೊರೊನಾದಿಂದ 180 ಜನರು ಮೃತಪಟ್ಟಿದ್ದಾರೆ. 11,005 ಸೋಂಕಿತರ ಪೈಕಿ 6,916 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದ 3,905 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
Published On - 7:24 pm, Fri, 26 June 20