AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಒಟ್ಟು ಎಷ್ಟು ಆನೆಗಳಿವೆ? ಈ ವರ್ಷ ಗಜರಾಜನಿಗೆ ಬಲಿಯಾದವರ ಸಂಖ್ಯೆ ಎಷ್ಟು?

ಕರ್ನಾಟಕದಲ್ಲಿ ಮಾನವ-ಆನೆ ಸಂಘರ್ಷ ಹೆಚ್ಚುತ್ತಿದ್ದು, ಈ ವರ್ಷ 45 ಜನರು ಆನೆಗಳ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಈ ಸಮಸ್ಯೆ ತೀವ್ರವಾಗಿದೆ. ಇದನ್ನು ತಡೆಯಲು, ಸರ್ಕಾರವು 392 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು 1000 ಕೋಟಿ ರೂಪಾಯಿಗಳ ಯೋಜನೆ ರೂಪಿಸಿದೆ. ಬಂಡೀಪುರದ ರಾತ್ರಿ ಸಂಚಾರದ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಕರ್ನಾಟಕದಲ್ಲಿ ಒಟ್ಟು ಎಷ್ಟು ಆನೆಗಳಿವೆ? ಈ ವರ್ಷ ಗಜರಾಜನಿಗೆ ಬಲಿಯಾದವರ ಸಂಖ್ಯೆ ಎಷ್ಟು?
ಸಚಿವ ಈಶ್ವರ್​ ಖಂಡ್ರೆ
ಹರೀಶ್ ಜಿ.ಆರ್​.
| Edited By: |

Updated on: Apr 04, 2025 | 9:32 PM

Share

ಬೆಂಗಳೂರು, ಏಪ್ರಿಲ್​ 04: ಕರ್ನಾಟಕದಲ್ಲಿ ಸುಮಾರು 6395 ಕಾಡಾನೆಗಳಿವೆ (Elephants). ಕರ್ನಾಟಕದಲ್ಲಿ ಮಾನವ ಕಾಡಾನೆ ಸಂಘರ್ಷ ಹೆಚ್ಚಳವಾಗುತ್ತಿದೆ. ಹಾಸನ (Hassan) ಮತ್ತು ಕೊಡಗು (Kodagu) ಜಿಲ್ಲೆಗಳಲ್ಲೇ ಕಾಡಾನೆ ಹಾವಳಿ ಹೆಚ್ಚಿದೆ. ಕಾಡಾನೆ ದಾಳಿಯಿಂದ ಕಳೆದ ವರ್ಷ 65 ಜನ ಮೃತಪಟ್ಟಿದ್ದರು. ಈ ವರ್ಷ ಕಾಡಾನೆಗಳ ದಾಳಿಗೆ 45 ಜನ ಬಲಿಯಾಗಿದ್ದಾರೆ. ಬೇಲೂರು, ಹಾಸನ ತಾಲೂಕಿನಲ್ಲಿ ಹೆಚ್ಚು ಜನ ಮೃತಪಟ್ಟಿದ್ದಾರೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ (Eshwar Khandre) ಹೇಳಿದರು.

ಕಾಡಾನೆ ಹಾವಳಿ ತಡೆಗೆ ಮೆಗಾ ಪ್ಲಾನ್​

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ಬಿಗಿ ಕ್ರಮ ಕೈಗೊಂಡರೂ ಕಾಡಾನೆ ಹಾವಳಿ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರೈಲ್ವೆ ಬ್ಯಾರಿಕೇಡ್ ಹಾಕಲು ಸರ್ಕಾರ ನಿರ್ಧರಿಸಿದ್ದೇವೆ. 392 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಹಾಕಲಿದ್ದೇವೆ. ವಿಶೇಷವಾಗಿ ಪಶ್ಚಿಮ ಘಟ್ಟಗಳಲ್ಲಿ ಈ ಯೋಜನೆ ಜಾರಿಗೆ ಬರಲಿದೆ. ಈ ಸಂಬಂಧ 1 ಸಾವಿರ ಕೋಟಿ ಕ್ಯಾಂಪಾ ಫಂಡ್ ನೀಡುವಂತೆ ಕೇಂದ್ರ ಸಚಿವರಿಗೆ ನಾವು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಕೋರಿ ಸಂಸದೆ ಪ್ರಿಯಾಂಕಾ ಗಾಂಧಿ ಪತ್ರ ವಿಚಾರವಾಗಿ ಮಾತನಾಡಿದ ಅವರು, ಸದ್ಯ ಯಾವುದೇ ಬದಲಾವಣೆಯಾಗಿಲ್ಲ, ಯಥಾಸ್ಥಿತಿ ಇದೆ. ಸದ್ಯದಲ್ಲೇ ಈ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯುತ್ತೆ ಎಂದು ತಿಳಿಸಿದರು.

ಇದನ್ನೂ ಓದಿ
Image
ಆಪರೇಷನ್ ವಿಕ್ರಾಂತ್ ಸಕ್ಸಸ್: ಕಾಡಾನೆ ಸೆರೆ ಹಿಡಿದಿದ್ದೆ ರೋಚಕ
Image
ಹಾಸನ: ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ
Image
ಕಾಡಾನೆ ದಾಳಿಗೆ ಮತ್ತೋರ್ವ ಮಹಿಳೆ ಸಾವು: 2 ತಿಂಗಳ ಅಂತರದಲ್ಲಿ 4 ಬಲಿ
Image
ಹಾಸನದಲ್ಲಿ ನಿಲ್ಲದ ಮಾನವ-ವನ್ಯಜೀವಿ ಸಂಘರ್ಷ: ಕಾಡಾನೆ ದಾಳಿಗೆ ಯುವಕ ಬಲಿ

ಇದನ್ನೂ ನೋಡಿ: ವಿದೇಶಿ ಪ್ರಜೆಯನ್ನು ಬಲಿ ಪಡೆದ ಕಾಡಾನೆ, ಸೊಂಡಿಲಿನಿಂದ ಎತ್ತಿ ಬಿಸಾಡಿರುವ ವಿಡಿಯೋ ನೋಡಿ

ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ. ಯಾರನ್ನು ಎಲ್ಲಿ ಕೂರಿಸಬೇಕೆಂದು ಹೈಕಮಾಂಡ್​​ಗೆ ಗೊತ್ತಿದೆ. ಹೈಕಮಾಂಡ್ ಏನು ಜವಾಬ್ದಾರಿ ಕೊಡುತ್ತೆ ಅದನ್ನು ನಿರ್ವಹಿಸುತ್ತೇವೆ. ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ನನಗೆ ಆತ್ಮೀಯರು. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ಮುಂದೆಯೂ ನಾವು ಪಕ್ಷ ಸಂಘಟನೆಗಾಗಿ ಕೆಲಸ ಮಾಡುತ್ತೇವೆ. ನಮ್ಮಲ್ಲಿ ಯಾವುದೇ ಪೈಪೋಟಿ ಇಲ್ಲ. ಯಾರೇ ಅಧ್ಯಕ್ಷರಾದರೂ ನಮಗೆ ಖುಷಿ ಇದೆ. ಊಹಾಪೋಹ ಪ್ರಶ್ನೆಗಳಿಗೆ ನಾವು ಉತ್ತರಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್