ಶಿವಮೊಗ್ಗ, ಅಕ್ಟೋಬರ್ 17: ಇತ್ತೀಚೆಗೆ ಉಡುಪಿಯಲ್ಲಿ ಬಾಂಗ್ಲಾ (Bangla) ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಅದರ ಬೆನ್ನಲ್ಲೇ ಇದೀಗ ಶಿವಮೊಗ್ಗ ನಗರದಲ್ಲಿ ಬಾಂಗ್ಲಾದೇಶದ 7 ಪ್ರಜೆಗಳು ಪತ್ತೆ ಆಗಿದ್ದಾರೆ. ಬಾಂಗ್ಲಾ ಪ್ರಜೆಗಳು ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದರು. ಜಯನಗರ ಠಾಣೆ ಪೊಲೀಸರ ಕಾರ್ಯಾಚರಣೆ ವೇಳೆ ಪತ್ತೆ ಆಗಿದ್ದಾರೆ.
ಬಾಂಗ್ಲಾ ಪ್ರಜೆಗಳ ಬಳಿ ಮಂಗಳೂರು ವಿಳಾಸ ಇರುವ ಆಧಾರ್ ಕಾರ್ಡ್ ಪತ್ತೆ ಆಗಿದೆ. ಕೆಲಸಕ್ಕೆ ಮೇಸ್ತ್ರಿ ಕರೆದುಕೊಂಡು ಬಂದಿರುವ ಬಗ್ಗೆ ಮಾಹಿತಿ ಇದೆ. ಬಾಂಗ್ಲಾದೇಶದ 7 ಪ್ರಜೆಗಳನ್ನ ಜಯನಗರ ಠಾಣೆಗೆ ಕರೆದೊಯ್ದ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.
ಇದನ್ನೂ ಓದಿ: ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಉದ್ಯೋಗಕ್ಕೆಂದು ಬಂದಿದ್ದ ಬಾಂಗ್ಲಾದ 9 ಪ್ರಜೆಗಳು ವಶ
ಇತ್ತೀಚೆಗೆ ಕೆಲವು ದಿನಗಳಿಂದ ರಾಜ್ಯದಲ್ಲಿ ಪಾಕಿಸ್ತಾನಿ ಪ್ರಜೆಗಳು ವಾಸ್ತವ್ಯ ಹೂಡಿದ್ದು ಬಯಲಾಗಿತ್ತು. ಇದರ ಬೆನ್ನಲ್ಲೇ ಉಡುಪಿಯ ಮಲ್ಪೆಯಲ್ಲಿ ಬಾಂಗ್ಲಾ ದೇಶೀ ಪ್ರಜೆಗಳು ಇರುವುದು ಪತ್ತೆಯಾಗಿದ್ದು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದ ಮಹಮ್ಮದ್ ಮಾಣಿಕ್ ಎಂಬಾತ ಮೊದಲು ಪೊಲೀಸರಿಗೆ ಸಿಕ್ಕಿಬಿದಿದ್ದರು.
ಇದನ್ನೂ ಓದಿ: ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆ ಪತ್ತೆ: ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ ಎಂದ ಪರಮೇಶ್ವರ್
ಈತನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಮಲ್ಪೆಯಲ್ಲಿ ಇರುವವರ ಬಗ್ಗೆ ಮಾಹಿತಿ ನೀಡಿದ್ದ. ಇಮಿಗ್ರೇಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿದೆ. ಈತನ ವಿಚಾರಣೆ ವೇಳೆ ಹಲವಾರು ಮಲ್ಪೆಯಲ್ಲಿರುವುದು ಪತ್ತೆಯಾಗಿತ್ತು. ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಬಂಧಿತರು. ಇವರು ನಕಲಿ ದಾಖಲಾತಿ ಸೃಷ್ಟಿಸಿ ಮಲ್ಪೆಯಲ್ಲಿ ತಂಗಿದ್ದರು. ಆರೋಪಿಗಳ ಬಳಿ ನಕಲಿ ಆಧಾರ್ ಕಾರ್ಡ್ ಪತ್ತೆಯಾಗಿತ್ತು. ಆರೋಪಿ ಉಸ್ಮಾನ್ ಎಂಬಾತ ಅಕ್ರಮವಾಗಿ ಕರೆತಂದು ಇವರಿಗೆ ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ. ಇವರನ್ನು ವಶಕ್ಕೆ ಪಡೆದಿರುವ ಮಲ್ಪೆ ಪೊಲೀಸರು ವಿಚಾರಣೆ ಮುಂದುವರೆಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.