ದುಬೈನಿಂದ ಬೆಂಗಳೂರಿಗೆ ಬಂದಿಳಿದ 5ನೇ ವಿಮಾನ: 3 ದಿನಗಳಲ್ಲಿ 1,500 ಮಂದಿ ಸುರಕ್ಷಿತವಾಗಿ ವಾಪಸ್

ಪ್ರವಾಸಕ್ಕೆಂದು ಹೋಗಿದ್ದವರು ಅರ್ಧಕ್ಕೆ ವಾಪಸ್ಸಾಗಿದ್ದಾರೆ. ಹನಿಮೂನ್‌ಗೆಂದು ತೆರಳಿದ್ದವರು ಭಯದಲ್ಲೇ ಹಿಂದಿರುಗಿದ್ದಾರೆ. ಇದೆಲ್ಲ ಇಸ್ರೇಲ್-ಇರಾನ್‌ ಯುದ್ಧದ ಕಾರಣ ದುಬೈನಲ್ಲೇ ಬಾಕಿ ಆಗಿ ಇದೀಗ ಬೆಂಗಳೂರಿಗೆ ಸುರಕ್ಷಿತವಾಗಿ ಬಂದವರ ಕಥೆಗಳು. ಒಟ್ಟಾರೆಯಾಗಿ ಕಳೆದ 3 ದಿನಗಳಲ್ಲಿ 1,500 ಮಂದಿ ದುಬೈಯಿಂದ ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸಾಗಿದ್ದಾರೆ.

ದುಬೈನಿಂದ ಬೆಂಗಳೂರಿಗೆ ಬಂದಿಳಿದ 5ನೇ ವಿಮಾನ: 3 ದಿನಗಳಲ್ಲಿ 1,500 ಮಂದಿ ಸುರಕ್ಷಿತವಾಗಿ ವಾಪಸ್
3 ದಿನಗಳಲ್ಲಿ 1,500 ಮಂದಿ ಸುರಕ್ಷಿತವಾಗಿ ವಾಪಸ್
Image Credit source: tv9
Edited By:

Updated on: Mar 05, 2026 | 6:54 AM

ಬೆಂಗಳೂರು, ಮಾರ್ಚ್ 5: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿ ದಾಳಿಯಿಂದ ದುಬೈ, ಅಬುಧಾಬಿ, ಜೆದ್ದಾ, ದೋಹಾ ಸೇರಿ ಹಲವೆಡೆ ವಿಮಾನ ನಿಲ್ದಾಣಗಳು ಬಂದ್ ಆಗಿವೆ. ಅಲ್ಲಿನ ಏರ್‌ಪೋರ್ಟ್‌ಗಳಲ್ಲೇ ಸಿಕ್ಕಿಹಾಕಿರುವ ಆಗಿರುವ ಸಾವಿರಾರು ಜನ ಪ್ರಯಾಣಿಕರನ್ನು ಕಳೆದ ಸೋಮವಾರ ರಾತ್ರಿಯಿಂದ ಎಮಿರೇಟ್ಸ್, ಎತಿಹಾದ್ ಮತ್ತು ಇಂಡಿಗೋ ಏರ್ಲೈನ್ಸ್‌ಗಳ ಮೂಲಕ ಬೆಂಗಳೂರಿಗೆ (Bangalore) ಕರೆತರಲಾಗುತ್ತಿದೆ. ದಿನಕ್ಕೆ ಒಂದು ಅಥವಾ ಎರಡು ವಿಮಾನಗಳು ದುಬೈ ಮತ್ತ ಅಬುಧಾಬಿಯಿಂದ ಬೆಂಗಳೂರಿಗೆ ಟೇಕ್ ಆಫ್ ಆಗುತ್ತಿವೆ. ತವರಿಗೆ ಬರಲು ನಾ ಮುಂದು ತಾ ಮುಂದು ಎಂದು ಪ್ರಯಾಣಿಕರು ಮುಗಿಬೀಳುತ್ತಿದ್ದಾರೆ. ಮಂಗಳವಾರ ರಾತ್ರಿ 5ನೇ ವಿಮಾನದಲ್ಲಿ 246 ಮಂದಿ ತಾಯ್ನಾಡಿಗೆ ಬಂದಿಳಿದಿದ್ದಾರೆ.

ಇನ್ನು ಅಮೆರಿಕಗೆ ತೆರಳುತ್ತಿದ್ದ ಮಹಿಳೆಯೊಬ್ಬರು ಫ್ಲೈಟ್‌ ಕ್ಯಾನ್ಸಲ್‌ ಆಗಿದ್ದರಿಂದ ದುಬೈನಲ್ಲೇ ಸಿಲುಕಿಕೊಂಡಿದ್ದರು. ಇದೀಗ ಯುಎಸ್‌ಗೆ ತೆರಳದೆ ಬೆಂಗಳೂರಿಗೆ ವಾಪಸ್‌ ಆಗಿದ್ದಾರೆ.

ಮತ್ತೊಂದೆಡೆ ಯುಎಸ್‌ನಿಂದ ಬಂದು ದುಬೈನಲ್ಲಿ 2 ದಿನ ಪ್ರವಾಸ ಮುಗಿಸಿ ಬರುವ ಪ್ಲ್ಯಾನ್‌ನಲ್ಲಿದ್ದವರು ವಿಧಿಯಿಲ್ಲದೆ ಬೆಂಗಳೂರಿಗೆ ಮರಳಿದ್ದಾರೆ.

ಇದನ್ನೂ ಓದಿ: ಇರಾನ್- ಇಸ್ರೇಲ್ ಯುದ್ಧದಿಂದ ತೈಲ ಬೆಲೆ ಏರಿಕೆ ಸುದ್ದಿ: ಭಟ್ಕಳದಲ್ಲಿ ಡೀಸೆಲ್, ಪೆಟ್ರೋಲ್​​ಗೆ ಮುಗಿಬಿದ್ದ ಜನ

ಕಳೆದ ಸೋಮವಾರ 2ನೇ ತಾರೀಕು ರಾತ್ರಿ 9.40ಕ್ಕೆ ಬಂದ ಮೊದಲ ಫ್ಲೈಟ್‌ನಲ್ಲಿ 213 ಜನ ವಾಪಸ್ ಆಗಿದ್ದರೆ, 3ನೇ ತಾರೀಕು ಮುಂಜಾನೆ 3 ಗಂಟೆಗೆಬಂದ 2ನೇ ಫ್ಲೈಟ್‌ನಲ್ಲಿ 490 ಜನ, ಹಾಗೇ ಅದೇ ದಿನ ಸಂಜೆ 7 ಗಂಟೆಗೆ ಬಂದ 3ನೇ ಫ್ಲೈಟ್‌ನಲ್ಲಿ 350 ಮಂದಿ, ನಾಲ್ಕನೇ ತಾರೀಕು ಮಧ್ಯರಾತ್ರಿ 1 ಗಂಟೆಗೆ ಬಂದ ಫ್ಲೈಟ್‌ನಲ್ಲಿ 200 ಜನ, ಉಳಿದಂತೆ ಬುಧವಾರ ಸಂಜೆ 7 ಗಂಟೆಗೆ ಬಂದ ವಿಮಾನದಲ್ಲಿ 246 ಪ್ರಯಾಣಿಕರು ವಾಪಸಾಗಿದ್ದು ಈವರೆಗೆ 1500 ಮಂದಿ ಸುರಕ್ಷಿತವಾಗಿ ಮರಳಿದ್ದಾರೆ.

ಸೀಮಿತ ವಿಮಾನಗಳು ದುಬೈನಿಂದ ಬರುತ್ತಿರುವುದರಿಂದ ಇನ್ನೂ ಸಾಕಷ್ಟು ಕನ್ನಡಿಗರು ಅಲ್ಲಿನ ಏರ್‌ಪೋರ್ಟ್‌ಗಳಲ್ಲೇ ಸಿಲುಕಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us