ಬೆಂಗಳೂರು, ಮಾರ್ಚ್ 18: ಶಾಲೆಗಳ 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ (Board exam) ವಿಚಾರಕ್ಕೆ ಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ವಿಚಾರಣೆ ಪೂರ್ಣವಾಗಿದ್ದು, ಕೆಲವೇ ದಿನಗಳಲ್ಲಿ ಹೈಕೋರ್ಟ್ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಸರ್ಕಾರದ ಮೇಲ್ಮನವಿ ಸಂಬಂಧ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿತ್ತು. ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆ ರದ್ದುಪಡಿಸಿತ್ತು. ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತ್ತು. ಹೀಗಾಗಿ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚಿಸಿತ್ತು. ಇದೀಗ ವಿಚಾರಣೆ ಪೂರ್ಣಗೊಂಡಿದ್ದು ಕೆಲವೇ ದಿನಗಳಲ್ಲಿ ತೀರ್ಪು ಪ್ರಕಟಿಸುವ ಸಾಧ್ಯತೆಗಳಿವೆ.
ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ಇತ್ತೀಚೆಗೆ ರದ್ದುಪಡಿಸಿ ಆದೇಶ ನೀಡಿತ್ತು.
ಇದನ್ನೂ ಓದಿ: 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಬ್ರೇಕ್; ಪರೀಕ್ಷೆಗಳು ಮುಂದೂಡಿಕೆ
ಹೈಕೋರ್ಟ್ ದ್ವಿಸದಸ್ಯ ಪೀಠದ ಮಧ್ಯಂತರ ತೀರ್ಪನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದವು. ಇದನ್ನು ಸುಪ್ರೀಂಕೋರ್ಟ್ ವಿಚಾರಣೆ ಮಾಡಿದ್ದು, ಆದೇಶದಲ್ಲಿ ಮಧ್ಯಂತರ ತೀರ್ಪನ್ನು ರದ್ದುಪಡಿಸಿತ್ತು. ಈ ಹಿನ್ನೆಲೆ ಕೆಲ ದಿನಗಳ ಹಿಂದೆ ನಡೆಯಬೇಕಾಗಿದ್ದ 5, 8 ಮತ್ತು 9ನೇ ತರಗತಿಗಳ SA-2 ಮೌಲ್ಯಾಂಕನ ಪರೀಕ್ಷೆಗಳನ್ನ ಶಿಕ್ಷಣ ಇಲಾಖೆ ಮುಂದಿನ ಆದೇಶದವರೆಗೆ ಮುಂದೂಡುವಂತೆ ಶಾಲೆಗಳಿಗೆ ಸೂಚಿಸಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿಬಿ ಕಾವೇರಿ ಆದೇಶ ಹೊರಡಿಸಿದ್ದರು.
ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕರ್ತವ್ಯಕ್ಕೆ ಪ್ರಾಥಮಿಕ ಶಿಕ್ಷಕರು: ಆದೇಶ ಹಿಂಪಡೆದ ಕೆಎಸ್‌ಇಎಬಿ
5, 8, 9 ಹಾಗೂ 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡುವ ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶವನ್ನು ರೂಪ್ಸ ಹಾಗೂ ಅವರ್ ಸ್ಕೂಲ್ಸ್ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿತ್ತು. ಅದರಂತೆ ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂ, ಪರೀಕ್ಷೆ ನಡೆಸದಂತೆ ಇತ್ತೀಚೆಗೆ ತಡೆ ನೀಡಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:09 pm, Mon, 18 March 24