AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಂತ್ರಣ ಕೆಲಸಕ್ಕೆ 54 ಟೀಮ್ ರಚನೆ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

ಅನ್​ಲಾಕ್​ ವಿಚಾರವಾಗಿ ಸಿಎಂ ಬಿ.ಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಭೆ ಇದೆ. ಈ ಸಭೆಯಲ್ಲಿ ಮತ್ತಷ್ಟು ಅನ್‌ಲಾಕ್ ಮಾಡುವ ಸಾಧ್ಯತೆಗಳ ಬಗ್ಗೆ ತಿರ್ಮಾನಿಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಕೊರೊನಾ ನಿಯಂತ್ರಣ ಕೆಲಸಕ್ಕೆ 54 ಟೀಮ್ ರಚನೆ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ
ಗೌರವ್ ಗುಪ್ತಾ
TV9 Web
| Updated By: preethi shettigar|

Updated on: Jul 03, 2021 | 1:08 PM

Share

ಬೆಂಗಳೂರು: ಅನ್‌ಲಾಕ್ ವೇಳೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸುವ ಕುರಿತು ಇಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಮತ್ತು ಪೊಲೀಸರು ಭಾಗಿಯಾಗಿದ್ದಾರೆ. ಅನ್‌ಲಾಕ್ ವೇಳೆ ಮಾಸ್ಕ್ ಕಡ್ಡಾಯ ಮಾಡುವ ಜವಾಬ್ದಾರಿ, ಅಂತರ ಕಾಪಾಡದ ಅಂಗಡಿ ಮಾಲೀಕರ ವಿರುದ್ಧ ಕ್ರಮ ಸೇರಿ, ಕೈಗೊಳ್ಳಬೇಕಾದ ಇನ್ನಿತರ ಕ್ರಮಗಳ  ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯ ಬಳಿಕ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಕೊರೊನಾ ನಿಯಂತ್ರಣ ಕೆಲಸಕ್ಕೆ 54 ಟೀಮ್ ರಚನೆ ಮಾಡಿದ್ದು, ಪ್ರತಿ ಟೀಂನಲ್ಲಿ 4 ಬಿಬಿಎಂಪಿ ಮಾರ್ಷಲ್‌ಗಳು ಇರುತ್ತಾರೆ. ಈ ತಂಡಗಳು ಮಾಸ್ಕ್ ಮತ್ತು ಸಾಮಾಜಿಕ ಅಂತರದ ಬಗ್ಗೆ ಸೂಚಿಸುತ್ತವೆ ಎಂದು ಹೇಳಿಕೆ ನೀಡಿದ್ದಾರೆ.

ಪೊಲೀಸರು, ಮಾರ್ಷಲ್‌ಗಳ ಮಧ್ಯೆ ಸಮನ್ವಯತೆ ಅಗತ್ಯ, ಪೊಲೀಸ್ ಠಾಣಾ ಮಟ್ಟದಲ್ಲಿ ಸಮನ್ವಯತೆ ಇರಬೇಕು. ದಂಡ ಹಾಕಲು ಹೋಂಗಾರ್ಡ್‌ಗಳನ್ನು ಬಳಸಿಕೊಳ್ಳಬೇಕು. ಫುಟ್‌ಪಾತ್ ಮೇಲಿನ ಅಂಗಡಿ ತೆರವು ಮಾಡಲು ಹೈಕೋರ್ಟ್‌ನಿಂದ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸದ್ಯ ಫುಟ್‌ಪಾತ್ ಮೇಲಿನ ಅಂಗಡಿ ತೆರವು ಕೆಲಸವಾಗಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

ಅನ್​ಲಾಕ್​ ವಿಚಾರವಾಗಿ ಸಿಎಂ ಬಿ.ಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಭೆ ಇದೆ. ಈ ಸಭೆಯಲ್ಲಿ ಮತ್ತಷ್ಟು ಅನ್‌ಲಾಕ್ ಮಾಡುವ ಸಾಧ್ಯತೆಗಳ ಬಗ್ಗೆ ತಿರ್ಮಾನಿಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಮತ್ತು ವೈದ್ಯರ ಸಹಾಯದಿಂದ ಕೊರೊನಾ ಸೋಂಕು ಹತೋಟಿಗೆ ಬಂದಿದೆ. ಹೀಗಾಗಿ ಎಲ್ಲಾ ವಾಣಿಜ್ಯ ಚಟುವಟಿಕೆಗಳಿಗೆ ವಿನಾಯಿತಿ ನೀಡುವಂತೆ ಬೇಡಿಕೆ ಬರುತ್ತಿದೆ. ಆದರೆ ಈಗಲೂ ನಮ್ಮಲ್ಲಿ ಕೊರೊನಾ ಸೋಂಕು ಇದೆ. ಹೀಗಾಗಿ ಕಂಟೇನ್ಮೆಂಟ್ ಜೋನ್​ಗಳ ಸಂಖ್ಯೆ ಹೆಚ್ಚಳ ಮಾಡುತ್ತಿದ್ದೇವೆ. ಎಲ್ಲರೂ ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

ಇದನ್ನೂ ಓದಿ: ಅನ್​ಲಾಕ್ ಮಾಡುವುದು ಸುಲಭ ಆದರೆ, ಅನ್​ಲಾಕ್ ನಂತರ ವೈರಸ್ ಹರಡುವ ಸಾಧ್ಯತೆ‌ಯಿದೆ: ಗೌರವ್​ ಗುಪ್ತಾ

ಕರ್ನಾಟಕದಲ್ಲಿ ಜುಲೈ 5 ರಿಂದ ಅನ್​ಲಾಕ್​ 3.0 ಜಾರಿ; ಸೋಮವಾರದಿಂದಲೇ ಪಬ್ ತೆರೆಯಲು ಅವಕಾಶ ಸಾಧ್ಯತೆ