ರಾಯಚೂರಿನಲ್ಲಿ 539 ಕೊರೊನಾ ಸೋಂಕಿತರು ನಾಪತ್ತೆ; ಸೋಂಕಿತರ ಪತ್ತೆಗೆ ಆರೋಗ್ಯ ಇಲಾಖೆ ಹರಸಾಹಸ
ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯ ವರೆಗೆ ಸರ್ಕಾರ ಅವಕಾಶ ನೀಡಿದೆ. ಆದರೆ ಜನರು ಬೇಕಾಬಿಟ್ಟಿಯಾಗಿ ಓಡಾಡುತ್ತ, ಕೊರೊನಾ ಮಾರ್ಗಸೂಚಿಗಳನ್ನು ಗಾಳಿಗೆ ತೂರು ಬಿಟ್ಟಿದ್ದಾರೆ. ರಾಜ್ಯದ ಹಲವು ಜಿಲ್ಲೆಯಗಳಲ್ಲಿ ಈ ರೀತಿಯ ನಿರ್ಲಕ್ಷ್ಯಗಳು ಕಂಡುಬಂದಿವೆ. ಆದರೆ ರಾಯಚೂರು ಜಿಲ್ಲೆಯಲ್ಲಿ ಸೋಂಕಿತರೆ ನಾಪತ್ತೆಯಾಗಿದ್ದಾರೆ.
ರಾಯಚೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೊನಾ ತಡೆಗಟ್ಟಲು ಈಗಾಗಲೇ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ, ಕೊರೊನಾ ಲಕ್ಷಣಗಳು ಕಂಡುಬಂದರೆ ನಿರ್ಲಕ್ಷ್ಯ ವಹಿಸದೆ ತಕ್ಷಣ ಪರೀಕ್ಷೆ ಮಾಡಿಕೊಳ್ಳಿ ಎಂದು ಸರ್ಕಾರ ಹೇಳುತ್ತಿದೆ. ಆದರೆ ಜನರು ಮಾತ್ರ ಬೇಜಾವಬ್ದಾರಿ ತೋರುತ್ತಿದ್ದಾರೆ.
ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯ ವರೆಗೆ ಸರ್ಕಾರ ಅವಕಾಶ ನೀಡಿದೆ. ಆದರೆ ಜನರು ಬೇಕಾಬಿಟ್ಟಿಯಾಗಿ ಓಡಾಡುತ್ತ, ಕೊರೊನಾ ಮಾರ್ಗಸೂಚಿಗಳನ್ನು ಗಾಳಿಗೆ ತೂರು ಬಿಟ್ಟಿದ್ದಾರೆ. ರಾಜ್ಯದ ಹಲವು ಜಿಲ್ಲೆಯಗಳಲ್ಲಿ ಈ ರೀತಿಯ ನಿರ್ಲಕ್ಷ್ಯಗಳು ಕಂಡುಬಂದಿವೆ. ಆದರೆ ರಾಯಚೂರು ಜಿಲ್ಲೆಯಲ್ಲಿ ಸೋಂಕಿತರೆ ನಾಪತ್ತೆಯಾಗಿದ್ದಾರೆ. ಸೋಂಕಿತರ ನಾಪತ್ತೆ ಇದೀಗ ದೊಡ್ಡ ತಲೆ ನೋವಾಗಿ ಪರಿಣಮಿಸಿದ್ದು, ಪೊಲೀಸರಿಗೆ ನಾಪತ್ತೆಯಾದ ಸೋಂಕಿತರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ.
ಜಿಲ್ಲೆಯಲ್ಲಿ ಸುಮಾರು 539 ಕೊರೊನಾ ಸೋಂಕಿತರು ನಾಪತ್ತೆಯಾಗಿದ್ದು, ಈ ಬಗ್ಗೆ ಟಿವಿ9ಗೆ ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ ಮಾಹಿತಿ ನೀಡಿದ್ದಾರೆ. ಹೋಮ್ ಐಸೋಲೇಷನಲ್ಲಿದ್ದ ಸೋಂಕಿತರು ನಿಗೂಢವಾಗಿ ಕಣ್ಮರೆಯಾಗಿದ್ದಾರೆ. ಕಳೆದ ಒಂದು ವಾರದಿಂದ ಸೋಂಕಿತರು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದಿದ್ದಾರೆ.
ಸಾರ್ವಜನಿಕ ಪ್ರದೇಶದಲ್ಲಿ ಬಿಂದಾಸಾಗಿ ತಿರುಗಾಡುತ್ತಿರುವ ಸೋಂಕಿತರು ಮೊಬೈಲ್ ಸ್ವಿಚ್ಛ್ ಆಫ್ ಮಾಡಿಕೊಂಡು ಆರೋಗ್ಯ ಇಲಾಖೆಗೆ ಯಾಮಾರಿಸುತ್ತಿದ್ದಾರೆ. ಸೋಂಕಿತರ ಪತ್ತೆಗೆ ಆರೋಗ್ಯ ಇಲಾಖೆ ಹರಸಾಹಸ ಪಡುತ್ತಿದ್ದಾರೆ. ಸಂಪರ್ಕಕ್ಕೆ ಸಿಗದ 539 ಜನ ಸೋಂಕಿತರ ಮಾಹಿತಿಯನ್ನು ಈಗಾಗಲೇ ಜಿಲ್ಲಾ ಪೊಲೀಸ್ ಇಲಾಖೆಗೆ ನೀಡಲಾಗಿದೆ. ನಾಪತ್ತೆಯಾಗಿರುವ ಸೋಂಕಿತರಿಂದ ಕೊರೊನಾ ವೈರಸ್ ಹಬ್ಬುತ್ತಿರುವ ಶಂಕೆ ವ್ಯಕ್ತವಾಗಿದ್ದು, ರಾಯಚೂರ ನಗರ, ಸಿಂಧನೂರ ನಗರದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ
ಸಾರಿಗೆ ನೌಕರರ ಮುಷ್ಕರದಿಂದ ಹುಬ್ಬಳ್ಳಿ ಗ್ರಾಮಾಂತರ ವಿಭಾಗಕ್ಕೆ 6 ಕೋಟಿ ನಷ್ಟ
ವೈದ್ಯಕೀಯ ಆಕ್ಸಿಜನ್ ಅಭಾವ; ಆಮ್ಲಜನಕವಿಲ್ಲದೆ ಜೀವ ಬಿಟ್ಟ ನವಜಾತ ಅವಳಿ ಶಿಶುಗಳು
(539 corona infected people lost in Raichur)