ಬೆಂಗಳೂರು: ಕರ್ನಾಟಕದ 6 ನಕ್ಸಲರು ತಮ್ಮ ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ಶರಣಾಗಿದ್ದರು. 6 ಮಂದಿ ನಕ್ಸಲರಾದ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದ ಲತಾ, ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ಕುತ್ಲೂರು ಸುಂದರಿ, ರಾಯಚೂರು ಮೂಲದ ಮಾರಪ್ಪ ಅರೋಲಿ, ಕೆ. ವಸಂತ, ಟಿ.ಎನ್. ಜೀಶಾ ಹಲವು ವರ್ಷಗಳ ಸಶಸ್ತ್ರ ಹೋರಾಟಕ್ಕೆ ವಿದಾಯ ಹೇಳಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಜನವರಿ 8ರಂದು ಶರಣಾಗಿದ್ದರು.
ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. ಆ 6 ನಕ್ಸಲರ ಪೊಲೀಸ್ ಕಸ್ಟಡಿ ಅವಧಿ ನಾಳೆಗೆ ಅಂತ್ಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಎನ್ಐಎ ಕೋರ್ಟ್ಗೆ ನಕ್ಸಲರನ್ನು ಪೊಲೀಸರು ಹಾಜರುಪಡಿಸಲಿದ್ದಾರೆ. ಬೆಂಗಳೂರಿನ NIA ಕೋರ್ಟ್ಗೆ ನಕ್ಸಲರನ್ನು ಹಾಜರುಪಡಿಸಲಿದ್ದಾರೆ. 7 ದಿನ ಎನ್ಐಎ ಕೋರ್ಟ್ ಚಿಕ್ಕಮಗಳೂರು ಪೊಲೀಸ್ ಕಸ್ಟಡಿಗೆ ನೀಡಿತ್ತು.
ಇದನ್ನೂ ಓದಿ: ಕೋಟೆಕಾರು ಬ್ಯಾಂಕ್ ದರೋಡೆಕೋರನ ಕಾಲಿಗೆ ಪೊಲೀಸ್ ಗುಂಡು, ಕ್ರೈಮ್ ಸ್ಪಾಟ್ನಿಂದ ಟಿವಿ9 ವರದಿ
ನಾಳೆ ಕೇರಳ ಪೊಲೀಸರು ಆ ನಕ್ಸಲರನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡುವ ಸಾಧ್ಯತೆಯಿದೆ. ಎನ್ಐಎ ಅಧಿಕಾರಿಗಳು ಕೂಡ 6 ನಕ್ಸಲರ ವಿಚಾರಣೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ಜಯಣ್ಣ, ಜೀಶಾ, ವಸಂತ್ ಶರಣಾಗಿರುವ ನಕ್ಸಲರು.
ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗತಿಯಾಗಿದ್ದ 6 ನಕ್ಸಲರ ವಿಚಾರಣೆಯನ್ನು 7 ದಿನಗಳ ಕಾಲ ಚಿಕ್ಕಮಗಳೂರು ಪೊಲೀಸರು ನಡೆಸಿದ್ದರು. ಹಳೇ ಕೇಸ್, ಶಸ್ತ್ರಾಸ್ತ್ರಗಳ ಸಂಬಂಧ ಪೊಲೀಸರು ತನಿಖೆ ನಡೆಸಿದ್ದಾರೆ. ನಾಳೆಗೆ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಬೆಂಗಳೂರಿನ NIA ಕೋರ್ಟ್ ಗೆ 6 ನಕ್ಸಲರನ್ನು ಹಾಜರು ಪಡಿಸಲಿದ್ದಾರೆ. ಕೊಪ್ಪ ಡಿವೈಎಸ್ಪಿ ಬಾಲಾಜಿ ಸಿಂಗ್ ನೇತೃತ್ವದ ತಂಡದಿಂದ ತನಿಖೆ ನಡೆಸಲಾಗಿತ್ತು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ