‘ಕರ್ನಾಟಕ’ಕ್ಕೆ 50, ವರ್ಷ ಪೂರ್ತಿ ವೈವಿಧ್ಯಮಯ ನಾಡಹಬ್ಬ: ಸಚಿವ ಶಿವರಾಜ್ ತಂಗಡಗಿ ಘೋಷಣೆ

Kannada Rajyotsava 2023: ಅಂಚೆ‌ ಇಲಾಖೆಯ ಮೂಲಕ ವಿಶೇಷ ಅಂಚೆ ಚೀಟಿ ಹೊರ ತರಲು ಕೇಂದ್ರ ಸರ್ಕಾರಕ್ಕೆ‌ ಪತ್ರ ಬರೆಯಲಾಗುವುದು. ಕರ್ನಾಟಕದ ಏಕೀಕರಣದ ವಿಷಯ, ನಂತರ ಸಾಧನೆಗಳ‌ ಪಥ, ಐತಿಹಾಸಿಕ ನೆಲೆಗಳು ಸೇರಿದಂತೆ ಮುಂತಾದ ವಿಷಯಗಳ ಬಗ್ಗೆ ಸಾಕ್ಷ್ಯ ಚಿತ್ರ ರಚಿಸಲಾಗುತ್ತದೆ ಎಂದು ಕನ್ನಡ-ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.

‘ಕರ್ನಾಟಕ’ಕ್ಕೆ 50, ವರ್ಷ ಪೂರ್ತಿ ವೈವಿಧ್ಯಮಯ ನಾಡಹಬ್ಬ: ಸಚಿವ ಶಿವರಾಜ್ ತಂಗಡಗಿ ಘೋಷಣೆ
ಶಿವರಾಜ್ ತಂಗಡಗಿ
Follow us
ಕಿರಣ್​ ಹನಿಯಡ್ಕ
| Updated By: Ganapathi Sharma

Updated on:Oct 27, 2023 | 2:52 PM

ಬೆಂಗಳೂರು, ಅಕ್ಟೋಬರ್: ಮೈಸೂರು ರಾಜ್ಯವನ್ನು ಕರ್ನಾಟಕ (Karnataka) ಎಂದು ಹೆಸರಿಟ್ಟು 50 ವರ್ಷ ಪೂರ್ಣಗೊಂಡ ನಿಮಿತ್ತ ಈ ಬಾರಿ ವೈವಿಧ್ಯಮಯವಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಕನ್ನಡ-ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ತಿಳಿಸಿದರು. ವಿಕಾಸಸೌಧದಲ್ಲಿ ಮಾತನಾಡಿದ ಅವರು, ಈ ಬಾರಿ ವರ್ಷ ಪೂರ್ತಿ ವೈವಿಧ್ಯಮಯ ನಾಡಹಬ್ಬ ಆಚರಣೆಗೆ ತೀರ್ಮಾನ ಕೈಗೊಳ್ಳಲಾಗಿದೆ. ನವೆಂಬರ್ 1ರಿಂದ‌ ಮುಂದಿನ ವರ್ಷ ನವೆಂಬರ್ 30ರವರೆಗೆ ನಾಡಹಬ್ಬ ಆಚರಣೆ ಮಾಡಲಾಗುವುದು. ಕರ್ನಾಟಕದ‌ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು-ನುಡಿಗೆ ಸಂಬಂಧಿಸಿದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದರು.

ನವೆಂಬರ್ 1ರಂದು 5 ಕನ್ನಡ ಗೀತೆಗಳನ್ನು ಹಾಡಲಾಗುತ್ತದೆ. ಹುಯಿಲಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪು ಅವರ ಎಲ್ಲಾದರು ಇರು ಎಂತಾದರು ಇರು, ದರಾ ಬೇಂದ್ರೆ ಅವರ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ದಯ್ಯ ಪುರಾಣಿಕ್ ಅವರ ಹೊತ್ತಿತೋ ಹೊತ್ತಿತು ಕನ್ನಡದ ದೀಪ, ಚನ್ನವೀರ ಕಣವಿ ಅವರ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಗೀತ ಗಾಯನ ನಡೆಯಲಿದೆ ಎಂದು ಸಚಿವರು ತಿಳಿಸಿದರು.

ಅಂಚೆ‌ ಇಲಾಖೆಯ ಮೂಲಕ ವಿಶೇಷ ಅಂಚೆ ಚೀಟಿ ಹೊರ ತರಲು ಕೇಂದ್ರ ಸರ್ಕಾರಕ್ಕೆ‌ ಪತ್ರ ಬರೆಯಲಾಗುವುದು. ಕರ್ನಾಟಕದ ಏಕೀಕರಣದ ವಿಷಯ, ನಂತರ ಸಾಧನೆಗಳ‌ ಪಥ, ಐತಿಹಾಸಿಕ ನೆಲೆಗಳು ಸೇರಿದಂತೆ ಮುಂತಾದ ವಿಷಯಗಳ ಬಗ್ಗೆ ಸಾಕ್ಷ್ಯ ಚಿತ್ರ ರಚಿಸಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿರುವ ರಾಜ್ಯದ ‌ಏಕೈಕ ಭುವನೇಶ್ವರಿ ಪ್ರತಿಮೆ‌‌ ಜೀರ್ಣೋದ್ಧಾರ ಮಾಡಲಾಗುತ್ತದೆ. 50 ಸಾಧಕ‌ ಮಹಿಳೆಯರಿಗೆ ಸನ್ಮಾನ, ಕರ್ನಾಟಕ ಏಕೀಕರಣದಿಂದ ಇಲ್ಲಿಯವರೆಗಿನ ಸಮಗ್ರ ಸ್ಮರಣ‌ ಸಂಚಿಕೆ ಬಿಡುಗಡೆ, ಕಲೆ,‌ ಸಾಹಿತ್ಯ, ಜಾನಪದ,‌‌ ಸಂಸ್ಕೃತಿ ಕುರಿತು 50 ಪುಸ್ತಕ‌ ಬಿಡುಗಡೆ ಮಾಡಲಾಗುವುದು ಎಂದು ಶಿವರಾಜ್ ತಂಗಡಗಿ ಮಾಹಿತಿ ನೀಡಿದರು. ಜತೆಗೆ, ಕೆಎಂಎಫ್ ಸಹಯೋಗದಲ್ಲಿ 50ರ ನೆನಪಿಗೆ ‘ಕರ್ನಾಟಕ ಪಾಕ್’ ಖಾದ್ಯ ಬಿಡುಗಡೆಗೆ ಚಿಂತನೆ ನಡೆಸಲಾಗಿದೆ ಎಂದೂ ತಿಳಿಸಿದರು.

31 ಜಿಲ್ಲೆಗಳಲ್ಲಿ ಹಲ್ಮಿಡಿ‌ ಶಾಸನದ‌ ಪ್ರತಿಕೃತಿಗಳ ಸ್ಥಾಪನೆ

ರಾಜ್ಯದ 31 ಜಿಲ್ಲೆಗಳಲ್ಲಿ ಹಲ್ಮಿಡಿ‌ ಶಾಸನದ‌ ಪ್ರತಿಕೃತಿಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಕರ್ನಾಟಕ‌ ಶಿಲ್ಪಕಲಾ ಅಕಾಡೆಮಿಯಿಂದ‌ ಶಿಲಾ ಫಲಕಗಳನ್ನು ತಯಾರಿಸಲಾಗುತ್ತದೆ. ಕರ್ನಾಟಕ‌ ಶಾಶ್ವತ ನಿಧಿ ತೆರೆಯಲಾಗುವುದು. ಸದರಿ ನಿಧಿಯಿಂದ ಸಂಗ್ರಹವಾದ ಅನುದಾನವನ್ನು ಗಡಿನಾಡು ಶಾಲೆಗಳ ಅಭಿವೃದ್ಧಿ ಮುಂತಾದ ಕನ್ನಡ ಚಟುವಟಿಕೆಗಳಿಗೆ ಬಳಕೆ ಮಾಡಲಾಗುವುದು. ಸರ್ಕಾರದ ಲೆಟರ್ ಹೆಡ್​​​ನಲ್ಲಿ ‘ಕರ್ನಾಟಕ ಸಂಭ್ರಮ – 50’ ಎಂಬ ಲೋಗೋ ಇರಲಿದೆ. ನವೆಂಬರ್ ಅಂತ್ಯದೊಳಗೆ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ: Kannada Rajyotsava 2023: ಈ ಬಾರಿ 10 ಸಂಘ ಸಂಸ್ಥೆಗಳಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನ

ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ: ತಂಗಡಗಿ

ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿಯಿಂದ ಪ್ರಯತ್ನ ಎಂಬ ಶಾಸಕ ಗಣಿಗ ರವಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಿವರಾಜ್ ತಂಗಡಗಿ, ಈ ಸರ್ಕಾರಕ್ಕೆ ಯಾವುದೇ ತೊಂದರೆ ಆಗಲ್ಲ. ಬಿಜೆಪಿಯವರಿಗೆ ಇಂತಹದ್ದನ್ನು ಮಾಡಿ‌ ಅನುಭವ ಇದೆ. ಆದರೆ, ಅವರ ಪ್ರಯತ್ನ ಫಲ‌ ನೀಡಲ್ಲ. ನಾವು 136 ಜನ ಗೆದ್ದಿದ್ದೇವೆ. ಸರ್ಕಾರದ ಆರೋಗ್ಯಕ್ಕೆ ಎನೂ ತೊಂದರೆ ಇಲ್ಲ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Fri, 27 October 23

ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​