ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಸಾಗಿದೆ. ಈ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ರಾಜ್ಯ ಆರೋಗ್ಯ ಇಲಾಖೆಗೆ ವರದಿಯನ್ನ ಸಲ್ಲಿಸಿದ್ದಾರೆ.
ಖಾಸಗಿ ಆಸ್ಪತ್ರೆಗಳಿಂದ ಸೋಂಕಿತರು ಹೆಚ್ಚಾಗಿ ಬರುತ್ತಿದ್ದಾರೆ. ಕೊರೊನಾ ಸೋಂಕಿತರಿಗೆ ಇತರೆ ಕಾಯಿಲೆಗಳು ಕೂಡ ಇವೆ. ಕಿಡ್ನಿ ಸಮಸ್ಯೆ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಮಧುಮೇಹ ಸೇರಿದಂತೆ ಹಲವು ರೋಗಗಳಿಂದ ಬಳಲುತ್ತಿರುತ್ತಾರೆ. ಅವರು ಕೊನೇ ಕ್ಷಣದಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಬರುತ್ತಿದ್ದಾರೆ.
ಅವರಿಗೆ ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೂ ಅವರು ಕೆಲವೇ ಗಂಟೆಗಳಲ್ಲಿ ಸಾಯುತ್ತಿದ್ದಾರೆ. ಮೃತರ ಪೈಕಿ 60 ವರ್ಷ ಮೇಲ್ಪಟ್ಟ ಸೋಂಕಿತರು ಹೆಚ್ಚಿದ್ದಾರೆ. ಲಾಕ್‌ಡೌನ್ ವೇಳೆ ಸೂಕ್ತ ಚಿಕಿತ್ಸೆ ಪಡೆದಿಲ್ಲವೆಂಬ ಅನುಮಾನ ವ್ಯಕ್ತವಾಗಿದೆ ಎಂದು ವಿಕ್ಟೋರಿಯಾ ವೈದ್ಯರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.