ದುರ್ಗದಲ್ಲಿ ಕಾರಿನ ಗಾಜು ಒಡೆದು 6 ಲಕ್ಷ ನಗದು ಕಳವು

ಚಿತ್ರದುರ್ಗ: ನಗರದ ಕಾರ್ಪೊರೇಷನ್ ಬ್ಯಾಂಕ್ ಬಳಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು 6 ಲಕ್ಷ ರೂಪಾಯಿ ಕಳವು ಮಾಡಿರುವ ಘಟನೆ ನಡೆದಿದೆ. ಗುತ್ತಿಗೆದಾರ ಪ್ರಕಾಶ್ ಎಂಬುವರು ಬ್ಯಾಂಕ್​ನಿಂದ ಹಣ ಬಿಡಿಸಿಕೊಂಡು ಕಾರಲ್ಲಿಟ್ಟು ಮತ್ತೆ ಬ್ಯಾಂಕ್​ ಒಳಗೆ ತೆರಳಿದ್ದಾರೆ. ಈ ವೇಳೆ ಕಾರಿನ ಗಾಜು ಒಡೆದು 6 ಲಕ್ಷ ಹಣ ಕದ್ದು ಖದೀಮರು ಪರಾರಿಯಾಗಿದ್ದಾರೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಬೆಳಗ್ಗೆಯಷ್ಟೇ ಮಂಗಳೂರಿನಲ್ಲಿ ಬ್ಯಾಂಕ್​ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ 15 ಲಕ್ಷ ರೂ. […]

ದುರ್ಗದಲ್ಲಿ ಕಾರಿನ ಗಾಜು ಒಡೆದು 6 ಲಕ್ಷ ನಗದು ಕಳವು
ಸಾಧು ಶ್ರೀನಾಥ್​

Updated on: Dec 13, 2019 | 5:12 PM

ಚಿತ್ರದುರ್ಗ: ನಗರದ ಕಾರ್ಪೊರೇಷನ್ ಬ್ಯಾಂಕ್ ಬಳಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು 6 ಲಕ್ಷ ರೂಪಾಯಿ ಕಳವು ಮಾಡಿರುವ ಘಟನೆ ನಡೆದಿದೆ.

ಗುತ್ತಿಗೆದಾರ ಪ್ರಕಾಶ್ ಎಂಬುವರು ಬ್ಯಾಂಕ್​ನಿಂದ ಹಣ ಬಿಡಿಸಿಕೊಂಡು ಕಾರಲ್ಲಿಟ್ಟು ಮತ್ತೆ ಬ್ಯಾಂಕ್​ ಒಳಗೆ ತೆರಳಿದ್ದಾರೆ. ಈ ವೇಳೆ ಕಾರಿನ ಗಾಜು ಒಡೆದು 6 ಲಕ್ಷ ಹಣ ಕದ್ದು ಖದೀಮರು ಪರಾರಿಯಾಗಿದ್ದಾರೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಬೆಳಗ್ಗೆಯಷ್ಟೇ ಮಂಗಳೂರಿನಲ್ಲಿ ಬ್ಯಾಂಕ್​ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ 15 ಲಕ್ಷ ರೂ. ದರೋಡೆಯಾಗಿತ್ತು.

Published On - 5:00 pm, Fri, 13 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us