AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಅಧಿಕಾರಾವಧಿಯಲ್ಲಿ 6764 ಡ್ರಗ್ಸ್ ಪ್ರಕರಣ, 142 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಕರ್ನಾಟಕದಲ್ಲಿ ಡ್ರಗ್ಸ್ ದಂಧೆ ಹೆಗ್ಗಿಲ್ಲೇ ನಡೆಯುತ್ತಿದೆ. ಮೊನ್ನೇ ಅಷ್ಟೇ ಡ್ರಗ್ಸ್ ಮುಕ್ತ ಕರ್ನಾಟಕ' ಅಭಿಯಾನದ ಅಂಗವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ಡ್ರಗ್ಸ್ ನಾಶಪಡಿಸಲಾಯ್ತು. ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಂದರೆ 9 ತಿಂಗಳಲ್ಲಿ ರಾಜ್ಯದಲ್ಲಿ 6764 ಡ್ರಗ್ಸ್ ಪ್ರಕರಣಗಳು ದಾಖಲಾಗಿದ್ದು, ಬರೋಬ್ಬರಿ 142 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ ಪಡಿಸಿಕೊಳ್ಳಲಾಗಿದೆ.

ಕಾಂಗ್ರೆಸ್ ಅಧಿಕಾರಾವಧಿಯಲ್ಲಿ  6764 ಡ್ರಗ್ಸ್ ಪ್ರಕರಣ, 142 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ
TV9 Web
| Edited By: |

Updated on: Feb 13, 2024 | 6:51 PM

Share

ಬೆಂಗಳೂರು, (ಫೆಬ್ರವರಿ 13): ಕರ್ನಾಟಕ ರಾಜ್ಯವನ್ನು ಡ್ರಗ್ಸ್ (Drugs)ಮುಕ್ತ ಕರ್ನಾಟಕವನ್ನಾಗಿಸಲು ನಮ್ಮ ಸರಕಾರ ಸಂಕಲ್ಪ ತೊಟ್ಟಿದ್ದು, ಅದರಂತೆ ಡ್ರಗ್ಸ್ ಮುಕ್ತ ನಾಡನ್ನಾಗಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ 6764 ಪ್ರಕರಣಗಳನ್ನು(Drug Cases )ದಾಖಲಿಸಲಾಗಿದ್ದು, 142 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ ಪಡಿಸಿಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ತಿಳಿಸಿದರು.

ಇಂದು ಸದನದಲ್ಲಿ ಶಾಸಕ ರವಿಕುಮಾರಗೌಡ ಗಣಿಗ ಅವರ ಗಮನಸೆಳೆಯುವ ಪ್ರಶ್ನೆಗೆ ಉತ್ತರಿಸಿದ ಜಿ.ಪರಮೇಶ್ವರ್ , ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಡ್ರಗ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ 6764 ಪ್ರಕರಣಗಳನ್ನು ದಾಖಲಿಸಲಾಗಿದೆ. 9645 ಕೆಜಿ ಗಾಂಜಾ ಹಾಗೂ 233 ಕೆಜಿ ಸಿಂಥೆಟಿಕ್ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಈ ಡ್ರಗ್ಸ್ ಮೌಲ್ಯವೇ 142 ಕೋಟಿ ರೂ.ಗಳಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ವಿಧಾನಸಭೆಯಲ್ಲಿ ಕ್ರಿಕೆಟ್​ ಬೆಟ್ಟಿಂಗ್ ಸುದ್ದು; ಬೆಟ್ಟಿಂಗ್ ಬ್ಯಾನ್​ಗೆ ಪಕ್ಷಾತೀತವಾಗಿ ಒತ್ತಾಯಿಸಿದ ಶಾಸಕರು 

ಡ್ರಗ್ಸ್ ವಿಷಯವನ್ನು ನಮ್ಮ ಸರಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಎಲ್ಲ ಜಿಲ್ಲೆಯ ಎಸ್ಪಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. 102 ಜನ ವಿದೇಶಿಯರ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದೆ. 245 ಜನ ವಿದೇಶಿಯರನ್ನು ಗಡಿಪಾರು ಮಾಡಲಾಗಿದೆ ಎಂದು ಅವರು ವಿವರಿಸಿದರು.

ಬೆಟ್ಟಿಂಗ್ ರಾಜ್ಯಸರಕಾರದಿಂದಲೂ ಕಾನೂನು

ಬೆಟ್ಟಿಂಗ್ ದಂಧೆ ವ್ಯಾಪಕವಾಗಿ ನಡೆಯುತ್ತಿದ್ದು,ಇದನ್ನು ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ-ರಾಜ್ಯ ಸರಕಾರಗಳು ಚರ್ಚಿಸಿ ಕಠಿಣ ಕಾಯ್ದೆ ರೂಪಿಸಬೇಕಾದ ಅಗತ್ಯತೆ ಇದೆ. ರಾಜ್ಯ ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು,ರಾಜ್ಯ ಸರಕಾರದಿಂದಲೂ ಈ ಬೆಟ್ಟಿಂಗ್ ಭೂತಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾನೂನು ರೂಪಿಸಲಾಗುವುದು. ಬೆಟ್ಟಿಂಗ್ ದಂಧೆಕೊರರಿಗೆ ಈಗ ನಮ್ಮಲ್ಲಿ ಲಭ್ಯವಿರುವ ಕಾನೂನುಗಳಡಿ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಎಂದು ಹೇಳಿದ ಗೃಹ ಸಚಿವ ಪರಮೇಶ್ವರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!