ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 63 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 1,458ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಹಾಸನ ಜಿಲ್ಲೆಯೊಂದರಲ್ಲೇ 21 ಕೊರೊನಾ ಪ್ರಕರಣ ಪತ್ತೆಯಾಗಿದೆ. ಬೀದರ್ 10, ಮಂಡ್ಯ 8, ಕಲಬುರಗಿ 7, ಉಡುಪಿ 6, ಬೆಂಗಳೂರು 4, ತುಮಕೂರು 4, ದಕ್ಷಿಣ ಕನ್ನಡ ಜಿಲ್ಲೆ, ಯಾದಗಿರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 1 ಕೇಸ್ ದಾಖಲಾಗಿದೆ.
1,458 ಸೋಂಕಿತರಲ್ಲಿ 553 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,458 ಕೊರೊನಾ ಸೋಂಕಿತರ ಪೈಕಿ 40 ಮಂದಿ ಮೃತಪಟ್ಟಿದ್ದಾರೆ. ಉಳಿದ 864 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.