ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್: ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಬಹಳ ಗಂಭೀರವಾದ ಆರೋಪವೊಂದನ್ನು ಮಾಡಿದ್ದು, ಅದೀಗ ರಾಜ್ಯ ರಾಜಕೀಯದಲ್ಲಿ ವಾಗ್ಯುದ್ಧಕ್ಕೆ ಕಾರಣವಾಗಿದೆ. ಕುಮಾರಸ್ವಾಮಿ ಆರೋಪ ಸಾಬೀತುಪಡಿಸಿ ತೋರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಕುಮಾರಸ್ವಾಮಿ ಹೇಳಿದ್ದೇನು? ಕಾಂಗ್ರೆಸ್ ತಿರುಗೇಟೇನು ಎಂಬ ವಿವರ ಇಲ್ಲಿದೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್: ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ
ಹೆಚ್​ಡಿ ಕುಮಾರಸ್ವಾಮಿ
Follow us
ಕಿರಣ್​ ಹನಿಯಡ್ಕ
| Updated By: Ganapathi Sharma

Updated on: Jan 06, 2025 | 6:56 AM

ಬೆಂಗಳೂರು, ಜನವರಿ 6: ಅಂದು 40 ಪರ್ಸೆಂಟ್ ಸರ್ಕಾರದ ಆರೋಪ. ಈಗ 60 ಪರ್ಸೆಂಟ್ ಕಮಿಷನ್ ಸರ್ಕಾರದ ಆರೋಪ. ಒಟ್ಟಿನಲ್ಲಿ ರಾಜ್ಯ ರಾಜಕೀಯದಲ್ಲಿ ಮತ್ತೆ ಕಮಿಷನ್ ವಿಚಾರ ಸದ್ದು ಮಾಡುತ್ತಿದೆ. 40 ಪರ್ಸೆಂಟ್ ಕಮಿಷನ್ ಅಸ್ತ್ರ ಹೂಡಿ, ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದ್ದ ಕಾಂಗ್ರೆಸ್‌ ವಿರುದ್ಧ ಈಗ ಹೊಸ ಗಂಭೀರ ಆರೋಪ ಕೇಳಿಬಂದಿದೆ. ಗುತ್ತಿಗೆದಾರನ ಆತ್ಮಹತ್ಯೆ ಜಟಾಪಟಿ ತಾರಕಕ್ಕೇರಿರುವ ಹೊತ್ತಿನಲ್ಲೇ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ 60 ಪರ್ಸೆಂಟ್ ಕಮಿಷನ್ ಕಿಡಿ ಹೊತ್ತಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಶೇ 60 ರಷ್ಟು ಕಮಿಷನ್ ಇದೆ ಎಂದು ಅವರ ಕಾಂಗ್ರೆಸ್ ಗುತ್ತಿಗೆದಾರರೇ ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ವಿಧಾನಸೌಧದಲ್ಲೇ ಮಂತ್ರಿಗಳಿಗೆ ಕಮಿಷನ್ ಹೋಗುತ್ತಿದೆ ಎಂದು ಕಾಂಗ್ರೆಸ್‌ಗೆ ತಿವಿದಿದ್ದಾರೆ.

ಸಚಿವರಿಗೆ ಪರ್ಸೆಂಟೇಜ್ ಕೊಟ್ಟು ಆಮೇಲೆ ಹಣ ರಿಲೀಸ್: ಕುಮಾರಸ್ವಾಮಿ

ಪ್ರತಿ ಇಲಾಖೆಯಲ್ಲೂ ಸಚಿವರಿಗೆ ಮೊದಲು ಪರ್ಸೆಂಟೇಜ್ ಕೊಟ್ಟು ಆಮೇಲೆ ಹಣ ಬಿಡುಗಡೆ ಮಾಡುವ ಕೆಲಸ ಆಗುತ್ತಿದೆ ಎಂದು ಕುಮಾರಸ್ವಾಮಿ ಸ್ಫೋಟಕ ಆರೋಪ ಮಾಡಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ, ಸಾಬೀತು ಮಾಡಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ತಿರುಗೇಟು

ಸರ್ಕಾರದ ವಿರುದ್ಧ 60 ಪರ್ಸೆಂಟ್ ಲಂಚದ ಆರೋಪ ಮಾಡಿರುವ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಆರೋಪ ಸಾಬೀತುಪಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಾಯಿ ಚಪಲಕ್ಕೆ ಮಾತನಾಡುತ್ತಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ: 5 ಗ್ಯಾರಂಟಿಗಳಿಗೆ ನನ್ನ ವಿರೋಧವಿಲ್ಲ, ನಿಲ್ಲಿಸಬೇಡಿ, ಮುಂದುವರೆಸಿ ಎಂದ ಕುಮಾರಸ್ವಾಮಿ

ಒಟ್ಟಿನಲ್ಲಿ, ಅಂದು 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಬಿಜೆಪಿಯನ್ನು ಆರೋಪ ಮಾಡಿದ್ದ ಕಾಂಗ್ರೆಸ್ ವಿರುದ್ಧ ಇದೀಗ 60 ಪರ್ಸೆಂಟ್ ಆರೋಪ ಕೇಳಿಬಂದಿದೆ. ಇದು ಪ್ರಮುಖ ನಾಯಕರ ಮಧ್ಯೆ ಮಾತಿನ ಜಟಾಪಟಿಗೂ ವೇದಿಕೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ