AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ಡಿಸೇಲ್ ಕಳವು; 30 ಮೀಟರ್ ದೂರದಿಂದಲೇ 5 ಸಾವಿರ ಲೀಟರ್ ಡಿಸೇಲ್ ಕಳ್ಳತನ

ಯಾದಗಿರಿ ‌ನಗರದ ಹೈದರಾಬಾದ್ ರಸ್ತೆಯಲ್ಲಿರುವ ಎಸ್ಸಾರ್ ಮತ್ತು ಗುರು ಪೆಟ್ರೋಲ್ ಬಂಕ್​ಗಳಲ್ಲಿ ಕಳ್ಳತನ ನಡೆದಿದ್ದು, ಅಂಡರ್ ಗ್ರೌಂಡ್​ನಲ್ಲಿರುವ ಡಿಸೇಲ್ ಟ್ಯಾಂಕ್ ಕವರ್ ಓಪನ್ ಮಾಡಿ, ಅದರ ಒಳಗೆ ಪೈಪ್ ಹಾಕಿ ಕಳ್ಳತನ ಮಾಡಲಾಗಿದೆ.

ಯಾದಗಿರಿಯಲ್ಲಿ ಡಿಸೇಲ್ ಕಳವು; 30 ಮೀಟರ್ ದೂರದಿಂದಲೇ 5 ಸಾವಿರ ಲೀಟರ್ ಡಿಸೇಲ್ ಕಳ್ಳತನ
ಎಸ್ಸಾರ್ ಪೆಟ್ರೋಲ್ ಬಂಕ್​
Follow us
TV9 Web
| Updated By: preethi shettigar

Updated on:Jul 02, 2021 | 8:34 AM

ಯಾದಗಿರಿ: ಪೆಟ್ರೋಲ್ ಮತ್ತು ಡಿಸೇಲ್ ದರ ದಿನೇ ದಿನೇ ಹೆಚ್ಚಾಗುತ್ತಿದ್ದು, ಕೆಲವು ಮಹಾನಗರಗಳಲ್ಲಿ ಪೆಟ್ರೋಲ್ ಬೆಲೆ 100ರ ಗಡಿ ದಾಟಿದೆ. ಆದರೆ ಇದನ್ನೇ ಬಂಡವಾಳವಾಗಿಸಿಕೊಂಡ ಹಲವರು ಕಳ್ಳತನ ಮಾಡುವುದಕ್ಕೆ ಮುಂದಾಗಿದ್ದಾರೆ. ಅದರಲ್ಲೂ ಯಾದಗಿರಿ ನಗರದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಕಳ್ಳತನ ಶುರುವಾಗಿದ್ದು, ಒಂದೇ ದಿನ 5 ಸಾವಿರ ಲೀಟರ್ ಡಿಸೇಲ್ ಕಳ್ಳತನವಾಗಿದೆ.

ಯಾದಗಿರಿ ನಗರಕ್ಕೆ ಕಳ್ಳರ ಗುಂಪೋಂದು ಬಂದಿದ್ದು, ಈಗಾಗಲೇ ಎರಡು ಪೆಟ್ರೋಲ್ ಬಂಕ್​ಗಳಿಗೆ ಕನ್ನ ಹಾಕಿದ್ದಾರೆ. ಯಾದಗಿರಿ ‌ನಗರದ ಹೈದರಾಬಾದ್ ರಸ್ತೆಯಲ್ಲಿರುವ ಎಸ್ಸಾರ್ ಮತ್ತು ಗುರು ಪೆಟ್ರೋಲ್ ಬಂಕ್​ಗಳಲ್ಲಿ ಕಳ್ಳತನ ನಡೆದಿದ್ದು, ಅಂಡರ್ ಗ್ರೌಂಡ್​ನಲ್ಲಿರುವ ಡಿಸೇಲ್ ಟ್ಯಾಂಕ್ ಕವರ್ ಓಪನ್ ಮಾಡಿ, ಅದರ ಒಳಗೆ ಪೈಪ್ ಹಾಕಿ ಕಳ್ಳತನ ಮಾಡಲಾಗಿದೆ.

ರಾತ್ರಿ ವೇಳೆಯಲ್ಲಿ ಡೀಸೆಲ್ ಕಳ್ಳತನಕ್ಕೆ ಮುಂದಾದ ಕಳ್ಳರ ಗುಂಪೊಂದು ಸುಮಾರು 30 ಮೀಟರ್ ದೂರದಲ್ಲೇ ನಿಂತು ಡಿಸೇಲ್ ಕಳ್ಳತನ ಮಾಡಿದೆ. ಸಿಸಿಟಿವಿಯನ್ನು ಬಟ್ಟೆಯಿಂದ ಮುಚ್ಚಿ ಕಳ್ಳತನ ಮಾಡಿದ್ದು, ಬಂಕ್​ನಲ್ಲಿ 12 ಸಿಸಿಟಿವಿ ಇದ್ದರೂ ಯಾವುದೇ ಪ್ರಯೋಜನವಾಗಿಲ್ಲ. ರಾತ್ರಿ 12 ಗಂಟೆ ಹೊತ್ತಿನಲ್ಲಿ ಡಿಸೇಲ್ ಕಳ್ಳತನ ಮಾಡಿದ್ದು, ಸದ್ಯ ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಮನೆಗಳ್ಳತನದ ಆರೋಪಿ ಬಂಧನ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜ್ಞಾನಭಾರತಿ ಠಾಣೆ ಪೊಲೀಸರ ಕಾರ್ಯಾಚರಣೆ ವೇಳೆ ತಮಿಳುನಾಡು ಮೂಲದ ಮುರುಗನ್ (24) ಸಿಕ್ಕಿಬಿದ್ದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನಿಂದ 2.50 ಲಕ್ಷ ಬೆಲೆಬಾಳುವ 4 ಕೆಜಿ 350 ಗ್ರಾಂ ಬೆಳ್ಳಿ ವಸ್ತುಗಳು, 5 ಕೆಜಿ ತೂಕದ ಹಿತ್ತಾಳೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀಗ ಹಾಕಿದ್ದ ಮನೆ ಕಳುವಾದ ಬಗ್ಗೆ ಮನೆ ಮಾಲೀಕರು ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಬೈಕ್ ಕದಿಯುತ್ತಿದ್ದ ವೇಳೆ ಸಿಕ್ಕಿಬಿದ್ದ ಕಳ್ಳ, ಮರಕ್ಕೆ ಕಟ್ಟಿ ಹಾಕಿ ಸಾರ್ವಜನಿಕರಿಂದ ಥಳಿತ

ಕಳ್ಳತನ ಮಾಡಿ ಖಾರದಪುಡಿ ಮನೆ ತುಂಬಾ ಚೆಲ್ಲುತ್ತಿದ್ದ ಅಸಲಿ ಕಾರಣ ಬಯಲು; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Published On - 8:23 am, Fri, 2 July 21

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ