Amarnath Yatra 2023: ಅಮರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮತ್ತು ಗದಗಿನ 6 ಕನ್ನಡಿಗರು ಸೇಫ್​​

ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರ ಭಾರಿ ಮಳೆ ಮತ್ತು ಭೂ ಕುಸಿತದಿಂದಾಗಿ ಅಮರನಾಥ ಯಾತ್ರೆಯನ್ನು ಸ್ಥಗಿತವಾಗಿದೆ. ಭೂ ಕುಸಿತದಿಂದ 80 ಮಂದಿ ಕನ್ನಡಿಗರು ಸಿಲುಕಿದ್ದಾರೆ. ಇದೀಗ ರಕ್ಷಣಾ ಕಾರ್ಯ ಆರಂಭವಾಗಿದೆ.

Amarnath Yatra 2023: ಅಮರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮತ್ತು ಗದಗಿನ 6 ಕನ್ನಡಿಗರು ಸೇಫ್​​
ಚಿಕ್ಕಮಗಳೂರು ಕನ್ನಡಿಗರು
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Rakesh Nayak Manchi

Updated on:Jul 09, 2023 | 3:49 PM

ಚಿಕ್ಕಮಗಳೂರು: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ನಿರಂತರ ಭಾರಿ ಮಳೆ ಮತ್ತು ಭೂ ಕುಸಿತದಿಂದಾಗಿ ಅಮರನಾಥ ಯಾತ್ರೆ(Amarnath Yatra) ಯನ್ನು ಸ್ಥಗಿತವಾಗಿದೆ. ಜಮ್ಮು ಮತ್ತು ಗುಹಾ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಸಾವಿರಾರು ಯಾತ್ರಾರ್ಥಿಗಳು ವಿವಿಧ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ. ಇದರಲ್ಲಿ 80 ಮಂದಿ ಕನ್ನಡಿಗರು (Kannadigas) ಸಿಲುಕಿದ್ದು, ಸುರಕ್ಷಿತವಾಗಿ ಕರ್ನಾಟಕಕ್ಕೆ ಕರೆತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅಲ್ಲದೇ ರಾಜ್ಯದ ಯಾತ್ರಿಗಳ ನೆರವಿಗಾಗಿ ಕಂದಾಯ ಇಲಾಖೆಯ ಐಎಎಸ್ ಅಧಿಕಾರಿ ರಶ್ಮಿ ನಿಯೋಜನೆ ಮಾಡಲಾಗಿದೆ. ಇದೀಗ ಅಮರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮತ್ತು ಗದಗ ಯಾತ್ರಿಗಳನ್ನು ರಕ್ಷಿಸಿದ್ದಾರೆ.

ಚಿಕ್ಕಮಗಳೂರಿನಿಂದ ಕಳೆದ ವಾರ ನಾಲ್ವರು ಅಮರನಾಥ ಯಾತ್ರೆಗೆ ತೆರಳಿದ್ದರು. ಶ್ರೀನಿವಾಸ್ ,ಮಣಿ ಭರತ್, ಚಂದ್ರಶೇಖರ್, ಮನೋಜ್ ಯಾತ್ರಾರ್ಥಿ ಅಮರನಾಥ ಬಳಿಯ ಶೇಷನಾಗ್ ಪ್ರದೇಶದಲ್ಲಿ ಸಿಲುಕಿದ್ದರು. ಇದೀಗ ನಾಲ್ವರು ಸೇಫ್ ಆಗಿರುವ ಬಗ್ಗೆ ವಿಡಿಯೋ ಬಹಿರಂಗವಾಗಿದೆ.

ಇನ್ನು ಗದಗ ನಗರದ ಮೂರು ಕುಟುಂಬಗಳ ತೆರಳಿದ್ದ 23 ಯಾತ್ರಾರ್ಥಿಗಳಲ್ಲಿ ಪಂಚತರಣಿ ಕ್ಯಾಂಪ್​​​ನಲ್ಲಿದ್ದ ಆರು ಜನರನ್ನು ಸೇನೆ ಹೆಲಿಕಾಪ್ಟರ್ ಮೂಲಕ ಏರ್​​ ಲಿಫ್ಟ್ ಮಾಡಲಾಗಿದೆ. ರಕ್ಷಣಾ ಕಾರ್ಯಾಚರಣೆ ಆರಂಭವಾದ ನಂತರ ಉಳಿದ ನೂರಾರು ಅಮರನಾಥ ಯಾತ್ರಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ: ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧ; ಸಿಎಂ ಸಿದ್ದರಾಮಯ್ಯ

ಈ ಯಾತ್ರಾರ್ಥಿಗಳನ್ನು ಟಿವಿ9 ಸಂಪರ್ಕ ಮಾಡಿದ್ದು, ನಾವೆಲ್ಲಾ ಸುರಕ್ಷಿತವಾಗಿದ್ದೇವೆ. ಪಂಚತರಣಿ ಕ್ಯಾಂಪ್​​ನಲ್ಲಿ ತಾತ್ಕಾಲಿಕವಾಗಿ ಆಶ್ರಯ ಪಡೆದಿದ್ದೇವೆ. ಮಳೆ ಕಡಿಮೆಯಾದ ಬಳಿಕ ಹೆಲಿಕಾಪ್ಟರ್ ಮೂಲಕ ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡುವುದಾಗಿ ಹೇಳಿದ್ದಾರೆ ಎಂದ ಓರ್ವ ಯಾತ್ರಿರ್ಥಿ ಹೇಳಿದ್ದಾರೆ. ಅಮರನಾಥ ಯಾತ್ರೆಗೆ ತೆರಳಿರುವ ಬೆಂಗಳೂರಿನ 17 ಯಾತ್ರಾರ್ಥಿಗಳು ಕೂಡ ಸಿಲುಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:16 pm, Sun, 9 July 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್