AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5, 8, 9ನೇ ತರಗತಿ ಪರೀಕ್ಷೆ ಮುಂದೂಡಿಕೆ, ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ

ಶಿಕ್ಷಣ ಇಲಾಖೆ ಮಕ್ಕಳ ಭವಿಷ್ಯಕ್ಕಾಗಿ ಕಲಿಕಾ ಸಾಮರ್ಥ್ಯ ಹೆಚ್ಚಿಸಲು 5,8,9 ಹಾಗೂ 11ನೇ ತರಗತಿಗೆ ಪಬ್ಲಿಕ್ ಮಾದರಿಯ ಮೌಲ್ಯಂಕನ ಎಕ್ಸಾಂ ನಡೆಸಲು ಮುಂದಾಗಿದೆ. ಆದರೆ ಖಾಸಗಿ ಶಾಲೆಗಳ ಒಕ್ಕೂಟ ಮಾತ್ರ ಈ ಪರೀಕ್ಷೆಗಳ ವಿರುದ್ಧ ತಿರಗಿ ಬಿದ್ದು ಕೋರ್ಟ್ ಮೊರೆ ಹೋಗಿತ್ತು. ಸದ್ಯ ಈ ಪರೀಕ್ಷೆಗಳು ಈಗ ಪ್ರತಿಷ್ಠೆಯ ಕಣವಾಗಿದ್ದು ಶಿಕ್ಷಣ ಇಲಾಖೆ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಹಠಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರು ಪರದಾಡುವ ಸ್ಥಿತಿ ಎದುರಾಗಿದೆ.

5, 8, 9ನೇ ತರಗತಿ ಪರೀಕ್ಷೆ ಮುಂದೂಡಿಕೆ, ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ
ವಿಧಾನಸೌಧ
Vinay Kashappanavar
| Edited By: |

Updated on:Mar 13, 2024 | 9:52 AM

Share

ಬೆಂಗಳೂರು, ಮಾರ್ಚ್​.13: ಶಿಕ್ಷಣ ಇಲಾಖೆ ಹಠಕ್ಕೆ ಬಿದ್ದಂತೆ 5,8,9 ಹಾಗೂ 11ನೇ ತರಗತಿಗೆ ಬೋರ್ಡ್ ಮಾದರಿಯ ಎಕ್ಸಂ ನಡೆಸಲು ಮುಂದಾಗಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಖಾಸಗಿ ಶಾಲೆಗಳ ಒಕ್ಕೂಟ ಶಿಕ್ಷಣ ಇಲಾಖೆಯ ನಡೆ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ರೂ ಕಳೆದ ವರ್ಷ ಕೋರ್ಟ್ ಶಿಕ್ಷಣ ಇಲಾಖೆ ಪರವೇ ಬ್ಯಾಟ ಬೀಸಿತ್ತು. ಆದರೆ ಈಗ ಇದನ್ನ ಪ್ರಶ್ನಿಸಿ ಮತ್ತೆ ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಹಾಗೂ ಕುಸುಮಾ ಸಂಘಟನೆ ಹೈಕೋರ್ಟ್ ಮೊರೆ ಹೋಗಿದ್ವು. ಮಕ್ಕಳಿಗೆ ಪಬ್ಲಿಕ್ ಮಾದರಿಯ ಪರೀಕ್ಷೆ ಬೇಡಾ ಅಂತಾ ವಾದ ಶುರು ಮಾಡಿದ್ವು. ಈ ಬಗ್ಗೆ ಹೈಕೋರ್ಟ್ ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ಕಳೆದ ವಾರ ಅಂದ್ರೆ ಬುಧವಾರ ರದ್ದುಪಡಿಸಿ ಆದೇಶ ನೀಡಿತ್ತು. ಆದರೆ ಇದನ್ನ ಪ್ರಶ್ನಿಸಿ ಹೈಕೋರ್ಟ್ ಆದೇಶದ ವಿರುದ್ಧ ಶಿಕ್ಷಣ ಇಲಾಖೆ ಗುರುವಾರ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು ಇದಕ್ಕೆ ಹೈಕೋರ್ಟ್ ಪರೀಕ್ಷೆ ನಡೆಸಲು ಅವಕಾಶ ನೀಡಿತ್ತು .

5,8,9 ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಗಳಿಗೆ ಕೋರ್ಟ್ ತಡೆ

ಹೈ ಕೋರ್ಟ್ ಗ್ರೀನ್ ಸಿಗ್ನಲ್ ಬೆನ್ನಲೆ ಶಿಕ್ಷಣ ಇಲಾಖೆ ಮಾರ್ಚ್ 11ರಿಂದ ಅಂದ್ರೆ ಮೊನ್ನೆಯಿಂದ ಮೌಲ್ಯಾಂಕನ ಪರೀಕ್ಷೆ ನಡೆಸುತ್ತಿದ್ದು ವಿದ್ಯಾರ್ಥಿಗಳು ನಿನ್ನೆ ಹಾಗೂ ಇಂದು ಪರೀಕ್ಷೆ ಬರೆದಿದ್ದಾರೆ. ಆದರೆ ಈ ನಡುವೆ ಹೈಕೋರ್ಟ್ ದ್ವಿಸದಸ್ಯ ಪೀಠದ ಮಧ್ಯಂತರ ತೀರ್ಪನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ನಿನ್ನೆ ಆದೇಶದಲ್ಲಿ ಮಧ್ಯಂತರ ತೀರ್ಪನ್ನು ರದ್ದುಪಡಿಸಿದೆ. ಈ ಹಿನ್ನೆಲೆ ಇಂದು ನಡೆಯಬೇಕಾಗಿದ್ದ 5, 8 ಮತ್ತು 9ನೇ ತರಗತಿಗಳ SA-2 ಮೌಲ್ಯಾಂಕನ ಪರೀಕ್ಷೆಗಳನ್ನ ಶಿಕ್ಷಣ ಇಲಾಖೆ ಮುಂದಿನ ಆದೇಶದವರೆಗೆ ಮುಂದೂಡುವಂತೆ ಶಾಲೆಗಳಿಗೆ ಸೂಚಿಸಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿಬಿ ಕಾವೇರಿ ಆದೇಶ ನೀಡಿದ್ದಾರೆ. ಸದ್ಯ ಈಗ 5, 8, 9ನೇ ತರಗತಿಯ ಮಕ್ಕಳಿಗೆ ರಜೆ ನೀಡಲಾಗಿದೆ.

ಇದನ್ನೂ ಓದಿ: 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ ಹೈಕೋರ್ಟ್ ವಿಭಾಗೀಯ ಪೀಠ!

ಸರ್ಕಾರ ಮತ್ತು ಖಾಸಗಿ ಶಾಲೆಗಳ ನಡುವಿನ ಜಟಾಪಟಿಯ ಕಾರಣಕ್ಕೆ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಗೊಂದಲ ಮಯವಾಗಿದ್ದು ವಿದ್ಯಾರ್ಥಿ ಹಾಗೂ ಪೋಷಕರು ಪರದಾಡುವಂತಾಗಿದೆ. ಒಟ್ನಲ್ಲಿ ಹಠಕ್ಕೆ ಬಿದ್ದಂತೆ ಪಬ್ಲಿಕ್ ಮಾದರಿಯಲ್ಲಿ ಪರೀಕ್ಷೆ ನಡೆಸಲು ಮುಂದಾಗಿರುವ ಶಿಕ್ಷಣ ಇಲಾಖೆಯ ನಡೆ ಮಕ್ಕಳ ಪಾಲಿಗ ಅದೇಷ್ಟು ಉಪಯುಕ್ತವೋ ಗೊತ್ತಿಲ್ಲ. ಆದ್ರೆ ಈಗ ಈ ಪರೀಕ್ಷೆಗಳಿಗೆ ಬ್ರೇಕ್ ಬೀದಿದ್ದು ವಿದ್ಯಾರ್ಥಿಗಳಿಗೆ ಹಾಗು ಪೋಷಕರಿಗೆ ಗೊಂದಲ ಶುರುವಾಗಿದೆ. ಹೀಗಾಗಿ ಸರ್ಕಾರ ಮುಂದೆ ಪರೀಕ್ಷೆಗಳ ವಿಚಾರದಲ್ಲಿ ಯಾವ ಹೆಜ್ಜೆ ಇಡುತ್ತೆ ಅಂತಾ ಕಾದು ನೋಡಬೇಕಿದೆ

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:13 am, Wed, 13 March 24

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​