Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡುವು ಮುಗಿದರೂ ಆಸ್ತಿ ವಿವರ ಸಲ್ಲಿಸದ ಶಾಸಕರ ಹೆಸರು ಪ್ರಕಟಿಸಿದ ಲೋಕಾಯುಕ್ತ

ವಿಧಾನಸಭೆ ಸದಸ್ಯರು)ಶಾಕಸರು) ಹಾಗೂ ವಿಧಾನಪರುಷತ್ ಸದಸ್ಯರು(ಎಂಎಲ್​ಸಿ) ತಮ್ಮ ಆಸ್ತಿ ವಿವರ ಸಲ್ಲಿಸದಿರುವುದಕ್ಕೆ ಕರ್ನಾಟಕ ಲೋಕಾಯುಕ್ತ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ಗಡುವು ಮುಗಿದರೂ ಸಹ 51 ಶಾಸಕರು ಮತ್ತು 21 ಎಂಎಲ್​ಸಿಗಳು ಇದುವರೆಗೂ ತಮ್ಮ ಆಸ್ತಿ ವಿವರವನ್ನು ಸಲ್ಲಿಸಿಲ್ಲ ಎಂದು ಲೋಕಾಯುಕ್ತ ಪ್ರಕಣೆಯಲ್ಲಿ ತಿಳಿಸಿದೆ.

ಗಡುವು ಮುಗಿದರೂ ಆಸ್ತಿ ವಿವರ ಸಲ್ಲಿಸದ ಶಾಸಕರ ಹೆಸರು ಪ್ರಕಟಿಸಿದ ಲೋಕಾಯುಕ್ತ
ಲೋಕಾಯುಕ್ತ
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on:Nov 30, 2023 | 10:47 AM

ಬೆಂಗಳೂರು, (ನವೆಂಬರ್ 30): ಆಸ್ತಿ ವಿವರ ಸಲ್ಲಿಸದ ಕರ್ನಾಟಕದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಪಟ್ಟಿಯನ್ನು ಲೋಕಾಯುಕ್ತ (karnataka lokayukta) ಬಹಿರಂಗಡಿಸಿದೆ. ಆಯ್ಕೆಯಾದ ಮೂರು ತಿಂಗಳೊಳಗೆ ಸದಸ್ಯರು ತಮ್ಮ ಆಸ್ತಿ ವಿವರನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ನಿಯಮ ಇದೆ. ಆದ್ರೆ, ಶಾಸಕರು ಹಾಗೂ ಪರಿಷತ್ ಸದಸ್ಯರು ಇದುವರೆಗೂ ಲೋಕಾಯುಕ್ತ ಕಚೇರಿಗೆ ಆಸ್ತಿ ವಿವರವನ್ನು ಸಲ್ಲಿಸಿಲ್ಲ. ಇದೀಗ ಅಂತಿಮವಾಗಿ ಲೋಕಾಯುಕ್ತ, ಆಸ್ತಿ ವಿವರ ಸಲ್ಲಿಸದ ಶಾಸಕರುಗಳ ಹೆಸರುಗಳ ಪಟ್ಟಿಯನ್ನು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

ಕಳೆದ ಬಾರಿ ಸಚಿವರಾಗಿದ್ದ ಶ್ರೀರಾಮುಲು, ಕೆಸಿ ನಾರಾಯಣಗೌಡ, ಎಸ್ ಅಂಗಾರ ಆಸ್ತಿ ವಿವರ ಸಲ್ಲಿಸದೇ ನಿಮಯ ಉಲ್ಲಂಘಿಸಿದ್ದರು. ಈ ಬಾರಿ ರಹೀಂ ಖಾನ್, ಕೆ ಎನ್ ರಾಜಣ್ಣ, ಜಮೀರ್ ಅಹಮದ್ ಖಾನ್, ರಾಮಲಿಂಗ ರೆಡ್ಡಿ, ಕೆ ಎಚ್ ಮುನಿಯಪ್ಪ ಅವರು ಸಹ ಆಸ್ತಿ ವಿವರ ಸಲ್ಲಿಸಿಲ್ಲ. ಹೀಗೆ ಕಳೆದ ವಿಧಾನಸಭೆ ಅವಧಿಯ 81 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಸದೇ ಲೋಪ ಎಸಗಿದ್ದಾರೆ.

ಇದನ್ನೂ ಓದಿ: ಆಸ್ತಿ ವಿವರ ಸಲ್ಲಿಸುವಂತೆ ಕರ್ನಾಟಕದ 224 ಶಾಸಕರಿಗೂ ಡೆಡ್​​ಲೈನ್ ನೀಡಿದ ಲೋಕಾಯುಕ್ತ ನ್ಯಾಯಮೂರ್ತಿ

ಈ ಬಾರಿ ಅಂದರೆ 2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಅವಧಿಯ 51 ಮಂದಿ ಶಾಸಕರ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ. ಹಾಗೇ 21 ವಿಧಾನ ಪರಿಷತ್ ಸದಸ್ಯರು ಸಹ ಆಸ್ತಿ ವಿವರ ಸಲ್ಲಿಕೆ ಮಾಡಿಲ್ಲ. ಇನ್ನುಸಚಿವ ಮಧು ಬಂಗಾರಪ್ಪ ಹಾಗೂ ಮಾಜಿ ಸಚಿವ ಮುರಿಗೇಶ್ ನಿರಾಣಿ ಸೇರಿದಂತೆ ಹಲವು ಗಡುವು ಮುಗಿದ ಅಂದರೆ ಜೂನ್ 30 ರ ಬಳಿಕ ಆಸ್ತಿ ವಿವರ ಸಲ್ಲಿಕೆ ಮಾಡಿದ್ದಾರೆ. ಅವಧಿ ಮುಗಿದ ಬಳಿಕ 10 ಶಾಸಕರು, ಓರ್ವ ವಿಧಾನ ಪರಿಷತ್ ಸದಸ್ಯ ಆಸ್ತಿ ವಿವರ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಗಡುವು ನೀಡಿದ್ದ ಲೋಕಾಯುಕ್ತ ನ್ಯಾಯಮೂರ್ತಿ

ಎಲ್ಲಾ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ(Karnataka Lokayukta) ನ್ಯಾಯಮೂರ್ತಿ ಅವರು ಜೂನ್ 30 ಡೆಡ್​ಲೈನ್ ನೀಡಿದ್ದರು. ಲೋಕಾಯುಕ್ತ ನ್ಯಾ.ಬಿ.ಎಸ್​.ಪಾಟೀಲ್ ಅವರು ಎಲ್ಲಾ ಪಕ್ಷದ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮೌಖಿಕ ಸೂಚನೆ ನೀಡಿದ್ದರು.

ಕಳೆದ ಬಾರಿ ಆಸ್ತಿ ವಿವರ ಸಲ್ಲಿಸಿದ್ದೇವೆಂದು ಸುಮ್ಮನಿರುವಂತಿಲ್ಲ. ಪುನರ್ ಆಯ್ಕೆಯಾದ ಶಾಸಕರು ಮತ್ತೊಮ್ಮೆ ಆಸ್ತಿ ವಿವರ ಸಲ್ಲಿಸಬೇಕು. ಮೊದಲ ಬಾರಿ ಆಯ್ಕೆಯಾದ ಶಾಸಕರು ಕೂಡ ಆಸ್ತಿ ವಿವರ ಸಲ್ಲಿಸಬೇಕು. ಒಂದು ವೇಳೆ ಜೂ.30ರೊಳಗೆ ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸದಿದ್ದರೆ ಶಿಸ್ತು ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು. ಅಲ್ಲದೇ ಸೆಪ್ಟಂಬರ್ 1ಕ್ಕೆ ನೊಟೀಸ್ ಸಹ ಜಾರಿ ಮಾಡಲಾಗಿತ್ತು.

ಲೋಕಾಯುಕ್ತ ನಿಯಮ ಏನು ಹೇಳುತ್ತದೆ ?

ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಕಲಂ 22(1), ಕಲಂ 7ರ ಉಪಕಲಂ (1)ರಂತೆ ಸರಕಾರಿ ನೌಕರನಲ್ಲದ ಪ್ರತಿಯೊಬ್ಬ ಸಾರ್ವಜನಿಕರ ನೌಕರ ಈ ಕಾಯಿದೆಯಂತೆ, ಈ ಅಧಿನಿಯಮ ಜಾರಿಗೆ ಬಂದ ಮೂರು ತಿಂಗಳೊಳಗೆ ಮತ್ತು ಜೂನ್‌ಗಿಂತ ಮುಂಚಿತವಾಗಿ ಪ್ರತಿ ವರ್ಷವೂ ಪ್ರತಿ ವರ್ಷ ತನ್ನ ಮತ್ತು ಕುಟುಂಬದ ಸದಸ್ಯರ ಆಸ್ತಿ ವಿವರಗಳನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬೇಕೆಂಬ ನಿಯಮವಿದೆ. ಅದು ಕಡ್ಡಾಯ ಕೂಡ.

ಒಂದು ವೇಳೆ ಆಸ್ತಿ ವಿವರ ಸಲ್ಲಿಸದಿದ್ದಲ್ಲಿ ಸಾರ್ವಜನಿಕ ಸೇವಕರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಕ್ಷಮ ಪ್ರಾಧಿಕಾರ (ರಾಜ್ಯಪಾಲರು) ವರದಿ ಸಲ್ಲಿಸಬೇಕು. ಅಂತಹ ಶಾಸಕರ ಹೆಸರುಗಳನ್ನು ರಾಜ್ಯದಾದ್ಯಂತ ಪ್ರಸರಣ ಹೊಂದಿರುವ ಮೂರು ದಿನಪತ್ರಿಕೆಗಳಲ್ಲಿ ಪ್ರಕಟಿಸಲು ಕಾಯ್ದೆಯಲ್ಲಿ ಅವಕಾಶವಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:39 am, Thu, 30 November 23

ವಿನಯ್ ಸಾವಿಗೆ ಕಾರಣರಾದ ಎಸ್​ಪಿಯನ್ನು ಕೂಡಲೇ ಸಸ್ಪೆಂಡ್ ಮಾಡಬೇಕು: ಅಶೋಕ
ವಿನಯ್ ಸಾವಿಗೆ ಕಾರಣರಾದ ಎಸ್​ಪಿಯನ್ನು ಕೂಡಲೇ ಸಸ್ಪೆಂಡ್ ಮಾಡಬೇಕು: ಅಶೋಕ
ವಿನಯ್ ಸೋಮಯ್ಯ ಸಾವು; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಕೊಡಗು ಎಸ್​ಪಿ
ವಿನಯ್ ಸೋಮಯ್ಯ ಸಾವು; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಕೊಡಗು ಎಸ್​ಪಿ
‘ಡೆವಿಲ್’ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ದರ್ಶನ್: ವಿಡಿಯೋ
‘ಡೆವಿಲ್’ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ದರ್ಶನ್: ವಿಡಿಯೋ
ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ನಾವ್ಯಾರು ಅವರ ಜೊತೆ ಹೋಗಲ್ಲ: ಬಂಗಾರಪ್ಪ
ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ನಾವ್ಯಾರು ಅವರ ಜೊತೆ ಹೋಗಲ್ಲ: ಬಂಗಾರಪ್ಪ
ಕೆಪಿಸಿಸಿ ಅಧ್ಯಕ್ಷ ಮಂತ್ರಿಗಿರಿ ಬಿಡಬೇಕಾದ ವಿಷಯ ಗೊತ್ತಿಲ್ಲ: ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಮಂತ್ರಿಗಿರಿ ಬಿಡಬೇಕಾದ ವಿಷಯ ಗೊತ್ತಿಲ್ಲ: ಜಾರಕಿಹೊಳಿ
ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಅಂತ ಖರ್ಗೆ ಹೇಳಿದ್ದಾರೆ: ಪರಮೇಶ್ವರ್
ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಅಂತ ಖರ್ಗೆ ಹೇಳಿದ್ದಾರೆ: ಪರಮೇಶ್ವರ್
SSLC,PUC ಬಳಿಕ ಮುಂದೇನು?ಚಿಂತೆ ಬೇಡ,ಟಿವಿ9 ಎಜುಕೇಷನ್ EXPOದಲ್ಲಿ ಭಾಗವಹಿಸಿ
SSLC,PUC ಬಳಿಕ ಮುಂದೇನು?ಚಿಂತೆ ಬೇಡ,ಟಿವಿ9 ಎಜುಕೇಷನ್ EXPOದಲ್ಲಿ ಭಾಗವಹಿಸಿ
ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿದೆ ಅಕ್ರಮ ಮದ್ಯ ಮಾರಾಟ, ಇಲಾಖೆ ನಿರ್ಲಿಪ್ತ
ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿದೆ ಅಕ್ರಮ ಮದ್ಯ ಮಾರಾಟ, ಇಲಾಖೆ ನಿರ್ಲಿಪ್ತ
ಚಲಿಸುತ್ತಿರುವ ರೈಲು ಹತ್ತಲು ಹೋಗಿ ನಿಯಂತ್ರಣ ಕಳೆದುಕೊಂಡ ವೃದ್ಧ
ಚಲಿಸುತ್ತಿರುವ ರೈಲು ಹತ್ತಲು ಹೋಗಿ ನಿಯಂತ್ರಣ ಕಳೆದುಕೊಂಡ ವೃದ್ಧ
ಸವದತ್ತಿ ಯಲ್ಲಮ್ಮಗೆ ಜಲ ದಿಗ್ಭಂಧನ: ದೇಗುಲದಲ್ಲಿ ಪ್ರವಾಹದಂತೆ ಹರಿದ ನೀರು
ಸವದತ್ತಿ ಯಲ್ಲಮ್ಮಗೆ ಜಲ ದಿಗ್ಭಂಧನ: ದೇಗುಲದಲ್ಲಿ ಪ್ರವಾಹದಂತೆ ಹರಿದ ನೀರು