ನಾಮಫಲಕಗಳಲ್ಲಿ ಶೇ 60% ಕನ್ನಡ ಕಡ್ಡಾಯಕ್ಕೆ ಸುಗ್ರಿವಾಜ್ಞೆ ಹೊರಡಿಸಿದ ರಾಜ್ಯ ಸರ್ಕಾರ

ಎಲ್ಲಾ ರೀತಿಯ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯಿದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ನಾಮಫಲಕಗಳಲ್ಲಿ ಶೇ 60% ಕನ್ನಡ ಕಡ್ಡಾಯಕ್ಕೆ ಸುಗ್ರಿವಾಜ್ಞೆ ಹೊರಡಿಸಿದ ರಾಜ್ಯ ಸರ್ಕಾರ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್
Follow us
ವಿವೇಕ ಬಿರಾದಾರ
|

Updated on:Jan 07, 2024 | 8:59 AM

ಬೆಂಗಳೂರು, ಜನವರಿ 07: ರಾಜ್ಯದ ಅಂಗಡಿ ಮುಂಗಟ್ಟು ಮತ್ತು ವ್ಯಾಪಾರ ಮಳಿಗೆಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ 60 ರಷ್ಟು ಕನ್ನಡ (Kannada) ಬಳಕೆ ಮಾಡಬೇಕು. ಈ ಸಂಬಂಧ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿದೆ. ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯಿದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರ (Karnataka Government) ನಿರ್ಧರಿಸಿದೆ.

ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ನಿರ್ಧಾರಕ್ಕೆ ರಾಜ್ಯಪಾಲರ ಅನುಮೋದನೆ ಬಿದ್ದ ತಕ್ಷಣದಿಂದ ತಿದ್ದುಪಡಿ ನಿಯಮ ಜಾರಿಯಾಗಲಿದೆ.

ಸಂಪುಟ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) 2023 ವಿಧೇಯಕವು ರಾಜ್ಯದ ಎಲ್ಲಾ ಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರಬೇಕು ಎಂದು ಹೇಳಿದೆ. ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸುವುದರ ಜೊತೆಗೆ, ಅನುಷ್ಠಾನ ಸಮಿತಿಯ ಸಂಚಾಲಕರಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರನ್ನು ಅದರ ಸದಸ್ಯರನ್ನಾಗಿ ನೇಮಿಸಲಾಗುವುದು ಎಂದರು.

ಇದನ್ನೂ ಓದಿ: ಕರ್ನಾಟಕದಲ್ಲಿ ವ್ಯವಹರಿಸಲು ಕನ್ನಡದಲ್ಲಿ ನಾಮಫಲಕ ಹಾಕಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಖಡಕ್ ನುಡಿ

ಫೆಬ್ರವರಿ 2023 ರಲ್ಲಿ ಅಂಗೀಕರಿಸಲಾದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ 2022 ರ ಸೆಕ್ಷನ್ 17(6) ರ ಪ್ರಕಾರ, ರಾಜ್ಯ ಸರ್ಕಾರ ಅಥವಾ ಸ್ಥಳೀಯ ಅಧಿಕಾರಿಗಳು ಅನುಮೋದಿಸಿದ ವಾಣಿಜ್ಯ ಕೈಗಾರಿಕೆಗಳು, ವ್ಯಾಪಾರ ಸಂಸ್ಥೆಗಳು, ಸಲಹಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು ಇತ್ಯಾದಿಗಳ ನಾಮಫಲಕಗಳ ಮೇಲೆ ಶೇ50 ರಷ್ಟು ಕನ್ನಡ ಇರಬೇಕು ಎಂದು ತಿಳಿಸಿತ್ತು. ಇದೀಗ ನಿಯಮಕ್ಕೆ ತಿದ್ದುಪಡಿ ತಂದು ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದರು.

ಕರ್ನಾಟಕ ರಕ್ಷಣಾ ವೇದಿಕೆ (ಕೆಆರ್‌ವಿ) ಸದಸ್ಯರು ಕಳೆದ ವಾರ ಇಂಗ್ಲಿಷ್‌ನಲ್ಲಿ ನಾಮಫಲಕಗಳನ್ನು ಧ್ವಂಸಗೊಳಿಸಿ ನಗರದಾದ್ಯಂತ ಆಘಾತ ತರಂಗಗಳನ್ನು ಕಳುಹಿಸಿದ ನಂತರ ಈ ನಿರ್ಧಾರವು ಬಂದಿದೆ. ಕನ್ನಡ ಹೋರಾಟಗಾರರು ಅವರ ಕೃತ್ಯವನ್ನು “ಜಾಗೃತಿ ಅಭಿಯಾನ” ಎಂದು ಬಣ್ಣಿಸಿದ್ದಾರೆ.

ಕರವೇ ಹೋರಾಟ ಫಲಶೃತಿ

ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯಕ್ಕೆ ಸರ್ಕಾರ ಸೂಚನೆ ನೀಡಿದ ಬೆನ್ನಲ್ಲೇ ಕರ್ನಾಟಕ ರಕ್ಷಣಾ ವೇದಿಕೆ ಕಳೆದ ವರ್ಷ ಡಿಸೆಂಬರ್ 27 ರಂದು ನಾಮಫಲಕ ಮಹಾ ಅಭಿಯಾನ ಕೈಗೊಂಡಿತ್ತು. ಈ ಸಂಬಂಧ ಡಿಸೆಂಬರ್ 27 ರಂದು ಬೆಳಿಗ್ಗೆ 11 ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣ ರಸ್ಥೆಯಿಂದ ರ್ಯಾಲಿ ಶುರುವಾಗಿ ಯಲಹಂಕ, ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್, SP ರೋಡ್, ಬ್ರಿಗೇಡ್ ರೋಡ್, MG ರೋಡ್, ಚಿಕ್ಕ ಪೇಟೆ, ಸಿಟಿ ಮಾರ್ಕೆಟ್, ಅವಿನ್ಯೂ ರೋಡ್ ಮುಖಾಂತರ ಕಬ್ಬನ್ ಪಾರ್ಕ್​​ ವರೆಗೆ ರ್ಯಾಲಿ ಮಾಡಲಾಗಿತ್ತು.

 ರಾಷ್ಟ್ರದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:55 am, Sun, 7 January 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ