ಕೊವಿಡ್ ನಿರ್ವಹಣೆಗೆ ಪ್ರತಿ ಗ್ರಾಮ ಪಂಚಾಯತ್​ಗೂ 50 ಸಾವಿರ ಅನುದಾನ ಬಿಡುಗಡೆ: ಸಿಎಂ ಯಡಿಯೂರಪ್ಪ

ಕೊವಿಡ್ ನಿರ್ವಹಣೆಗೆ ಪ್ರತಿ ಗ್ರಾಮ ಪಂಚಾಯತ್​ಗೂ 50 ಸಾವಿರ ಅನುದಾನ ಬಿಡುಗಡೆ: ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ

ಮೈಸೂರಿನಲ್ಲಿ ಐಎಎಸ್ ಅಧಿಕಾರಿಗಳ ಜಟಾಪಟಿ ವಿಚಾರವಾಗಿಯೂ ಮಾತನಾಡಿದ ಸಿಎಂ ಯಡಿಯೂರಪ್ಪ, ಮೈಸೂರಿನಲ್ಲಿ ಅಧಿಕಾರಿಗಳ ನಡುವಿನ ಸಮಸ್ಯೆ ಬಗೆಹರಿಸಲು ಏನು ಮಾಡಬೇಕೋ ಅದನ್ನು ಮಾಡುತ್ತೇವೆ. ತಕ್ಷಣ ಈ ಕುರಿತು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

TV9kannada Web Team

| Edited By: guruganesh bhat

Jun 04, 2021 | 2:52 PM

ಬೆಳಗಾವಿ: ಕೊವಿಡ್ ನಿರ್ವಹಣೆಗೆ ಪ್ರತಿ ಗ್ರಾಮ ಪಂಚಾಯತ್​ಗೂ 50 ಸಾವಿರ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಕೊವಿಡ್ ನಿರ್ವಹಣಾ ಸಭೆಯ ನಂತರ ಅವರು ಈ ಮಹತ್ವದ ಘೋಷಣೆ ಮಾಡಿದರು.

ಕೊವಿಡ್​ನಿಂದ ಅನಾಥರಾದ ಮಕ್ಕಳಿಗೆ ಯಾವುದೇ ತೊಂದರೆ ಆಗಲು ಸರ್ಕಾರ ಅವಕಾಶ ನೀಡುವುದಿಲ್ಲ. ಅನಾಥ ಮಕ್ಕಳಿಗಾಗಿ ಈಗಾಗಲೇ ಪ್ಯಾಕೇಜ್ ಘೋಷಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸುಲಿಗೆ ತಡೆಯಲು ಕಮಿಟಿ ರಚನೆ ಮಾಡಲಾಗಿದ್ದು, ಕೊವಿಡ್ ಕೇರ್ ಸೆಂಟರ್ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ತಮಿಳುನಾಡಿನಂತೆ ಪೊಲೀಸರಿಗೆ ಸಹಾಯಧನ ವಿಚಾರವಾಗಿಯೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಯಡಿಯೂರಪ್ಪ, ರಾಜ್ಯದ ಪೊಲೀಸರು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಅವರ ಶ್ರಮಕ್ಕೆ ನಾವು ಬೆಲೆ ಕಟ್ಟುವುದಕ್ಕೆ ಆಗುವುದಿಲ್ಲ. ಆದರೆ ಪೊಲೀಸರಿಗೆ ಅಗತ್ಯವಿರುವ ಸಹಾಯವನ್ನು ಚರ್ಚಿಸಿ ನಿರ್ಣಯಿಸುತ್ತೇವೆ ಎಂದರು.

ಮೈಸೂರಿನಲ್ಲಿ ಐಎಎಸ್ ಅಧಿಕಾರಿಗಳ ಜಟಾಪಟಿ ವಿಚಾರವಾಗಿಯೂ ಮಾತನಾಡಿದ ಸಿಎಂ ಯಡಿಯೂರಪ್ಪ, ಮೈಸೂರಿನಲ್ಲಿ ಅಧಿಕಾರಿಗಳ ನಡುವಿನ ಸಮಸ್ಯೆ ಬಗೆಹರಿಸಲು ಏನು ಮಾಡಬೇಕೋ ಅದನ್ನು ಮಾಡುತ್ತೇವೆ. ತಕ್ಷಣ ಈ ಕುರಿತು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಮುಂದುವರೆದು ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸುವ ವಿಚಾರವಾಗಿ ಮಾತನಾಡಿದ ಅವರು, ಇನ್ನೂ ಒಂದೂವರೆ ಎರಡು‌ ತಿಂಗಳ ನಂತರ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುತ್ತದೆ. ಪರೀಕ್ಷೆ ನಡೆಸುವುದರಿಂದ ಮಕ್ಕಳಿಗೆ ಎನೂ ತೊಂದರೆ ಆಗುದ ರೀತಿ ನೋಡಿಕೊಳ್ಳುತ್ತೇವೆ. ಪೋಷಕರು ಕೂಡ ಈ ಬಗ್ಗೆ ಗೊಂದಲ ಆಗುವುದು ಬೇಡ‌ ಎಂದು ಮನವಿ ಮಾಡಿದರು.

ಇದನ್ನೂ ಓದಿ: PM Narendra Modi ಕೊವಿಡ್ ಲಸಿಕೆ ತಯಾರಿಸಲು ಶ್ರಮಿಸಿದ ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ

Suresh Kumar PC LIVE: ದ್ವಿತೀಯ ಪಿಯುಸಿ ಮಕ್ಕಳು ಪರೀಕ್ಷೆ ಇಲ್ಲದೇ ಪಾಸ್: ಎಸ್​ಎಸ್​ಎಲ್​ಸಿ ಮಕ್ಕಳಿಗೆ ಪರೀಕ್ಷೆ ಇದ್ದರೂ ಫೇಲ್​ ಮಾಡಲ್ಲ

(50 thousand fund will be given to each Gram Panchayat for Covid management says Karnataka CM Yediyurappa)

Follow us on

Related Stories

Most Read Stories

Click on your DTH Provider to Add TV9 Kannada