ರಾಜ್ಯದಲ್ಲಿ ಒಂದೇ ದಿನ ಅರ್ಧ ಶತಕ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ! ಎಲ್ಲೆಲ್ಲಿ?

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 53 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಮೊದಲ ಬಾರಿಗೆ ಬೆಳಗಿನ ವರದಿಯಲ್ಲೇ ಕೊವಿಡ್ 19 ಸೋಂಕಿತರ ಸಂಖ್ಯೆ ಅರ್ಧ ಶತಕ ದಾಟಿದೆ. ಬೆಳಗಾವಿ 22, ಉತ್ತರ ಕನ್ನಡ 7, ಬೆಂಗಳೂರು 3, ಶಿವಮೊಗ್ಗ 8, ಬಾಗಲಕೋಟೆ 8, ಕಲಬುರಗಿ 3, ಚಿಕ್ಕಬಳ್ಳಾಪುರ, ದಾವಣಗೆರೆಯಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದ್ದು, 847 ಸೋಂಕಿತರ ಪೈಕಿ 405 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕರ್ನಾಟಕದಲ್ಲಿ ಈವರೆಗೆ […]

ರಾಜ್ಯದಲ್ಲಿ ಒಂದೇ ದಿನ ಅರ್ಧ ಶತಕ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ! ಎಲ್ಲೆಲ್ಲಿ?
ಸಾಧು ಶ್ರೀನಾಥ್​

Updated on: May 10, 2020 | 1:26 PM

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 53 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಮೊದಲ ಬಾರಿಗೆ ಬೆಳಗಿನ ವರದಿಯಲ್ಲೇ ಕೊವಿಡ್ 19 ಸೋಂಕಿತರ ಸಂಖ್ಯೆ ಅರ್ಧ ಶತಕ ದಾಟಿದೆ. ಬೆಳಗಾವಿ 22, ಉತ್ತರ ಕನ್ನಡ 7, ಬೆಂಗಳೂರು 3, ಶಿವಮೊಗ್ಗ 8, ಬಾಗಲಕೋಟೆ 8, ಕಲಬುರಗಿ 3, ಚಿಕ್ಕಬಳ್ಳಾಪುರ, ದಾವಣಗೆರೆಯಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿದೆ.

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದ್ದು, 847 ಸೋಂಕಿತರ ಪೈಕಿ 405 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕರ್ನಾಟಕದಲ್ಲಿ ಈವರೆಗೆ ಕೊರೊನಾಗೆ 31 ಜನರು ಬಲಿಯಾಗಿದ್ದಾರೆ. 411 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 12:41 pm, Sun, 10 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us