ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,458ಕ್ಕೆ ಏರಿಕೆ!

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 63 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 1,458ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಹಾಸನ ಜಿಲ್ಲೆಯೊಂದರಲ್ಲೇ 21 ಕೊರೊನಾ ಪ್ರಕರಣ ಪತ್ತೆಯಾಗಿದೆ. ಬೀದರ್ 10, ಮಂಡ್ಯ 8, ಕಲಬುರಗಿ 7, ಉಡುಪಿ 6, ಬೆಂಗಳೂರು 4, ತುಮಕೂರು 4, ದಕ್ಷಿಣ ಕನ್ನಡ ಜಿಲ್ಲೆ, ಯಾದಗಿರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 1 ಕೇಸ್ ದಾಖಲಾಗಿದೆ. 1,458 ಸೋಂಕಿತರಲ್ಲಿ 553 […]

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,458ಕ್ಕೆ ಏರಿಕೆ!
ಸಾಧು ಶ್ರೀನಾಥ್​

Updated on: May 20, 2020 | 1:26 PM

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 63 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 1,458ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಹಾಸನ ಜಿಲ್ಲೆಯೊಂದರಲ್ಲೇ 21 ಕೊರೊನಾ ಪ್ರಕರಣ ಪತ್ತೆಯಾಗಿದೆ. ಬೀದರ್ 10, ಮಂಡ್ಯ 8, ಕಲಬುರಗಿ 7, ಉಡುಪಿ 6, ಬೆಂಗಳೂರು 4, ತುಮಕೂರು 4, ದಕ್ಷಿಣ ಕನ್ನಡ ಜಿಲ್ಲೆ, ಯಾದಗಿರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 1 ಕೇಸ್ ದಾಖಲಾಗಿದೆ.

1,458 ಸೋಂಕಿತರಲ್ಲಿ 553 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,458 ​ಕೊರೊನಾ ಸೋಂಕಿತರ ಪೈಕಿ 40 ಮಂದಿ ಮೃತಪಟ್ಟಿದ್ದಾರೆ. ಉಳಿದ 864 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 12:45 pm, Wed, 20 May 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us