ಕೊರೊನಾ ಹೆಚ್ಚಳ ಹಿನ್ನೆಲೆ, ಬೆಂಗಳೂರಿನಲ್ಲಿ 6ರಿಂದ 9ನೇ ತರಗತಿಗಳು ಸ್ಥಗಿತ; ಸಚಿವ ಸುರೇಶ್ ಕುಮಾರ್
ಶಾಲೆಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದರು.
ಬೆಂಗಳೂರು: ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮುಂದಿನ ಆದೇಶ ನೀಡುವವರೆಗೆ 6ರಿಂದ 9ನೇ ತರಗತಿಗಳನ್ನು ಭೌತಿಕವಾಗಿ ಸ್ಥಗಿತಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. 10ನೇ ತರಗತಿಗಳು ಎಂದಿನಂತೆ ಮುಂದುವರಿಯಲಿವೆ. ಆದರೆ, ವಿದ್ಯಾರ್ಥಿಗಳು ಶಾಲೆಗೆ ಬರುವುದು ಕಡ್ಡಾಯವಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ. ರಾಜ್ಯದ ಉಳಿದೆಡೆ ಸದ್ಯ ಈಗ ಜಾರಿಯಲ್ಲಿರುವ ವ್ಯವಸ್ಥೆಯೇ ಮುಂದುವರೆಯಲಿದೆ. ಈ ನೂತನ ಆದೇಶ ಸದ್ಯ ಕೇವಲ ಬೆಂಗಳೂರು ನಗರ ವ್ಯಾಪ್ತಿಗೆ ಮಾತ್ರ ಒಳಪಡಲಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವರು ಹೇಳಿದ್ದಾರೆ.
ಶಾಲೆಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ & ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಕಡ್ಡಾಯ ಶಿಕ್ಷಣ ಕಾಯ್ದೆ ಅವಕಾಶಗಳಡಿಯಲ್ಲಿ ಶಾಲೆಗಳು ನಡೆಸಬೇಕಾದ ಮೌಲ್ಯಾಂಕನ ಪರೀಕ್ಷೆಗಳ ಕುರಿತು ಮುಂದಿನ ದಿನಗಳಲ್ಲಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು. ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಹಿತರಕ್ಷಣೆಗೆ ಬದ್ಧವಾಗಿದೆ. ಹೀಗಾಗಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 6ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರಿನ ಶಾಲೆಗಳಲ್ಲಿ ಹೆಚ್ಚುತ್ತಿದೆ ಸೋಂಕು
ನಗರದಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದ್ದು, ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಿಂದಾಗಿ ಕೆಲವು ಶಾಲೆಗಳನ್ನು ಬಂದ್ ಮಾಡಲಾಗಿದೆ. 10ಕ್ಕೂ ಹೆಚ್ಚು BBMP ಶಾಲೆಗಳು ತಾತ್ಕಾಲಿಕವಾಗಿ ಬಂದ್ ಆಗಿವೆ.
ಬಿಬಿಎಂಪಿ ಶಾಲೆಗಳ 90 ಕ್ಕೂ ಅಧಿಕ ಮಕ್ಕಳಿಗೆ ಸೋಂಕು ಖಚಿತವಾಗಿದೆ. ಹೀಗಾಗಿ ಸೋಂಕು ದೃಢಪಟ್ಟ ಕಾರಣ ತಾತ್ಕಾಲಿಕವಾಗಿ ಶಾಲೆಗಳು ಬಂದ್ ಮಾಡಲಾಗಿದೆ. ಬೆಂಗಳೂರಿನಲ್ಲಿ 10 ಕ್ಕೂ ಅಧಿಕ ಬಿಬಿಎಂಪಿ ಶಾಲೆಗಳು ತಾತ್ಕಾಲಿಕವಾಗಿ ಬಂದ್ ಆಗಿವೆ. ಒಬ್ಬ ವಿದ್ಯಾರ್ಥಿಯಿಂದ ಹಲವರಿಗೆ ಸೋಂಕು ಹಬ್ಬುತ್ತಿದೆ. ಸೋಂಕು ಪತ್ತೆಯಾದ ಶಾಲೆಗಳನ್ನ ಬಿಬಿಎಂಪಿ ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತಿದೆ. ಇನ್ನೂ ಭಾಗಶಃ ಮಕ್ಕಳ ಕೊವಿಡ್ ರಿಪೋರ್ಟ್ ಬಾರದ ಕಾರಣ ಪೋಷಕರಲ್ಲಿ ಆತಂಕ ಮನೆಮಾಡಿದೆ. ಟೆಸ್ಟ್ ಮಾಡಿಸಿ ಸಾಕಷ್ಟು ದಿನಗಳು ಕಳೆದರು ಟೆಸ್ಟ್ ರಿಪೋರ್ಟ್ ಬಂದಿಲ್ಲದೇ ಇರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ: Karnataka Coronavirus Update: ರಾಜ್ಯದಲ್ಲಿಂದು 4,234 ಹೊಸ ಕೊರೊನಾ ಪ್ರಕರಣ ಪತ್ತೆ; 18 ಜನರು ಮೃತ
ಬೆಂಗಳೂರಿನಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ: 10ಕ್ಕೂ ಹೆಚ್ಚು BBMP ಶಾಲೆಗಳು ತಾತ್ಕಾಲಿಕವಾಗಿ ಬಂದ್
Published On - 9:50 pm, Thu, 1 April 21