ಕಲಬುರಗಿ: ಅಪಘಾತದಲ್ಲಿ ಗಾಯಗೊಂಡಿದ್ದ 6 ವರ್ಷದ ಬಾಲಕ ವೆಂಟಿಲೇಟರ್ ಸಿಗದೆ ಸಾವು
ಗಂಭೀರವಾಗಿ ಗಾಯಗೊಂಡ ಬಾಲಕ ಪ್ರಜ್ವಲನನ್ನು ಆಸ್ಪತ್ರೆಗೆ ದಾಖಲಿಸಲು ಕುಟುಂಬಸ್ಥರು ಪರದಾಟ ಪಟ್ಟರು. ಆದರೆ ಹಲವು ಆಸ್ಪತ್ರೆಗಳನ್ನು ಸುತ್ತಿದ್ದರೂ ವೆಂಟಿಲೇಟರ್ ಸೌಲಭ್ಯ ಸಿಗಲಿಲ್ಲ. ಚಿಕಿತ್ಸೆ ತೀರಾ ವಿಳಂಬವಾದ ಕಾರಣ ನನ್ನ ಮಗ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಕಣ್ಣೀರಿಡುತ್ತಿದ್ದಾರೆ.
ಕಲಬುರಗಿ: ವೆಂಟಿಲೇಟರ್ ಸಿಗದ ಕಾರಣ ಕಲಬುರಗಿಯಲ್ಲಿ 6 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದರೂ ವೆಂಟಿಲೇಟರ್ ಸೌಲಭ್ಯ ಸಿಗದೆ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಅಪಘಾತದಲ್ಲಿ ಗಾಯಗೊಂಡಿದ್ದ ಬಾಲಕ ತನ್ನ ಕುಟುಂಬದೊಂದಿಗೆ ಬಳ್ಳಾರಿಯಿಂದ ಕಲಬುರಗಿಗೆ ಶರಣಬಸವೇಶ್ವರ ದರ್ಶನಕ್ಕಾಗಿ ಬಂದಿದ್ದ. ದರ್ಶನ ಮುಗಿಸಿ ಮರಳುವಾಗ ಸೆಂಟ್ರಲ್ ಜೈಲ್ ಬಳಿ ಮೂತ್ರ ವಿಸರ್ಜನೆಗಾಗಿ ವಾಹನ ನಿಲ್ಲಿಸಿದ್ದರು. ರಸ್ತೆ ಬದಿ ನಿಂತಿದ್ದ ಬಾಲಕನಿಗೆ ಎದುರಿನಿಂದ ಬಂದ ಇನ್ನೊಂದು ಕಾರು ಡಿಕ್ಕಿ ಹೊಡೆದು ಬಾಲಕಿನಿಗೆ ಗಂಭೀರವಾಗಿ ಗಾಯವಾಗಿತ್ತು.
ಗಂಭೀರವಾಗಿ ಗಾಯಗೊಂಡ ಬಾಲಕ ಪ್ರಜ್ವಲನನ್ನು ಆಸ್ಪತ್ರೆಗೆ ದಾಖಲಿಸಲು ಕುಟುಂಬಸ್ಥರು ಪರದಾಟ ಪಟ್ಟರು. ಆದರೆ ಹಲವು ಆಸ್ಪತ್ರೆಗಳನ್ನು ಸುತ್ತಿದ್ದರೂ ವೆಂಟಿಲೇಟರ್ ಸೌಲಭ್ಯ ಸಿಗಲಿಲ್ಲ. ಚಿಕಿತ್ಸೆ ತೀರಾ ವಿಳಂಬವಾದ ಕಾರಣ ನನ್ನ ಮಗ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಕಣ್ಣೀರಿಡುತ್ತಿದ್ದಾರೆ.
ನಿಂತಿದ್ದ ಟ್ಯಾಂಕರ್ ಲಾರಿಗೆ ಬೈಕ್ ಡಿಕ್ಕಿ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಚಾಮರಾಜನಗರ-ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತೊಳಲಿ ಗ್ರಾಮದಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಸವಾರ ಕೋಡಿನಾಗಸಂದ್ರ ಗ್ರಾಮದ ವಿನಯ್ (27) ಎಂಬಾತ ಸಾವನ್ನಪ್ಪಿದ್ದಾನೆ. ವಿನಯ್ ನಾಗಮಂಗಲದ ಖಾಸಗಿ ಫೈನಾನ್ಸ್ನಲ್ಲಿ ಕೆಲಸ ಮಾಡುತಿದ್ದ. ಕೆಲಸ ಮುಗಿಸಿಕೊಂಡು ವಾಪಸ್ ಊರಿಗೆ ತೆರಳುವ ವೇಳೆ ಅವಘಡ ನಡೆದಿದೆ. ಈ ಪ್ರಕರಣ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ
ಕೊರೊನಾ ಲಸಿಕೆ ಪಡೆದರೂ ಅನಾರೋಗ್ಯ.. ಗಂಟಲು ದ್ರವ ಪರೀಕ್ಷೆಗೆ ಕೊಟ್ಟು ಮನೆಗೆ ಬಂದ ವೃದ್ಧ ಕುಸಿದು ಬಿದ್ದು ಸಾವು
(6 year old boy who was injured in the accident has died without ventilator at Kalaburagi)