ರಾಯಚೂರು ಜಿಲ್ಲೆಯ ಹಡಗನಹಳ್ಳಿ ಹೋಬಳಿಯಲ್ಲಿ ಸೋಮವಾರ (ಮಾ.04) ರಾಜ್ಯದಲ್ಲಿಯೇ ಗರಿಷ್ಠ 40.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇನ್ನು ಕೆಆರ್ಎಸ್ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮಾರ್ಚ್ 05 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 48.28 | 46.43 | 0 | 1631 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 8.21 | 26.71 | 0 | 980 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 11.47 | 14.05 | 0 | 194 |
ಕೆ.ಆರ್.ಎಸ್ (KRS Dam) | 38.04 | 49.45 | 15.82 | 27.33 | 226 | 749 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 38.21 | 64.48 | 0 | 12 |
ಕಬಿನಿ ಜಲಾಶಯ (Kabini Dam) | 696.13 | 19.52 | 11.49 | 10.13 | 80 | 700 |
ಭದ್ರಾ ಜಲಾಶಯ (Bhadra Dam) | 657.73 | 71.54 | 25.12 | 50.96 | 87 | 400 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 27.17 | 22.71 | 0 | 980 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 13.27 | 21.31 | 45 | 380 |
ವರಾಹಿ ಜಲಾಶಯ (Varahi Dam) | 594.36 | 31.10 | 7.77 | 8.77 | 0 | 571 |
ಹಾರಂಗಿ ಜಲಾಶಯ (Harangi Dam) | 871.38 | 8.50 | 3.37 | 3.24 | 189 | 200 |
ಸೂಫಾ (Supa Dam) | 564.00 | 145.33 | 57.45 | 74.18 | 127 | 2429 |
ರಾಯಚೂರು ಜಿಲ್ಲೆಯ ಬಹುತೇಕ ಸ್ಥಳಗಳು, ಕಲಬುರಗಿ ಜಿಲ್ಲೆಯ ಹಲವು ಸ್ಥಳಗಳು, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳು ಮತ್ತು ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸೋಮವಾರ 38 ಡಿಗ್ರಿ ಸೆಲ್ಸಿಯಸ್ನಿಂದ 40.6 ಡಿಗ್ರಿ ಸೆಲ್ಸಿಯಸ್ ನಡುವೆ ತಾಪಮಾನ ದಾಖಲಾಗಿದೆ.
ರಾಯಚೂರು ಜಿಲ್ಲೆಯ 14 ಸ್ಥಳಗಳು, ಕಲಬುರಗಿ ಜಿಲ್ಲೆಯ 9 ಸ್ಥಳಗಳು, ಬಳ್ಳಾರಿ ಜಿಲ್ಲೆಯ 4 ಸ್ಥಳಗಳು, ಯಾದಗಿರಿ ಜಿಲ್ಲೆಯ ತಲಾ 3 ಸ್ಥಳಗಳು, ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳ ತಲಾ 1 ಸ್ಥಳಗಳಲ್ಲಿ 38 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ.
ಮುಂದಿನ 48 ಗಂಟೆಗಳ ಕಾಲ ತಾಪಮಾನದ ಮುನ್ಸೂಚನೆ: ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಾಗುವ ಸಾಧ್ಯತೆಯಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ