AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ತ್ಯಜಿಸಲು ಬಿಜೆಪಿ ಶಾಸಕರಿಂದ 5 ಕೋಟಿ ಆಮಿಷ? ಕುಮಾರಸ್ವಾಮಿ ಸೇರಿದಂತೆ 5 ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ಅಪರಾಧದ ಬಗ್ಗೆ ಮಾಹಿತಿ ಇದ್ದರೂ ಪೊಲೀಸರಿಗೆ ತಿಳಿಸಿಲ್ಲ ಎಂಬ ಕಾರಣಕ್ಕೆ ಹೆಚ್.ಡಿ. ಕುಮಾರಸ್ವಾಮಿ ವಿರುದ್ದವೂ ದೂರುದಾರರು ಆರೋಪ ಮಾಡಿದ್ದರು. ಹೀಗಾಗಿ, ಕೋರ್ಡ್ ಐವರಿಗೂ ಸಮನ್ಸ್ ಜಾರಿಗೊಳಿಸಿದೆ. ನ್ಯಾಯಾಧೀಶ ತ್ಯಾಗರಾಜ ಎನ್. ಇನವಳ್ಳಿ ಆದೇಶ ಹೊರಡಿಸಿದ್ದಾರೆ.

ಜೆಡಿಎಸ್ ತ್ಯಜಿಸಲು ಬಿಜೆಪಿ ಶಾಸಕರಿಂದ 5 ಕೋಟಿ ಆಮಿಷ? ಕುಮಾರಸ್ವಾಮಿ ಸೇರಿದಂತೆ 5  ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ
TV9 Web
| Edited By: |

Updated on:Apr 05, 2022 | 1:02 PM

Share

ಬೆಂಗಳೂರು: ಜೆಡಿಎಸ್ ಪಕ್ಷ ತ್ಯಜಿಸಲು ಬಿಜೆಪಿ ಶಾಸಕರು 5 ಕೋಟಿ ಆಮಿಷವೊಡ್ಡಿದ್ದ ವಿಚಾರಕ್ಕೆ ಸಂಬಂಧಿಸಿ, ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ, ಸಚಿವ ಯೋಗೇಶ್ವರ್ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಐವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ ಸಮನ್ಸ್ ಕೂಡ ಜಾರಿಯಾಗಿದೆ.

ಜೆಡಿಎಸ್ ತ್ಯಜಿಸಲು ₹ 5 ಕೋಟಿ ರೂಪಾಯಿಗಳ ಆಮಿಷ ಒಡ್ಡಲಾಗಿತ್ತು ಎಂದು ಐವರು ರಾಜಕಾರಣಿಗಳ ವಿರುದ್ಧ ಟಿ.ಜೆ.ಅಬ್ರಹಾಂ ಖಾಸಗಿ ದೂರು ದಾಖಲಿಸಿದ್ದರು. ವಿಧಾನಸಭೆಯಲ್ಲಿ ಕೆ. ಶ್ರೀನಿವಾಸ ಗೌಡ ಆರೋಪಿಸಿದ್ದರು. ಅಲ್ಲದೆ, ಬಿಜೆಪಿ ಶಾಸಕರಿಂದ ₹ 5 ಕೋಟಿ ಆಮಿಷವಿದೆ ಎಂಬ ಬಗ್ಗೆ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಗೆ ವಿಷಯ ತಿಳಿಸಿದ್ದಾಗಿ ಹೇಳಿಕೆ ನೀಡಿದ್ದರು. ಅಪರಾಧದ ಬಗ್ಗೆ ಮಾಹಿತಿ ಇದ್ದರೂ ಪೊಲೀಸರಿಗೆ ತಿಳಿಸಿಲ್ಲ ಎಂಬ ಕಾರಣಕ್ಕೆ ಹೆಚ್.ಡಿ. ಕುಮಾರಸ್ವಾಮಿ ವಿರುದ್ದವೂ ದೂರುದಾರರು ಆರೋಪ ಮಾಡಿದ್ದರು. ಹೀಗಾಗಿ, ಕೋರ್ಟ್​ ಐವರಿಗೂ ಸಮನ್ಸ್ ಜಾರಿಗೊಳಿಸಿದೆ. ನ್ಯಾಯಾಧೀಶ ತ್ಯಾಗರಾಜ ಎನ್. ಇನವಳ್ಳಿ ಈ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಆಪರೇಷನ್ ಕಮಲಕ್ಕಾಗಿ ಆಮಿಷ ಪ್ರಕರಣ; ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು

ಇದನ್ನೂ ಓದಿ: ‘ರಾಜ್ಯದಲ್ಲಿ 17 ಕಾಂಗ್ರೆಸ್, ಜೆಡಿಎಸ್ ಶಾಸಕರು ರಾಜೀನಾಮೆ ಕೊಟ್ಟರು; ತಮ್ಮನ್ನು ಗೆಲ್ಲಿಸಿದ ಪಕ್ಷಕ್ಕೆ ದ್ರೋಹ ಬಗೆದರು’

Published On - 3:00 pm, Wed, 31 March 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್